ಕಾಂಗ್ರೆಸ್ ಬೆಂಬಲಿತರ ಮೇಲೆ ಐಟಿ ದಾಳಿ: ಬಿಜೆಪಿ ಅಧಿಕಾರಿಗಳ ಮೂಲಕ ಹೆದರಿಸುತ್ತಿದೆ ಎಂದ ಡಿಕೆಶಿ

Date:

  • ಐಟಿ ದಾಳಿಗೆ ನಾವು ಹೆದರಲ್ಲ ಎಂದ ಡಿಕೆಶಿ
  • ಬಿಜೆಪಿ ಕಾರ್ಯಕರ್ತರಿಗೆ ಮುಕ್ತ ಆಹ್ವಾನ

ಬಿಜೆಪಿ ನಾಯಕರು ಐಟಿ ಅಧಿಕಾರಗಳ ಮೂಲಕ ಕಾಂಗ್ರೆಸ್ ನಾಯಕರನ್ನು ಮತ್ತು ಇತರೆ ಉದ್ಯಮಿಗಳನ್ನು ಹೆದರಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಡಿಕೆ ಶಿವಕುಮಾರ್ ಅವರು ಐಟಿ ಅಧಿಕಾರಿಗಳ ದಾಳಿ ಕುರಿತು ಮಾತನಾಡಿದರು.

“ಐಟಿ ಅಧಿಕಾರಿಗಳು ಕೇವಲ ಕಾಂಗ್ರೆಸ್ ನಾಯಕರನ್ನು ಮಾತ್ರ ಗುರಿಯಾಗಿಸುತ್ತಿಲ್ಲ. ಜೊತೆಗೆ ನಮ್ಮ ನಾಯಕರ ಜೊತೆಗಿರುವ ಉದ್ದಿಮೆದಾರರನ್ನೂ ಸಹ ಗುರಿ ಮಾಡಿಕೊಂಡಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್ ನಾಯಕರ ಮನೆಗೆ ಬಂದು ಹೋಗುವ ‘ಬ್ಯುಸಿನೆಸ್‌ ಮನ್‌’ಗಳಿಗೆ ಬೆದರಿಕೆ ಹಾಕಲಾಗುತ್ತಿದೆ. ಐಟಿ ಅಧಿಕಾರಿಗಳ ದಾಳಿ ಕುರಿತು ಅವರೆಲ್ಲ ಭಯಬಿದ್ದಿದ್ದಾರೆ. ಆ ಕಾರಣದಿಂದ ಅವರು ನಮ್ಮ ಕರೆಗಳನ್ನೂ ಸ್ವೀಕರಿಸುತ್ತಿಲ್ಲ” ಎಂದು ಡಿಕೆ ಶಿವಕುಮಾರ್ ಹೇಳಿದರು.

“ಐಟಿ ಅಧಿಕಾರಿಗಳ ನಮ್ಮ ಮೇಲಷ್ಟೆ ದಾಳಿ ಮಾಡುತ್ತಿದ್ದಾರೆ. ಬಿಜೆಪಿಯಲ್ಲಿ ಇರುವವರೆಲ್ಲ ಸತ್ಯ ಹರಿಶ್ಚಂದ್ರರೇ. ರಾಜಕೀಯ ಪ್ರೇರಿತ ದಾಳಿಗಳನ್ನು ನಾವು ಹೆದರಿಸುತ್ತೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ: ನನಗೆ ಟಿಕೆಟ್ ತಪ್ಪಲು ಬಿ ಎಲ್ ಸಂತೋಷ್ ಕಾರಣ : ಜಗದೀಶ್ ಶೆಟ್ಟರ್

“ಏಳು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ರಾಹುಲ್ ಗಾಂಧಿ ಅವರನ್ನು ಕ್ಷಣಾರ್ಧದಲ್ಲೇ ಅನರ್ಹ ಮಾಡಿದ ಸಂದರ್ಭದಲ್ಲಿ ಈ ಬಿಜೆಪಿಯವರು ಪ್ರಜಾಪ್ರಭುತ್ವವನ್ನು ಸುಟ್ಟರು” ಎಂದರು.

ಶೆಟ್ಟರ್, ಸವದಿ ಕುರಿತು ಮಾತನಾಡಿದ ಡಿಕೆ ಶಿವಕುಮಾರ್, “ಈ ಮೊದಲು ನಮ್ಮ ಗುರಿ 140 ಸ್ಥಾನಗಳಾಗಿತ್ತು. ಆದರೆ, ಸವದಿ ಮತ್ತು ಶೆಟ್ಟರ್ ಆಗಮನದಿಂದ ನಾವು 150 ಸ್ಥಾನಗಳನ್ನು ಗೆಲ್ಲಲಿದ್ದೇವೆ. ಲಿಂಗಾಯತ ಮತ್ತು ವೀರಶೈವ ಮತ ಬರುತ್ತವೆ” ಎಂದು ಹೇಳಿದರು.

“ಶೆಟ್ಟರ್ ಮತ್ತು ಸವದಿ ಒಪ್ಪಿರುವವುದರಿಂದ ನಾವು ಬಿಜೆಪಿ ಕಾರ್ಯಕರ್ತರಿಗೆ ಮುಕ್ತ ಆಹ್ವಾನ ನೀಡುತ್ತೇವೆ. ನಮ್ಮ ಸಿದ್ಧಾಂತ ಒಪ್ಪಿ ಬರುವ ಎಲ್ಲರಿಗೂ ಸ್ವಾಗತ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...