ಜೆ-ಕೆ | ಬಿಜೆಪಿ ಸೇರುತ್ತಾರಾ ಮಾಜಿ ಡಿಸಿಎಂ ಮುಜಾಫರ್ ಬೇಗ್?

Date:

ಜಮ್ಮು ಮತ್ತು ಕಾಶ್ಮೀರದ ಹಿರಿಯ ರಾಜಕಾರಣಿ ಮತ್ತು ಮಾಜಿ ಉಪಮುಖ್ಯಮಂತ್ರಿ ಮುಜಾಫರ್ ಹುಸೇನ್ ಬೇಗ್ ಅವರು ಪಿಡಿಪಿ ತೊರೆದಿದ್ದಾರೆ. ಈ ಬೆನ್ನಲ್ಲೇ ಅವರು ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳು ಹೆಚ್ಚಾಗಿವೆ. ಅಲ್ಲದೆ, ಅವರು ಮಂಗಳವಾರ ಜಮ್ಮುವಿನಲ್ಲಿ ನಡೆದ ಪ್ರಧಾನಿ ಮೋದಿ ರ್‍ಯಾಲಿಯಲ್ಲಿ ಭಾಗವಹಿಸಿದ್ದು, ಊಹಾಪೋಹಗಳಿಗೆ ಮತ್ತಷ್ಟು ಪುಷ್ಟಿ ನೀಡಿದೆ.

ಮೋದಿ ಅವರ ರ್‍ಯಾಲಿಯಲ್ಲಿ ಭಾವಹಿಸಿದ್ದು ಮಾತ್ರವಲ್ಲದೆ, ಮೋದಿಯನ್ನು ಬೇಗ್ ಹೊಗಳಿದ್ದಾರೆ. “ಕಳೆದ 10 ವರ್ಷಗಳಲ್ಲಿ ಸಾಕಷ್ಟು ಪ್ರಗತಿ ಸಾಧಿಸುವ ಮೂಲಕ, ಭಾರತದ ನಕ್ಷೆಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ದೊಡ್ಡ ಸ್ಥಾನವನ್ನು ನೀಡಲು ಪ್ರಧಾನಿ ಬಯಸುತ್ತಾರೆ. ನಮ್ಮ ವೈಯಕ್ತಿಕ ಹಿತಾಸಕ್ತಿಗಳನ್ನು ಮೀರುವುದು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳಲ್ಲಿ ಅವರನ್ನು ಬೆಂಬಲಿಸುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಹೇಳಿದ್ದಾರೆ.

“ಮೋದಿಯವರ ಅಭಿವೃದ್ಧಿ ಕಾರ್ಯಸೂಚಿಯಿಂದ ನಾನು ಪ್ರಭಾವಿತನಾಗಿದ್ದೇನೆ. ಅವರು ಪಹಾರಿ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡುವ ಭರವಸೆಯನ್ನು ಈಡೇರಿಸಿದ್ದಾರೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸತ್ತಿನ ಚುನಾವಣೆಯ ನಂತರ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ ಎಂದು ನೀವು ಭಾವಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಬೇಗ್, “ಅವರು ಬಯಸಿದಷ್ಟು ಕಾಲ ಯಾರೂ ಅವರ ಸ್ಥಾನವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಪ್ರತಿಯೊಬ್ಬರನ್ನು ಮತ್ತು ಪ್ರತಿ ಸಮುದಾಯವನ್ನು ಮೋದಿ ಅವರು ಜೊತೆಗೆ ಕರೆದುಕೊಂಡು ಹೋಗಿದ್ದಾರೆ ಎಂದ ಬೇಗ್, “ಹಿಂದುಗಳು ಮತ್ತು ಮುಸ್ಲಿಮರ ನಡುವೆ ವ್ಯತ್ಯಾಸವಿದೆ ಎಂದು ಯಾರಾದರೂ ಹೇಳಿದರೆ, ಅದು ಅತ್ಯಂತ ಕ್ರೂರ ಸಂಗತಿ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...