ಸಂಧ್ಯಾಕಾಲದಲ್ಲಿ ಜಗದೀಶ್ ಶೆಟ್ಟರ್ ‘ರಾಜಕೀಯ ಆತ್ಮಹತ್ಯೆ’ : ಸಚಿವ ದಿನೇಶ್ ಗುಂಡೂರಾವ್

Date:

ಯಾವುದೇ ಸುಳಿವು ನೀಡದೆ ಕಾಂಗ್ರೆಸ್‌ನ ವಿಧಾನ ಪರಿಷತ್ ಸದಸ್ಯರಾಗಿದ್ದ ಜಗದೀಶ್ ಶೆಟ್ಟರ್ ಅವರು ದಿಢೀರಾಗಿ ದೆಹಲಿಯಲ್ಲಿ ಮತ್ತೆ ಬಿಜೆಪಿಗೆ ಸೇರಿಕೊಂಡ ಬಳಿಕ ರಾಜ್ಯ ರಾಜಕೀಯದಲ್ಲಿ ಬಹಳಷ್ಟು ಬೆಳವಣಿಗೆಗಳಾಗುತ್ತಿವೆ. ಬಿಜೆಪಿ ಪಾಳಯ ಹರ್ಷದಲ್ಲಿದ್ದರೆ, ಕಾಂಗ್ರೆಸ್ ಪಾಳಯ ಶಾಕ್‌ಗೊಳಗಾಗಿದೆ.

ಜಗದೀಶ್ ಶೆಟ್ಟರ್ ಅವರು ಮರಳಿ ಬಿಜೆಪಿಗೆ ಸೇರಿಕೊಂಡ ಬಗ್ಗೆ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, “ಆತ್ಮಗೌರವ ಕಳೆದುಕೊಂಡ ಬಳಿಕವೂ ಬಿಜೆಪಿಗೆ ಮರಳಿ ಹೋಗುವ ದುಸ್ಥಿತಿ ಶೆಟ್ಟರ್ ಅವರಿಗೆ ಬರಬಾರದಿತ್ತು. ಸಂಧ್ಯಾಕಾಲದಲ್ಲಿ ಜಗದೀಶ್ ಶೆಟ್ಟರ್ ‘ರಾಜಕೀಯ ಆತ್ಮಹತ್ಯೆ’ ಮಾಡಿಕೊಂಡಿದ್ದಾರೆ” ಎಂದು ಟಾಂಗ್ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಗದೀಶ್ ಶೆಟ್ಟರ್ ಬಿಜೆಪಿಯಿಂದ ಅವಮಾನಿತರಾಗಿ ರಾಜಕೀಯ ಆಶ್ರಯ ಅರಸಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದರು. ನಮ್ಮ ಪಕ್ಷ ಅವರಿಗೆ ವಿಧಾನಸಭಾ ಟಿಕೆಟ್ ನೀಡಿತ್ತು. ಚುನಾವಣೆಯಲ್ಲಿ ಸೋತರೂ ವಿಧಾನ ಪರಿಷತ್‌ಗೆ ಆಯ್ಕೆ ಮಾಡಿತ್ತು‌. ಇದಕ್ಕಿಂತ ಹೆಚ್ಚಿನ ಗೌರವ ಕೊಡಲು ಇನ್ನೇನು ಸಾಧ್ಯ?” ಎಂದು ಸಚಿವರು ಕೇಳಿದ್ದಾರೆ.

“ಈಗ ಅವಮಾನ ಮಾಡಿದ ಪಕ್ಷಕ್ಕೇ‌ ಮರಳಿ ಹೋಗಿದ್ದಾರೆ‌. ಶೆಟ್ಟರ್‌ ಆತ್ಮಗೌರವ ಕಳೆದುಕೊಂಡು ಬಿಜೆಪಿಗೆ ಮರಳಿ ಹೋಗುವ ದುಸ್ಥಿತಿ ಬರಬಾರದಿತ್ತು” ಎಂದು ಗುಂಡೂರಾವ್ ಟ್ವೀಟಿಸಿದ್ದಾರೆ.

ಇದನ್ನು ಓದಿದ್ದೀರಾ? ಮರ್ಯಾದಾಗೇಡು ಹತ್ಯೆ | ತಂಗಿಯನ್ನೇ ಕೆರೆಗೆ ತಳ್ಳಿ ಹತ್ಯೆಗೈದ ಕೋಮುವಾದಿ ಸಹೋದರ

“ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವ ನಷ್ಟವೂ ಇಲ್ಲ. ಶೆಟ್ಟರ್‌ರಂತಹ ಸಾವಿರಾರು ನಾಯಕರನ್ನು ಸೃಷ್ಟಿಸುವ ತಾಕತ್ತು ಕಾಂಗ್ರೆಸ್‌ಗಿದೆ. ಶೆಟ್ಟರ್ ಹಿರಿಯ ರಾಜಕಾರಣಿ. ಆದರೆ ರಾಜಕೀಯ ಸಂಧ್ಯಾಕಾಲದಲ್ಲಿ ತಮ್ಮನ್ನು ಅವಮಾನಿಸಿದ ಪಕ್ಷಕ್ಕೆ ಮರಳಿ ಸೇರಿಕೊಳ್ಳುವ ಮೂಲಕ ಶೆಟ್ಟರ್ ರಾಜಕೀಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ” ಎಂದು ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...