ಮೋದಿ ನೀಡಿದ ಆಫರ್‌ಗಳನ್ನೇ ತಿರಸ್ಕರಿಸಿದ ಜಗದೀಶ್ ಶೆಟ್ಟರ್!

Date:

  • ಹೈಕಮಾಂಡ್ ನಾಯಕ ಮನವೊಲಿಸುವ ಯತ್ನ ವಿಫಲ
  • ಪ್ರಧಾನಿ ಮೋದಿ ನಿರ್ದೇಶನದ ಮೇರೆಗೆ ಮಾತುಕತೆ

ಬಿಜೆಪಿ ಟಿಕೆಟ್ ನಿರಾಕರಣೆ ವಿರುದ್ಧ ಬಂಡಾಯ ಸಾರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸಿತ್ತು. ಆದರೆ, ಬಿಜೆಪಿ ನಾಯಕರ ‘ಆಫರ್‌’ಗಳನ್ನು ಶೆಟ್ಟರ್ ತಿರಸ್ಕರಿಸಿ ಪಕ್ಷ ಬಿಟ್ಟು ಹೊರನಡೆದಿದ್ದಾರೆ.

ಹುಬ್ಬಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್‌ಗಾಗಿ ಜಗದೀಶ್ ಶೆಟ್ಟರ್ ಕಾದು ಕುಳಿತಿದ್ದರು. ಆದರೆ, 212 ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ಈ ಕ್ಷೇತ್ರದ ಹೆಸರನ್ನು ಮಾತ್ರ ಗೌಪ್ಯವಾಗಿ ಇರಿಸಿತ್ತು.

ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ತಪ್ಪಿಸುವ ಎಲ್ಲ ಲಕ್ಷಣಗಳ ಬೆನ್ನಲ್ಲೇ ಅವರು ದೆಹಲಿ ಹೈಕಮಾಂಡ್ ಕದವನ್ನೂ ತಟ್ಟಿದರು. ಆದರೆ, ಯಾವುದೇ ಫಲಿಕಾರಿಯಾಗದ ಹಿನ್ನೆಲೆ ಬಿಜೆಪಿಯೊಂದಿಗೆ ಶೆಟ್ಟರ್ ಮುನಿಸಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಗದೀಶ್ ಶೆಟ್ಟರ್ ಅವರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳಬೇಕು ಎಂದು ಬಿಜೆಪಿ ಹೈಕಮಾಂಡ್ ಕೆಲವು ‘ಆಫರ್‌’ಗಳನ್ನು ಮುಂದಿಟ್ಟಿತ್ತು. ಆದರೆ, ಶೆಟ್ಟರ್ ಮಾತ್ರ ಬಿಜೆಪಿ ಆಯ್ಕೆಗಳನ್ನು ತಿರಸ್ಕರಿಸಿ ಹೊರನಡೆದಿದ್ದಾರೆ.

ಶೆಟ್ಟರ್ ಟಿಕೆಟ್ ಕಗ್ಗಾಂಟಾದ ಹಿನ್ನೆಲೆ ಬಿಜೆಪಿ ಹೈಕಮಾಂಡ್ ಸರ್ವತಂತ್ರ, ಸ್ವತಂತ್ರ ಆಯ್ಕೆಗಳನ್ನು ಜಗದೀಶ್ ಶೆಟ್ಟರ್ ಮುಂದಿಟ್ಟಿತ್ತು. ಪ್ರಧಾನಿ ಮೋದಿ ಅವರ ನಿರ್ದೇಶನದ ಮೇರೆಗೆ ‘ಆಫರ್’ ನೀಡಲಾಗಿತ್ತು.

ಹೈಕಮಾಂಡ್ ಸಂದೇಶವನ್ನ ಖುದ್ದು ಧರ್ಮೇಂದ್ರ ಪ್ರಧಾನ್ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶೆಟ್ಟರ್ ನಿವಾಸಕ್ಕೆ ತೆರಳಿ ಶೆಟ್ಟರ್ ಮನವೊಲಿಸುವ ಪ್ರಯತ್ನ ನಡೆಸಿದ್ದರು.

ಈ ಸುದ್ದಿ ಓದಿದ್ದೀರಾ? ಪಕ್ಷ ತೊರೆಯಲು ಸಜ್ಜಾದ ಜಗದೀಶ್ ಶೆಟ್ಟರ್ : ಮನವೊಲಿಸುವಲ್ಲಿ ವಿಫಲವಾದ ಪ್ರಲ್ಹಾದ್ ಜೋಶಿ

ಶೆಟ್ಟರ್ ನಿವಾಸದ ಸಭೆಯಲ್ಲಿ ಹೈಕಮಾಂಡ್ ನೀಡಿದ ಆಯ್ಕೆಗಳು

ರಾಜ್ಯದ ಎಲ್ಲ ಪ್ರಮುಖ ಸ್ಥಾನಗಳನ್ನು ಅಲಂಕರಿಸಿರುವ ಜಗದೀಶ್ ಶೆಟ್ಟರ್ ಅವರಿಗೆ ತಕ್ಷಣವೇ ರಾಜ್ಯಸಭಾ ಸದಸ್ಯ ಸ್ಥಾನವನ್ನು ನೀಡಲಾಗುವುದು ಎಂದು ನಾಯಕರು ಹೇಳಿದ್ದರು.

ರಾಜ್ಯಸಭೆಗೆ ಶೆಟ್ಟರ್ ಆಯ್ಕೆ ಮಾಡಿ ಕೇಂದ್ರದಲ್ಲಿ ಪ್ರಮುಖ ಜವಾಬ್ದಾರಿ ನೀಡಲು ಹೈಕಮಾಂಡ್ ತೀರ್ಮಾನ ಮಾಡಿತ್ತು. ದೇಶದ ಯಾವುದಾದರು ರಾಜ್ಯದ ರಾಜ್ಯಪಾಲರನ್ನಾಗಿ ಮಾಡುವ ಭರವಸೆಯನ್ನೂ ಹೈಕಮಾಂಡ್ ನಾಯಕರು ನೀಡಿದ್ದರು.

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಅವರ ಕುಟುಂಬದ ಸದಸ್ಯರಿಗೆ ನೀಡುವ ಬಗ್ಗೆ, ಒಂದು ವೇಳೆ ತಮ್ಮ ಕುಟುಂಬದವರಿಗೆ ಬೇಡ ಎನ್ನುವುದಾದರೆ ಅವರು ಸೂಚಿಸುವ ಪಕ್ಷದ ಯಾವುದೇ ಕಾರ್ಯಕರ್ತಗೆ ಟಿಕೆಟ್ ನೀಡಲು ಪಕ್ಷ ಸಮ್ಮತಿಸಲಿದೆ ಎಂದು ಸಹ ‘ಆಫರ್’ ನೀಡಲಾಗಿತ್ತು.

ಮೋದಿ ಅವರ ನಿರ್ದೇಶನದ ಮೇರೆಗೆ, ಈ ನಿರ್ಧಾರ ಕೈಗೊಂಡಿರುವುದಾಗಿ ಜಗದೀಶ್ ಶೆಟ್ಟರ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ‌‌ ನಡ್ಡಾ, ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಪ್ರಲ್ಹಾದ್‌ ಜೋಶಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಎಲ್ಲ ಸೇರಿ ಮಾತುಕತೆ ನಡೆಸಿದ್ದರು.

ಆದರೆ, ಜಗದೀಶ್ ಶೆಟ್ಟರ್ ಅವರು ಈ ಎಲ್ಲ ಆಯ್ಕೆಗಳನ್ನು ತಿರಸ್ಕರಿಸಿದ್ದಾರೆ‌. ಆರು ಬಾರಿ ಶಾಸಕರಾಗಲು, ಸಚಿವರಾಗಲು, ಮುಖ್ಯಮಂತ್ರಿಯಾಗಲು ಅವಕಾಶ ನೀಡಿದ ಬಿಜೆಪಿ ತೊರೆಯುವ ತೀರ್ಮಾನದತ್ತ ಮುಖ ಮಾಡಿರುವ ಶೆಟ್ಟರ್ ನಡೆಗೆ ಬಿಜೆಪಿ ಹಿರಿಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...