ರಾಜ್ಯ ಬಿಜೆಪಿಗರಿಗೆ ವಿವೇಚನೆಯೇ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತು: ಸಚಿವ ಎಂ ಬಿ ಪಾಟೀಲ್‌ ಕಿಡಿ

Date:

ಕರ್ನಾಟದ ಬಿಜೆಪಿಗರಿಗೆ ವಿವೇಚನೆಯೇ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ನಾನು ಬಾಗ್ಮನೆಯಿಂದ 4 ಕೋಟಿ ರೂ. ಸಾಲ ತೆಗೆದುಕೊಂಡಿದ್ದು 2001ರಲ್ಲಿ; ನೀವು ಬೊಬ್ಬೆ ಹೊಡೆಯುತ್ತಿರುವಂತೆ 2023ರಲ್ಲಿ ಅಲ್ಲ ಎಂದು ಸಚಿವ ಎಂ ಬಿ ಪಾಟೀಲ್ ಕಿಡಿಕಾರಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, “ಚುನಾವಣೆ ಖರ್ಚಿಗಾಗಿಯೂ ನಾನು ಸಾಲ ಮಾಡಿಲ್ಲ. ಅವೆಲ್ಲ ನಮ್ಮ ಕೌಟುಂಬಿಕ ವ್ಯವಹಾರ. ಅನೇಕ ಸಲ ಸಾಲ ಪಡೆದು, ವಾಪಸ್ ಕೂಡ ಕೊಟ್ಟಿದ್ದೇನೆ. ಬಾಕಿಯೂ ಇದೆ” ಎಂದಿದ್ದಾರೆ.

“ಬಿಜೆಪಿಯವರ ಆರೋಪಗಳು ಸತ್ಯಕ್ಕೆ ದೂರವಾದದ್ದು ಹಾಗೂ ಕುಚೇಷ್ಟೆ/ ದುರುದ್ದೇಶದಿಂದ ಕೂಡಿವೆ. ಬಾಗ್ಮನೆ ಸಂಸ್ಥೆ ಮತ್ತು ನಮ್ಮ ಕುಟುಂಬದ ಒಡನಾಟಕ್ಕೂ ಸರ್ಕಾರದ ತೀರ್ಮಾನಕ್ಕೂ ಯಾವ ಸಂಬಂಧವೂ ಇಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2021ರಲ್ಲಿ ಬಿಜೆಪಿ ಸರ್ಕಾರವೇ ತನ್ನ ಆದೇಶದಲ್ಲಿ ನಿಗದಿಪಡಿಸಿದ್ದ ಹಂಚಿಕೆ ದರವನ್ನೇ ವಿಧಿಸಲಾಗಿದೆ. ಇದರಲ್ಲಿ ಯಾವುದೇ ರಿಯಾಯಿತಿ ನೀಡಿಲ್ಲ. ನಿವೇಶನ ಹಂಚಿಕೆಗೆ ಪರಿಗಣಿಸುವ ಮಾನದಂಡ ಸಂಸ್ಥೆಯ ಅರ್ಹತೆ, ಸಾಮರ್ಥ್ಯ, ಅನುಭವ ಇತ್ಯಾದಿಯೇ ಹೊರತು ವ್ಯಕ್ತಿ ನಿಷ್ಟ ಮಾನದಂಡಗಳಲ್ಲ” ಎಂದು ತಿಳಿಸಿದ್ದಾರೆ.

“ವಿವಿಧ ಇಲಾಖೆಗಳ ಉನ್ನತಾಧಿಕಾರಿಗಳನ್ನು ಒಳಗೊಂಡ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯ ಸಾಮೂಹಿಕ ಹಾಗೂ ಒಮ್ಮತದ ತೀರ್ಮಾನವೇ ಹೊರತು ವೈಯಕ್ತಿಕ ನಿರ್ಧಾರವಲ್ಲ. ಅಲ್ಲದೆ, ಬಾಗ್ಮನೆಗೆ 2005, 2006 ಮತ್ತು 2009ರಲ್ಲೆಲ್ಲ ಅಂದಂದಿನ ಸರ್ಕಾರಗಳು ಕೈಗಾರಿಕಾ ಭೂಮಿ ನೀಡಿವೆ. 2009ರಲ್ಲಿ ಇದೇ ಬಾಗ್ಮನೆ ಸಮೂಹದ ಚಂದ್ರಾ ಡೆವಲಪರ್ಸ್ ಗೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ 25 ಎಕರೆ ಭೂಮಿ ನೀಡಿದ್ದಾಗ ನಿಮ್ಮದೇ ಸರ್ಕಾರ ಇತ್ತಲ್ಲವೇ” ಎಂದು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...