ಜೆಡಿಎಸ್‌ನಿಂದ ‘ಸೆಕ್ಯುಲರ್’ ಪದ ತೆಗೆಯುವುದು ಸೂಕ್ತ: ಸಚಿವ ಝಮೀರ್ ಅಹಮದ್ ಟಾಂಗ್

Date:

  • ಬಿಜೆಪಿಯೊಂದಿಗೆ ಅಧಿಕೃತವಾಗಿ ಮೈತ್ರಿ ಘೋಷಿಸಿದ ಜಾತ್ಯತೀತ ಜನತಾದಳ
  • ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಒಂದಂಕೆಗೆ ಇಳಿಯಲಿದೆ ಎಂದ ಸಚಿವ

ಬಿಜೆಪಿ -ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲ ಆಗಲಿದ್ದು, ಇದೀಗ ಜೆಡಿಎಸ್ ಬಿಜೆಪಿ ಬಿ ಟೀಮ್ ಎಂಬುದು ಸಾಬೀತಾಗಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಜೆಡಿಎಸ್, ಬಿಜೆಪಿಯೊಂದಿಗೆ ಅಧಿಕೃತವಾಗಿ ಮೈತ್ರಿ ಘೋಷಿಸಿದ ಬಳಿಕ ಮಾತನಾಡಿದ ಅವರು ಜೆಡಿಎಸ್ ಇನ್ನು ಮುಂದೆ ಜಾತ್ಯತೀತ ಪದ ತೆಗೆಯುವುದು ಸೂಕ್ತ ಎಂದು ಹೇಳಿದರು.

2019ರಲ್ಲಿ ಜೆಡಿಎಸ್ ಜತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿತ್ತು. ನಾವು ಪ್ರತ್ಯೇಕವಾಗಿ ಹೋಗಿದ್ದರೆ ಕನಿಷ್ಠ ಹತ್ತು ಸ್ಥಾನ ಗೆಲ್ಲುತ್ತಿದ್ದೆವು. ಜೆಡಿಎಸ್ ಜತೆ ಹೋಗಿದ್ದಕ್ಕೆ ಒಂದಂಕೆಗೆ ಇಳಿದೆವು. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರ ಸ್ಥಿತಿಯೂ ಇದೇ ಆಗಲಿದೆ ಎಂದು ವ್ಯಂಗ್ಯವಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈತ್ರಿ ಮಾತುಕತೆಗೆ ರಾಜ್ಯ ಜೆಡಿಎಸ್ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರನ್ನು ಕರೆದಿಲ್ಲ. ಅವರು ಮುಸ್ಲಿಂ ಸಮುದಾಯಕ್ಕೆ ಸೇರಿದ್ದಾರೆ ಎಂದು ಕರೆದಿಲ್ಲವೇ ಎಂದು ಸಚಿವರು ಪ್ರಶ್ನಿಸಿದ್ದಾರೆ.

ದೇವೇಗೌಡರ ಬಗ್ಗೆ ನನಗೆ ಅಪಾರ ಗೌರವ ಇದೆ. ಹಿಂದೆ ಬಿಜೆಪಿ ಜತೆ ಸೇರಿ ಸರ್ಕಾರ ಮಾಡಿದ್ದಕ್ಕೆ ನನ್ನ ಒಪ್ಪಿಗೆ ಇರಲಿಲ್ಲ ಎಂದು ಹೇಳಿದ್ದ ಮಾಜಿ ಪ್ರಧಾನಿ ದೇವೇಗೌಡರು ಇದೀಗ ಏನು ಹೇಳುತ್ತಾರೆ. ಮೈತ್ರಿ ಬಗ್ಗೆ ಅವರು ಮೌನ ವಹಿಸಿರುವುದು ಯಾಕೆ ಎಂದು ಝಮೀರ್ ಅಹಮದ್ ಖಾನ್ ಕೇಳಿದರು.

ಜೆಡಿಎಸ್ -ಬಿಜೆಪಿ ಮೈತ್ರಿಯಿಂದ ಇದೀಗ ಕಾಂಗ್ರೆಸ್ ಪಕ್ಷ ಒಂದೇ ಜಾತ್ಯತೀತ ಎಂಬುದು ಸಾಬೀತಾಗಿದೆ. ಯಾವುದೇ ಸಿದ್ಧಾಂತ ಇಲ್ಲದ ಮೈತ್ರಿ ಎಂಬುದು ರಾಜ್ಯದ ಜನತೆಗೂ ಸ್ಪಷ್ಟತೆ ಸಿಕ್ಕಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ಕಾಂಗ್ರೆಸ್‌ಗೆ ಲಾಭ ಆಗಲಿದೆ ಎಂದು ಸಚಿವ ಝಮೀರ್ ಭವಿಷ್ಯ ನುಡಿದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...