ಜೈಲಿನಲ್ಲಿರುವ ಜೆಎನ್‌ಯು ವಿದ್ಯಾರ್ಥಿ ನಾಯಕ ಶಾರ್ಜೀಲ್ ಇಮಾಮ್ ಬಿಹಾರ ಚುನಾವಣೆಯಲ್ಲಿ ಸ್ಪರ್ಧೆ

Date:

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ(ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಮತ್ತು ಸಿಎಎ ವಿರೋಧಿ ಹೋರಾಟಗಾರ ಶಾರ್ಜೀಲ್ ಇಮಾಮ್ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

2020ರ ಜನವರಿ ತಿಂಗಳಿನಿಂದ ಜೈಲಿನಲ್ಲಿರುವ ಇಮಾಮ್ ಅವರು ಕಿಶನ್‌ಗಂಜ್ ಜಿಲ್ಲೆಯ ಬಹದ್ದೂರ್‌ಗಂಜ್ ಕ್ಷೇತ್ರದಿಂದ ಸ್ಪರ್ಧಿಸುವ ನಿರೀಕ್ಷೆಯಿದೆ ಎಂದು ಅವರ ವಕೀಲ ಅಹ್ಮದ್ ಇಬ್ರಾಹಿಂ ತಿಳಿಸಿದ್ದಾರೆ. ಪ್ರಸ್ತುತ ಆರ್‌ಜೆಡಿಯ ಮೊಹಮ್ಮದ್ ಅನ್ಜರ್ ನಯೀಮಿ ಈ ಕ್ಷೇತ್ರದ ಶಾಸಕರಾಗಿದ್ದಾರೆ. 2020ರಲ್ಲಿ ಎಐಎಂಐಎಂ ಟಿಕೆಟ್‌ನಲ್ಲಿ ಸ್ಪರ್ಧಿಸಿ ಆಯ್ಕೆಯಾದ ಅನ್ಜರ್ ಪ್ರಸ್ತುತ ಆರ್‌ಜೆಡಿ ಸೇರ್ಪಡೆಗೊಂಡಿದ್ದಾರೆ.

ಇದನ್ನು ಓದಿದ್ದೀರಾ? ಜಾಮಿಯಾ ಮಿಲಿಯಾ ಪ್ರಕರಣ | ಶಾರ್ಜೀಲ್ ಇಮಾಮ್, ಸಫೂರಾ ಬಿಡುಗಡೆ ಆದೇಶ ರದ್ದುಗೊಳಿಸಿದ ದೆಹಲಿ ಹೈಕೋರ್ಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

35 ವರ್ಷದ ಇಮಾಮ್ ಬಿಹಾರದ ಜೆಹಾನಾಬಾದ್‌ನ ಕಾಕೋ ಗ್ರಾಮದವರಾಗಿದ್ದು, 2020ರ ಆರಂಭದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್‌ಆರ್‌ಸಿ) ವಿರುದ್ಧ ನಡೆದ ಪ್ರತಿಭಟನೆಗಳ ಸಮಯದಲ್ಲಿ ಹೆಚ್ಚು ಸುದ್ದಿಯಾಗಿದ್ದಾರೆ.

2020ರ ಜನವರಿ 28ರಂದು ರಸ್ತೆ ತಡೆಗೆ ಕರೆ ನೀಡಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಶಾರ್ಜೀಲ್ ಇಮಾಮ್ ಅವರನ್ನು ದೇಶದ್ರೋಹ ಆರೋಪ ಮತ್ತು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಲಾಗಿದೆ.

ವಿವಿಧ ರಾಜ್ಯಗಳಲ್ಲಿ ಅವರ ವಿರುದ್ಧ ದಾಖಲಾಗಿರುವ ಏಳು ಪ್ರಕರಣಗಳಲ್ಲಿ ಆರು ಪ್ರಕರಣಗಳಲ್ಲಿ ಇಮಾಮ್‌ಗೆ ಜಾಮೀನು ನೀಡಲಾಗಿದ್ದರೂ, ಯುಎಪಿಎ ಅಡಿಯಲ್ಲಿ ದೆಹಲಿ ಹಿಂಸಾಚಾರದ ಪಿತೂರಿ ಪ್ರಕರಣದಲ್ಲಿ ಇನ್ನೂ ಜೈಲಿನಲ್ಲಿದ್ದಾರೆ. ಅವರ ಜಾಮೀನು ಅರ್ಜಿ ಸುಮಾರು ಮೂರು ವರ್ಷಗಳಿಂದ ಬಾಕಿ ಇದೆ. ಈಗಾಗಲೇ ಈ ದೀರ್ಘಕಾಲದ ಬಂಧನದ ಬಗ್ಗೆ ವಿಶ್ವಸಂಸ್ಥೆಯು ಕಳವಳ ವ್ಯಕ್ತಪಡಿಸಿದೆ. ಭಾರತದಲ್ಲಿ ಭಿನ್ನಾಭಿಪ್ರಾಯವನ್ನು ಹತ್ತಿಕ್ಕುವ ಪ್ರಯತ್ನ ಮಾಡಲಾಗಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ವಿಪಕ್ಷಗಳು ಮತ್ತು ಪ್ರಗತಿಪರ ಸಂಘಟನೆಗಳೂ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧವಾಗಿ ನಿಂತವರಿಗೆ ದೇಶದ್ರೋಹದ ಪಟ್ಟ ಕಟ್ಟುವುದನ್ನು ಖಂಡಿಸಿದೆ.

ಇವೆಲ್ಲವುದರ ನಡುವೆ ಸಾಮಾಜಿಕ ಮಾಧ್ಯಮದಲ್ಲಿ ಇಮಾಮ್ ಪರವಾಗಿ ಬೆಂಬಲ ಹೆಚ್ಚಾಗುತ್ತಿದೆ, ಅಭಿಯಾನ ನಡೆಯುತ್ತಿದೆ. ಈ ನಡುವೆ ಇಮಾಮ್ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ. ಈ ವರ್ಷದ ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಬಿಹಾರದ ವಿಧಾನಸಭಾ ಚುನಾವಣೆಗಳು ನಡೆಯುವ ನಿರೀಕ್ಷೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...