ಹುಲಿ ಉಗುರು ವಿವಾದ: ಬಂಧಿಸುತ್ತಾ ಹೋದರೆ ಜೈಲುಗಳು ಸಾಕಾಗಲ್ಲ ಎಂದ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

Date:

ಹುಲಿ ಉಗುರು ವಿವಾದ ಮತ್ತು ಅದರ ಸುತ್ತ ನಡೆಯುತ್ತಿರುವ ಬೆಳವಣಿಗೆಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಹುಲಿ ಉಗುರು ಡಾಲರ್, ಲಾಕೆಟ್ ಧರಿಸಿದವರನ್ನು ಅಥವಾ ಮನೆಯಲ್ಲಿ ಇಟ್ಟುಕೊಂಡವರನ್ನು ಅರಣ್ಯಾಧಿಕಾರಿಗಳು ಬಂಧಿಸಿ, ಜೈಲಿಗೆ ಕಳುಹಿಸುತ್ತಾ ಹೋದರೆ ರಾಜ್ಯದಲ್ಲಿ ಜೈಲುಗಳು ಸಾಕಾಗಲ್ಲ’ ಎಂದು ಹೇಳಿಕೆ ನೀಡಿದ್ದಾರೆ.

ತಮ್ಮ ಹೇಳಿಕೆಯ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಸ್ತುತ ತೀರ್ಥಹಳ್ಳಿ ಕ್ಷೇತ್ರದ ಶಾಸಕ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಮಲೆನಾಡು, ಕರಾವಳಿ ಭಾಗದ ಅನೇಕ ಮನೆಗಳಲ್ಲಿ ಹುಲಿ ಉಗುರು ಸೇರಿದಂತೆ ವನ್ಯಜೀವಿಗಳ ಉತ್ಪನ್ನಗಳನ್ನು ಇಟ್ಟುಕೊಳ್ಳುವುದು ಬಹಳ ವರ್ಷಗಳಿಂದ ನಡೆಯುತ್ತಿದೆ. ಸತ್ತು ಬಿದ್ದ ವನ್ಯಜೀವಿಗಳ ವಸ್ತುಗಳನ್ನು ಧೈರ್ಯದ ಪ್ರತೀಕ ಎಂದು ಹಾಕುತ್ತಿದ್ದರು. ಇತ್ತೀಚೆಗೆ ಶ್ರೀಮಂತರು ಅದಕ್ಕೆ ಆಲಂಕಾರಿಕವಾಗಿ ಚಿನ್ನದ ಪೆಂಡೆಂಟ್ ಮಾಡಿ ಹಾಕುತ್ತಿದ್ದಾರೆ. ಈ ಕಾರಣಕ್ಕಾಗಿ ಜನರನ್ನು ಏಕಾಏಕಿ ಬಂಧಿಸುವುದು ಸರಿಯಲ್ಲ. ಈ ಕುರಿತು ಸರ್ಕಾರ ಮಧ್ಯ ಪ್ರವೇಶಿಸುವುದು ಅವಶ್ಯ‌ವಿದೆ’ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದೂ-ಮುಸ್ಲಿಂ ಐಕ್ಯತಾ ಸ್ಥಳವಾದ ಹಣಗೇರಿನಲ್ಲಿರುವ ದರ್ಗಾಕ್ಕೆ ಸ್ಪೀಕರ್, ಮಂತ್ರಿಗಳು ಎಲ್ಲರೂ ಹೋಗುತ್ತಾರೆ. ಈ ವೇಳೆ ಅಲ್ಲಿನ ಇಮಾಮರು ನವಿಲು ಗರಿಯಿಂದ ತಲೆಮೇಲೆ, ಭುಜದ ಮೇಲೆ ಹೊಡೀತಾರೆ. ಅದು ಅಲ್ಲಿನ ಪದ್ಧತಿ. ಹಾಗಾಗಿ, ಅಲ್ಲಿ ನವಿಲುಗರಿ ಇರುವುದು ವನ್ಯಜೀವಿ ಕಾಯ್ದೆಯ ಉಲ್ಲಂಘನೆಯಂತಾದರೆ ಸಾಧ್ಯವಾಗುವುದಾದರೆ ಅವರನ್ನೂ ಬಂಧಿಸಬೇಕು. ಟಿಪ್ಪು ಸುಲ್ತಾನ್ ಹುಲಿಯೊಂದನ್ನು ಕೊಲ್ಲುತ್ತಿರುವ ಫೋಟೋಗಳನ್ನು ಅನೇಕ ಜನ ತಮ್ಮ ಮನೆಗಳಲ್ಲಿ ತೂಗು ಹಾಕಿದ್ದಾರೆ. ಅದು ವನ್ಯಜೀವಿ ಸಂರಕ್ಷಣೆ ಕಾಯ್ದೆ ಉಲ್ಲಂಘನೆಯಲ್ಲವೇ? ಅದನ್ನು ನೋಡಿ ಬೇರೆ ಜನ ಹುಲಿಗಳನ್ನು ಬೇಟೆಯಾಡಲು ಮುಂದಾದರೆ ಹೇಗೆ? ಎಂದು ಪ್ರಶ್ನಿಸಿದರು.

ಕೆಲವರು ತಮಗೆ ತಿಳಿಯದೆ ಅಥವಾ ಪರಂಪರಾಗತವಾಗಿ ಹುಲಿ ಉಗುರು ಮನೆಗಳಲ್ಲಿ ಇಟ್ಟುಕೊಂಡಿರುತ್ತಾರೆ. ಅವರನ್ನೆಲ್ಲ ಬಂಧಿಸಿ ಜೈಲಿಗೆ ಹಾಕುತ್ತಾ ಹೋದರೆ, ರಾಜ್ಯದಲ್ಲಿ ಜೈಲುಗಳು ಸಾಕಾಗಲ್ಲ. ಅರಣ್ಯ ಇಲಾಖೆ ಹುಲಿಯುಗುರು ಇಟ್ಟುಕೊಂಡಿರುವವರನ್ನು ಬಂಧಿಸುತ್ತಿರುವುದು ಸರಿಯಲ್ಲ. ರಾಜ್ಯ ಸರ್ಕಾರ, ಅರಣ್ಯ ಇಲಾಖೆ ಸಚಿವ ಮತ್ತು ಅಧಿಕಾರಿಗಳು ವಿಷಯದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...