ಖಾಸಗಿ ಆಸ್ಪತ್ರೆಗಳಲ್ಲಿ ದರಪಟ್ಟಿ ಪ್ರಕಟಿಸುವುದು ಕಡ್ಡಾಯ: ಸಚಿವ ದಿನೇಶ್‌ ಗುಂಡೂರಾವ್‌

Date:

ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಸುಲಿಗೆ ಮಾಡುತ್ತಿರುವ ಬಗ್ಗೆ ಅನೇಕ ದೂರುಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕೆಲವು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ.

ಖಾಸಗಿ ಆಸ್ಪತ್ರೆಗಳ ಹೊರಭಾಗದಲ್ಲಿ ಇನ್ಮುಂದೆ ದರಪಟ್ಟಿ ಪ್ರಕಟಿಸುವುದು ಕಡ್ಡಾಯ ಮಾಡಲಾಗುವುದು. ದರ ಪಟ್ಟಿ ಪ್ರಕಟಿಸದ ಆಸ್ಪತ್ರೆಗಳ ಪರವಾನಗಿ ರದ್ದುಗೊಳಿಸುವ ಬಗ್ಗೆ ಆಲೋಚಿಸಲಾಗುತ್ತಿದೆ” ಎಂದು ಸಚಿವರು ತಿಳಿಸಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಜ್ವರ, ಕೆಮ್ಮು, ನೆಗಡಿ ಎಂದು ಆಸ್ಪತ್ರೆಗಳಿಗೆ ಚಿಕಿತ್ಸೆಗೆ ತೆರಳಿದರೂ ಸಾವಿರಾರು ರೂಪಾಯಿ ಬಿಲ್ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಸಲ್ಲಿಕೆಯಾಗಿವೆ. ಈ ಬಗ್ಗೆ ಸಾರ್ವಜನಿಕರು ನಮ್ಮ ಇಲಾಖೆ ಹಾಗೂ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ದೂರು ನೀಡಿದ್ದಾರೆ. ಹೀಗಾಗಿ ಕಠಿಣ ಕ್ರಮಕೈಗೊಳ್ಳುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಪಿಎಂಇ ಮುಖಾಂತರ ಅಂಗೀಕೃತವಾದ ಆಸ್ಪತ್ರೆಗಳು ಆವರಣದಲ್ಲಿ ಹಾಗೂ ಹೊರ ಭಾಗದಲ್ಲಿ ಚಿಕಿತ್ಸಾ ದರ ಪಟ್ಟಿಯನ್ನು ಅಳವಡಿಸಬೇಕು. ಯಾವ್ಯಾವ ಚಿಕಿತ್ಸೆಗಳಿಗೆ ಎಷ್ಟು ದರ ಎಂಬ ಪಟ್ಟಿಯನ್ನು ಅಳವಡಿಸಬೇಕು” ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

“ಆದೇಶ ಪಾಲನೆ ಮಾಡದ ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ನೀಡಿ ಸೀಜ್ ಮಾಡುವ ಬಗ್ಗೆಯೂ ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಈಗಾಗಲೇ ಯಾವ ಚಿಕಿತ್ಸೆಗೆ ಎಷ್ಟು ದರ ಎಂಬುದು ನಿಗದಿಯಾಗಿದೆ. ಅದರ ಬಗ್ಗೆ ಆಸ್ಪತ್ರೆಯ ಅವರಣದಲ್ಲಿ ಸಾರ್ವಜನಿಕರಿಗೆ ತೋರುವ ರೀತಿಯಲ್ಲಿ ಬೋರ್ಡ್ ಹಾಕಬೇಕು ಎಂದು ನಿರ್ದೇಶನ ನೀಡಲಾಗಿದೆ” ಎಂದು ಸಚಿವರು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...