ವೈಎಸ್‌ಆರ್‌ಸಿಪಿ ನಾಯಕನಿಂದ ಟಿಡಿಪಿ ಶಾಸಕಿಗೆ ಲೈಂಗಿಕ ನಿಂದನೆ: ಮಹಿಳಾ ಆಯೋಗ ಖಂಡನೆ

Date:

ವೈಎಸ್‌ಆರ್‌ ಕಾಂಗ್ರೆಸ್ ಪಕ್ಷ(YSRCP) ನಾಯಕ ಮತ್ತು ಮಾಜಿ ಶಾಸಕ ನಲ್ಲಾಪುರರೆಡ್ಡಿ ಪ್ರಸನ್ನ ಕುಮಾರ್ ರೆಡ್ಡಿ ಅವರು ಟಿಡಿಪಿ ಶಾಸಕಿ ವೆಮಿರೆಡ್ಡಿ ಪ್ರಶಾಂತಿ ರೆಡ್ಡಿ ಅವರ ಲೈಂಗಿಕ ನಿಂದನೆ ಮಾಡಿದ್ದು ಸದ್ಯ ವಿವಾದ ಸೃಷ್ಟಿಯಾಗಿದೆ. ಜುಲೈ 7ರಂದು ನೆಲ್ಲೂರು ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಾಜಿ ಶಾಸಕ ನಲ್ಲಾಪುರರೆಡ್ಡಿ ಅಸಭ್ಯ ಮತ್ತು ಸ್ತ್ರೀದ್ವೇಷದ ಹೇಳಿಕೆ ನೀಡಿದ್ದಾರೆ.

“ಪ್ರಶಾಂತಿ ರೆಡ್ಡಿ ತನ್ನ ಪತಿ, ಸಂಸದ ವೆಮಿರೆಡ್ಡಿ ಪ್ರಭಾಕರ್ ರೆಡ್ಡಿ ಅವರಿಗೆ ಬ್ಲಾಕ್ ಮೇಲ್ ಮಾಡಿ ಮದುವೆಯಾಗಿದ್ದಾರೆ. ಮದುವೆಯ ನಂತರ ಅವರು ನಿದ್ರಿಸುವಾಗ ವಿಷ ನೀಡಬಹುದು. ಪ್ರಶಾಂತಿ ಅವರನ್ನು ಮದುವೆಯಾಗಿರುವುದು ಪ್ರಭಾಕರ್ ರೆಡ್ಡಿ ಅವರು ಬಾವಿಗೆ ಬಿದ್ದಂತೆ” ಎಂದು ಟೀಕಿಸಿದ್ದಾರೆ.

ಇದನ್ನು ಓದಿದ್ದೀರಾ? ವಿಮಾನ ಹಾರಿಸಲು ಯೋಗ್ಯನಲ್ಲ, ಚಪ್ಪಲಿ ಹೊಲಿ: ಇಂಡಿಗೋದಲ್ಲಿ ದಲಿತ ಪೈಲಟ್‌ಗೆ ಜಾತಿ ನಿಂದನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉತ್ತರ ಭಾರತದ ಜನರಿಗೆ ಆಕೆ ಏನು ಎಂಬುದು ತಿಳಿದಿದ್ದಾರೆ” ಎಂದೂ ವ್ಯಂಗ್ಯವಾಗಿ ನುಡಿದಿದ್ದಾರೆ. ಈ ವೇಳೆ ವೇದಿಕೆಯಲ್ಲಿದ್ದ YSRCP ಬೆಂಬಲಿಗರು ನಕ್ಕು, ಚಪ್ಪಾಳೆ ತಟ್ಟಿದ್ದಾರೆ.

ಈ ಸಂಬಂಧ ವೇಮಿರೆಡ್ಡಿ ಪ್ರಶಾಂತಿ ರೆಡ್ಡಿ ಪೊಲೀಸ್ ವರಿಷ್ಠಾಧಿಕಾರಿಗೆ ಔಪಚಾರಿಕ ದೂರು ನೀಡಿದ್ದಾರೆ. ನಲ್ಲಾಪುರರೆಡ್ಡಿ ವಿರುದ್ಧ ಕ್ರಿಮಿನಲ್ ಪಿತೂರಿ, ಕ್ರಿಮಿನಲ್ ಮಾನನಷ್ಟ, ಕೆಣಕುವುದು ಮತ್ತು ಸಾರ್ವಜನಿಕ ದುಷ್ಕೃತ್ಯವನ್ನು ಹರಡುವುದು ದೂರನ್ನು ನೀಡಿದ್ದಾರೆ.

ದೂರಿನಲ್ಲಿ ಲೈಂಗಿಕ ಕಿರುಕುಳ, ಮಾನನಷ್ಟ, ಅಶ್ಲೀಲ ಸನ್ನೆಗಳು ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಐಪಿಸಿ ಮತ್ತು ಭಾರತೀಯ ನ್ಯಾಯ ಸಂಹಿತೆಯ ಹಲವು ಸೆಕ್ಷನ್‌ಗಳಡಿ ದೂರು ದಾಖಲಾಗಿದೆ. ಅವರು ಘಟನೆಯ ವಿಡಿಯೋವನ್ನು ಸಹ ಹೊಂದಿದ್ದಾರೆ.

ಪ್ರಸನ್ನ ಕೋವೂರಿನಿಂದ ಐದು ಬಾರಿ ಶಾಸಕರಾಗಿದ್ದಾರೆ. ಈ ಹಿಂದೆ ಟಿಡಿಪಿಯಿಂದ ಮತ್ತು ನಂತರ ವೈಎಸ್‌ಆರ್‌ಸಿಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ. 2024ರಲ್ಲಿ ಪ್ರಶಾಂತಿ ರೆಡ್ಡಿ ವಿರುದ್ಧ ಚುನಾವಣೆಯಲ್ಲಿ ಸೋತರು.

ಟಿಡಿಪಿ, ಜನ ಸೇನಾ ಮತ್ತು ಆಂಧ್ರಪ್ರದೇಶ ಮಹಿಳಾ ಆಯೋಗದ ನಾಯಕರು ಪ್ರಸನ್ನ ಕುಮಾರ್ ರೆಡ್ಡಿ ಹೇಳಿಕೆಯನ್ನು ಖಂಡಿಸಿದೆ. ಈ ಹೇಳಿಕೆಗಳನ್ನು ಸಮಾಜಕ್ಕೆ ಅವಮಾನ ಮತ್ತು ಮಹಿಳೆಯರ ಘನತೆಯ ಮೇಲಿನ ದಾಳಿ ಎಂದು ಕರೆದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...