ಬಿಜೆಪಿ ವರಿಷ್ಠರಿಗೇ ಸೆಡ್ಡುಹೊಡೆದ ಜಗದೀಶ್ ಶೆಟ್ಟರ್; ಕಮಲ ಪಾಳಯದಲ್ಲಿ ಮತ್ತೊಂದು ಬಂಡಾಯದ ಕಿಡಿ

Date:

  • ದೆಹಲಿ ವರಿಷ್ಠರ ನಿರ್ಧಾರದ ವಿರುದ್ಧ ಸಿಡಿದ ಜಗದೀಶ್ ಶೆಟ್ಟರ್
  • ಬಿಜೆಪಿ ಎದುರೇ ಬಂಡಾಯ ಸ್ಪರ್ಧೆ ಸುಳಿವು ನೀಡಿದ ಮಾಜಿ ಸಿಎಂ

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಮ್ಮದೇ ಪಕ್ಷದ ವರಿಷ್ಠರ ನಿರ್ಧಾರಕ್ಕೆ ಸೆಡ್ಡು ಹೊಡೆದಿದ್ದಾರೆ. ಹೊಸಬರಿಗೆ ಅವಕಾಶ ಬಿಟ್ಟುಕೊಡಿ ಎಂದಿದ್ದ ಬಿಜೆಪಿ ಹೈಕಮಾಂಡ್‌ಗೆ ತಿರುಗೇಟು ನೀಡಿರುವ ಅವರು 30 ವರ್ಷದ ಪಕ್ಷ ಸೇವೆಗೆ ಕೊಡುವ ಗೌರವ ಇದೆಯೇ ಏನು? ಎಂದು ಪ್ರಶ್ನಿಸಿದ್ದಾರೆ.

ಜೊತೆಗೆ ನಾನಿನ್ನೂ ರಾಜಕೀಯದಲ್ಲಿ ಇರಬೇಕೆಂದು ಬಯಸಿದ್ದೇನೆ ಅದರಂತೆ ನಾನು ಸ್ಪರ್ಧೆ ಮಾಡಿಯೇ ತೀರುತ್ತೇನೆ ಎಂದು ವರಿಷ್ಠರಿಗೇ ಸೆಡ್ಡು ಹೊಡೆದಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಗದೀಶ್‌ ಶೆಟ್ಟರ್‌, “ನನಗೆ ವರಿಷ್ಠರಿಂದ ಪೋನ್ ಬಂದಿದ್ದು ಸತ್ಯ.ನೀವು ಹಿರಿಯ ನಾಯಕ ಆಗಿದ್ದೀರಿ, ಬೇರೆಯವರಿಗೆ ಅವಕಾಶ ಕೊಡಿ ಎಂದು ನನಗೆ ಹೈಕಮಾಂಡ ಹೇಳಿದ್ರು”ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ 30 ವರ್ಷಗಳಿಂದ ನಾನೂ ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ. ನೂರಾರು ಜನರಿಗೆ ಟಿಕೆಟ್ ಕೊಡುವ ಕೆಲಸ ನಾನೂ ಮಾಡಿದ್ದೇನೆ. ನನಗೆ ಟಿಕೆಟ್ ನೀಡಬಾರದು ಎನ್ನುವುದಕ್ಕೆ ಕಾರಣ ಏನಿದೆ” ಎಂದು ಅವರು ಪಕ್ಷದ ವರಿಷ್ಠರನ್ನು ಕೇಳಿದರು.

ಮುಂದುವರೆದು ಮಾತನಾಡಿದ ಅವರು, “ಬಿಜೆಪಿ ಆಂತರಿಕ ಸಮೀಕ್ಷೆಯಲ್ಲಿ ನನ್ನ ಪರ ಪಾಸಿಟಿವ್ ರಿಸಲ್ಟ್ ಇದೆ. ಯಾವುದೇ ರೀತಿಯ ಕಪ್ಪು ಚುಕ್ಕೆ ನನ್ನ ಮೇಲಿಲ್ಲ.

ಇದರ ಜೊತೆಗೆ ಇಲ್ಲಿಯವರೆಗೂ ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡಿದ್ದೇನೆ. ಇದಕ್ಕೆ ನನಗೆ ಈ ಶಿಕ್ಷೆಯನ್ನು ನೀವು ಕೊಡುತ್ತಿದ್ದೀರಾ ಎಂದು ಕೇಳಿದ ಶೆಟ್ಟರ್. ನಿಮ್ಮ ನಿರ್ಧಾರದಿಂದ ಮನಸ್ಸಿಗೆ ನೋವಾಗಿದೆ” ಎಂದರು.

ಬಳಿಕ ತಮ್ಮ ಸ್ಪರ್ಧೆ ವಿಚಾರ ಸ್ಪಷ್ಟಪಡಿಸಿದ ಶೆಟ್ಟರ್, ನಾನು ಹುಬ್ಬಳ್ಳಿ- ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದರು.

ಈ ಸುದ್ದಿ ಓದಿದ್ದೀರಾ? : ಚುನಾವಣಾ ರಾಜಕೀಯದಿಂದ ಹಿಂದೆ ಸರಿದ ಕೆಎಸ್‌ ಈಶ್ವರಪ್ಪ: ಪುತ್ರನಿಗಾಗಿ ಕ್ಷೇತ್ರ ತ್ಯಾಗ ಮಾಡಿದರಾ?

ಪಿತೂರಿ ಮಾಡಿದವರಿಗೆ ತಿರುಗೇಟು

ಇನ್ನು ತಮಗೆ ಟಿಕೆಟ್ ತಪ್ಪಿಸುವಂತೆ ಮಾಡಿದವರ ವಿರುದ್ದ ವಾಗ್ದಾಳಿ ನಡೆಸಿ ಎಚ್ಚರಿಕೆ ನೀಡಿದ ಜಗದೀಶ್‌ ಶೆಟ್ಟರ್, ರಾಜಕೀಯದಲ್ಲಿ ಅವಸರ ಮಾಡಿದ್ರೆ ಅಪಘಾತವಾಗುತ್ತದೆ ಎನ್ನುವುದರ ನೆನಪು ಅವರುಗಳಿಗೆ ಇರಬೇಕು.

ನಾನು ಈಗಾಗಲೇ ಯಡಿಯೂರಪ್ಪನವರ ಜೊತೆ ಮಾತನಾಡಿದ್ದೇನೆ. ನಾನು ಟಿಕೆಟ್‌ಗಾಗಿ ಎಲ್ಲಿಯೂ ಹೋಗುವುದಿಲ್ಲ, ಯಾರ ಜೊತೆಗೂ ಮಾತನಾಡುವುದಿಲ್ಲ.

ರಾಜಕಾರಣದಲ್ಲಿ ಯಾವಾಗ ಏನು ಆಗುತ್ತದೆ ಎನ್ನುವುದು ಯಾರಿಗೂ ಗೊತ್ತಿಲ್ಲ. ಹಾಗಾಗಿ ತಾಳ್ಮೆ ಮುಖ್ಯ ಎಂದು ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...