ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿ ಕೆ ಸುರೇಶ್‌ ಮೈಯಲ್ಲಿ ಹರಿಯುತ್ತಿಲ್ಲ: ಕೆ ಎಸ್‌ ಈಶ್ವರಪ್ಪಗೆ ಡಿ ಕೆ ಶಿವಕುಮಾರ್ ತಿರುಗೇಟು

Date:

“ಈಶ್ವರಪ್ಪನವರ ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿ ಕೆ ಸುರೇಶ್ ಅವರ ಮೈಯಲ್ಲಿ ಹರಿಯುತ್ತಿಲ್ಲ. ನಮ್ಮ ಸುದ್ದಿಗೆ ಬಂದವರಿಗೆ ಒಂದೊಂದೇ ಹಂತದಲ್ಲಿ ಸೆಟ್ಲ್‌ಮೆಂಟ್ ಆಗಿದೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದರು.

ಬೆಂಗಳೂರು ನಗರದ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಸಭೆ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, “ಅವರಿಗೆ ಕ್ಷಮೆ ಕೇಳಿ ಎಂದು ಯಾರೂ ಹೇಳಿಲ್ಲ. ಸದನದಲ್ಲಿ ನಮ್ಮ ತಂದೆ ಬಗ್ಗೆ ಮಾತನಾಡಿದ್ದರು. ಅದಕ್ಕೆ ಒಂದು ಸುತ್ತಿನ ಸೆಟ್ಲ್‌ಮೆಂಟ್ ಮಾಡಿದ್ದೇವೆ. ಈಶ್ವರಪ್ಪ ಈಗ ಎಲ್ಲಿದ್ದಾರೆ”ಎಂದು ಪ್ರಶ್ನಿಸಿದರು.

“ನಮ್ಮ ವಿಚಾರಕ್ಕೆ ಬಂದವರಿಗೆ ಒಂದೊಂದೇ ಹಂತದಲ್ಲಿ ಸೆಟ್ಲ್‌ಮೆಂಟ್ ಆಗಿದೆ. ಈಶ್ವರಪ್ಪ ಗುಂಡಿಟ್ಟು ಕೊಲ್ಲುವುದಾದರೆ ಕೊಲ್ಲಲಿ. ಅವರ ಹೇಳಿಕೆಗೆ ನಡುಗುವ ರಕ್ತ ಡಿ ಕೆ ಸುರೇಶ್ ಮೈಯಲ್ಲಿ ಹರಿಯುತ್ತಿಲ್ಲ. ನಮ್ಮ ಪೂರ್ವಜರಾದ ಕೆಂಪೇಗೌಡರ ಇತಿಹಾಸ ಗೊತ್ತಿದೆಯೇ? ನಮಗೆ ನಮ್ಮದೇ ಆದ ಇತಿಹಾಸವಿದೆ. ನಾವು ಕಿವಿ ಮೇಲೆ ಹೂವ ಇಟ್ಟುಕೊಂಡು ರಾಜಕಾರಣ ಮಾಡಲು ಬಂದಿಲ್ಲ”ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನರ ಅಭಿಪ್ರಾಯ ಸಂಗ್ರಹಿಸಲು ಪ್ರಣಾಳಿಕೆ ಸಮಿತಿ ಸಭೆ

“ಇಂದು ಕಾಂಗ್ರೆಸ್ ಪಕ್ಷದ ಕೇಂದ್ರ ಪ್ರಣಾಳಿಕೆ ಸಮಿತಿ ಸಭೆ ನಡೆಯುತ್ತಿದೆ. ನಮ್ಮ ಮುಖ್ಯಮಂತ್ರಿಗಳು ಈ ಸಮಿತಿ ಸದಸ್ಯರಾಗಿದ್ದಾರೆ. ಈಗಾಗಲೇ ಈ ಸಮಿತಿ ಅನೇಕ ಸಭೆಗಳನ್ನು ಮಾಡಿದ್ದು ಇಲ್ಲಿನ ಜನರು ಹಾಗೂ ಸಂಘ, ಸಂಸ್ಥೆಗಳ ಅಭಿಪ್ರಾಯ ಸಂಗ್ರಹಿಸಲು ಇಂದು ಸಭೆ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾದ ಪಿ. ಚಿದಂಬರಂ ಅವರು ಕೂಡ ಇಂದಿನ ಸಭೆಗೆ ಆಗಮಿಸಬೇಕಿತ್ತು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಚುನಾವಣಾ ಬಾಂಡ್ ಮತ್ತು ಕಾರ್ಪೊರೇಟ್ ಕಪ್ಪು ಹಣ

“ಇಂದಿನ ಸಭೆಗೆ ಸುಮಾರು 150 ಜನರು ಹಾಗೂ ಸಂಘ ಸಂಸ್ಥೆಗಳಿಗೆ ಆಹ್ವಾನ ನೀಡಿದ್ದೆವು. ಬಹುತೇಕ ಎಲ್ಲರೂ ಸಭೆಗೆ ಆಗಮಿಸಿ ತಮ್ಮ ಸಲಹೆ ನೀಡುತ್ತಿದ್ದಾರೆ. ನಾವು ರಾಷ್ಟ್ರದ ಭದ್ರತೆ, ಎಲ್ಲಾ ವರ್ಗದ ಜನರಿಗೆ ಅನುಕೂಲ ಮಾಡಿಕೊಡುವುದನ್ನು ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆ ಮಾಡುತ್ತೇವೆ. ಈ ಹಿಂದೆ ನಾವು ಮಾಡಿದ ಗ್ಯಾರಂಟಿ ಪ್ರಣಾಳಿಕೆ ದೇಶಕ್ಕೆ ಮಾದರಿಯಾಗಿತ್ತು. ಅದನ್ನು ನಾವು ಕಾರ್ಯರೂಪಕ್ಕೆ ತಂದಿದ್ದೇವೆ. ನಾವು ಕಾರ್ಯರೂಪಕ್ಕೆ ತರಲು ಸಾಧ್ಯವಾಗುವ ಕಾರ್ಯಕ್ರಮಗಳನ್ನು ಮಾತ್ರ ಘೋಷಣೆ ಮಾಡುತ್ತೇವೆ” ಎಂದು ಹೇಳಿದರು.

“ಇಂಡಿಯಾ ಒಕ್ಕೂಟ ಕೂಡ ಸಭೆ ನಡೆಸಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಿದೆ. ಎಲ್ಲರೂ ಒಟ್ಟಾಗಿ ದೇಶದಲ್ಲಿ ಬದಲಾವಣೆ, ಕ್ರಾಂತಿ ತರಲು ಹೋರಾಟ ಮಾಡುತ್ತೇವೆ. ಭಾವನೆ ಬಿಟ್ಟು ಜನರು ಬದುಕಿನತ್ತ ಸಾಗಿಸಿಕೊಂಡು ಹೋಗುವಂತೆ ಮಾಡಲು ನಾವು ಬದ್ದರಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...