ಬೆಂಗಳೂರು | ಕಾಂಗ್ರೆಸ್‌ ಮುಖಂಡ ಕೆಜಿಎಫ್‌ ಬಾಬು ಕಚೇರಿ ಮೇಲೆ ಐಟಿ ದಾಳಿ

Date:

  • ವಿಧಾನಸಭಾ ಚುನಾವಣೆ ಬೆನ್ನಲ್ಲೆ ಕಾಂಗ್ರೆಸ್‌ ಮುಖಂಡರಿಗೆ ಐಟಿ ಶಾಕ್‌
  • ಬೆಂಗಳೂರಿನ 50 ಕಡೆಗಳಲ್ಲಿ ಬುಧವಾರ ಐಟಿ ಅಧಿಕಾರಿಗಳ ದಾಳಿ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳ ಮುನ್ನ ಬೆಂಗಳೂರಿನ ಹಲವು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬುಧವಾರ ಬೆಳಗ್ಗೆ ಕಾಂಗ್ರಸ್‌ ಮುಖಂಡ ಕೆಜಿಎಫ್‌ ಬಾಬುಗೆ ಐಟಿ ಅಧಿಕಾರಿಗಳು ಶಾಕ್‌ ನೀಡಿದ್ದಾರೆ.

ಬೆಂಗಳೂರಿನ ಹೈಗ್ರೌಂಡ್ಸ್‌ ಬಳಿಯಿರುವ ಕೆಜಿಎಫ್‌ ಬಾಬು ನಿವಾಸದ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಕೆಜಿಎಫ್‌ ಬಾಬುಗೆ ಸೇರಿದ ರಕ್ಸಾನಾ ಪ್ಯಾಲೇಸ್‌ ಹಾಗೂ ಕಚೇರಿಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಬುಧವಾರ ಬೆಳಗ್ಗೆಯಿಂದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಯ ತೆರಿಗೆ ವಂಚನೆ ಹಿನ್ನೆಲೆ ಐಟಿ ಅಧಿಕಾರಿಗಳು ಕೆಜಿಎಫ್ ಬಾಬು ಸೇರಿ ಹಲವು ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.

ರಾಜಧಾನಿ ಬೆಂಗಳೂರಿನ 50 ಕಡೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆಯನೂರು ಮಂಜುನಾಥ್‌ ರಾಜೀನಾಮೆ ಘೋಷಣೆ; ಜೆಡಿಎಸ್‌ನಿಂದ ಸ್ಪರ್ಧೆ ಸಾಧ್ಯತೆ

ಈ ಹಿಂದೆಯೂ ಕೂಡ ಕೆಜಿಎಫ್‌ ಬಾಬು ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆದಾಯ ತೆರಿಗೆ ವಂಚನೆಯಡಿ, ಕಳೆದ ವರ್ಷ ಮೇ 28ರಂದು ಐಟಿ ಅಧಿಕಾರಿಗಳಿಂದ ದಾಳಿ ನಡೆದಿತ್ತು.

ಕೆಜಿಎಫ್ ಬಾಬು ಒಡೆತನದ ರುಕ್ಸಾನ ಪ್ಯಾಲೇಸ್ ಹಾಗೂ ಕಚೇರಿಯ ಮೇಲೂ ದಾಳಿ ನಡೆಸಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದರು. ಪರಿಷತ್‌ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಕೆಜಿಎಫ್‌ ಬಾಬು 1,741 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...