‘ಎರಡು ಗಂಟೆ ಗಣಿತ ಪಾಠ ಕೇಳಿದಂತಾಯಿತು’; ಮೋದಿ ಭಾಷಣದ ಬಗ್ಗೆ ಪ್ರಿಯಾಂಕಾ ವ್ಯಂಗ್ಯ!

Date:

ಲೋಕಸಭೆಯಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವು ಶಾಲೆಗಳಲ್ಲಿ ಎರಡು ಗಂಟೆಗಳ ಗಣಿತ ಪಾಠ ಕೇಳಿದಂತೆ ಭಾಸವಾಯಿತು. ಅವರು ಮಂಡಿಸಿದ 11 ನಿರ್ಣಯಗಳು ‘ಪೊಳ್ಳಾಗಿವೆ’. ಅವುಗಳು ವಾಟ್ಸ್‌ಆ್ಯಪ್‌ ವಿಶ್ವವಿದ್ಯಾಲಯದಿಂದ ಬಂದಂತಿವೆ ಎಂದು ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ಲೇವಡಿ ಮಾಡಿದ್ದಾರೆ.

ಭಾರತದ ಸಂವಿಧಾನ ಜಾರಿಯಾಗಿ 75 ವರ್ಷಗಳು ಕಳೆದಿವೆ. 75 ವರ್ಷಗಳ ಸಂವಿಧಾನದ ವೈಭವದ ಪಯಣದ ಬಗ್ಗೆ ಲೋಕಸಭೆಯಲ್ಲಿ ಎರಡು ದಿನಗಳ ಚರ್ಚೆ ನಡೆದಿದೆ. ಆದರೆ, ಚರ್ಚೆಯಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜ್‌ನಾಥ್‌ ಸಿಂಗ್ ಹಾಜರಿರಲಿಲ್ಲ. ಈ ಬಗ್ಗೆ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.

ಆದಾಗ್ಯೂ, ಶನಿವಾರ ಲೋಕಸಭೆಯಲ್ಲಿ ಕಾಣಿಸಿಕೊಂಡ ಪ್ರಧಾನಿ ಮೋದಿ 110 ನಿಮಿಷಗಳ ಭಾಷಣ ಮಾಡಿದ್ದಾರೆ. “2014ರಲ್ಲಿ ಅಧಿಕಾರ ವಹಿಸಿಕೊಂಡ ನಂತರ ತಮ್ಮ ಸರ್ಕಾರದ ನೀತಿಗಳು ಮತ್ತು ನಿರ್ಧಾರಗಳು ಸಂವಿಧಾನಕ್ಕೆ ಅನುಗುಣವಾಗಿ ಭಾರತದ ಶಕ್ತಿ ಮತ್ತು ಏಕತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ. ಆದರೆ, ಕಾಂಗ್ರೆಸ್ ‘ರಕ್ತದ ರುಚಿ’ಯನ್ನು ಪದೇ ಪದೇ ನೋಡಲು ಬಯಸುತ್ತಿದೆ” ಎಂದು ಮೋದಿ ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೋದಿ ಭಾಷಣದ ಬಗ್ಗೆ ಟೀಕೆ ಮಾಡಿದ ಪ್ರಿಯಾಂಕಾ, “ಪ್ರಧಾನಿ ಅವರು ಒಂದೇ ಒಂದು ಹೊಸ ವಿಷಯವನ್ನು ಮಾತನಾಡಿಲ್ಲ. ಅವರ ಮಾತುಗಳನ್ನು ಕೇಳಿ ಬೇಸರವಾಗಿದೆ. ಅವರು ಭಾಷಣ ಮಾಡುತ್ತಿದ್ದ ಸಮಯವು ನಾನು ಶಾಲೆಯಲ್ಲಿ ಗಣಿತದ ತರಗತಿಯಲ್ಲಿ ಎರಡು ಅವಧಿಯವರೆಗೆ ಕುತಿಸಿದ್ದೇನೆ ಎಂಬಂತೆ ಅನಿಸಿತು” ಎಂದಿದ್ದಾರೆ.

ಈ ವರದಿ ಓದಿದ್ದೀರಾ?: ಪಡಿತರ ಚೀಟಿ ರದ್ದಾಗಲು ಮೋದಿ ಸರ್ಕಾರವೇ ಮುಖ್ಯ ಕಾರಣ

“ಮೋದಿ ಭಾಷಣವನ್ನು ಕೇಳುವಾಗ ಬಿಜೆಪಿ ಅಧ್ಯಕ್ಷ, ಸಂಸದ ಜೆ.ಪಿ ನಡ್ಡಾ ಅವರೂ ಕೂಡ ಕೈಗಳನ್ನು ಉಜ್ಜುತ್ತಿದ್ದರು. ಆದರೆ, ಅವರನ್ನು ಮೋದಿ ನೋಡಿದ ತಕ್ಷಣ ಅವರು ಗಮನವಿಟ್ಟು ಕೇಳುತ್ತಿರುವಂತೆ ವರ್ತಿಸುತ್ತಿದ್ದರು. ಅಮಿತ್ ಶಾ ಕೂಡ ತಲೆಯ ಮೇಲೆ ಕೈ ಹಾಕಿಕೊಂಡು ಕುಳಿತಿದ್ದರು. ಪಿಯೂಷ್ ಗೋಯಲ್ ಅವರು ನಿದ್ರೆಗೆ ಜಾರುತ್ತಿದ್ದರು. ಇದು ನನಗೆ ಹೊಸ ಅನುಭವವಾಗಿತ್ತು, ಪ್ರಧಾನಿ ಏನಾದರೂ ಹೊಸದನ್ನು ಹೇಳುತ್ತಾರೆಂದು ಕಾಯುತ್ತಿದ್ದೆ. ಆದರೆ, ಅವರು ಹೊಸದಾಗಿ ಏನನ್ನೂ ಹೇಳಿಲ್ಲ” ಎಂದು ಪ್ರಿಯಾಂಕಾ ವಿವರಿಸಿದ್ದಾರೆ.

ಲೋಕಸಭೆಯಲ್ಲಿ ಕಾಂಗ್ರೆಸ್‌ನ ಉಪ ನಾಯಕ ಗೌರವ್ ಗೊಗೊಯ್ ಮಾತನಾಡಿ, “ಭಾರತೀಯ ಸಂವಿಧಾನದ ಬಗ್ಗೆ ವಿಶೇಷ ಚರ್ಚೆಯ ಕಲ್ಪನೆಯನ್ನು ಪ್ರಸ್ತಾಪಿಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಗೆ ಧನ್ಯವಾದ ಹೇಳಬೇಕು. ಕಾಂಗ್ರೆಸ್‌ನ ದೂರದೃಷ್ಟಿಯಿಂದ ಮಾತ್ರವೇ ಇಂತಹ ರೋಮಾಂಚಕ ಚರ್ಚೆ ನಡೆದಿದೆ. ನಾವು ಬಿಜೆಪಿಯೊಂದಿಗೆ ಅನೇಕ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಹೊಂದಿದ್ದೇವೆ. ಆದರೆ ಈ ದೇಶದ ಜನರು ಸಂಸತ್ತಿನಲ್ಲಿ ಭಾರತಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸುವುದನ್ನು ನೋಡಬೇಕಾಗಿದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...