ನಾನು ಸಚಿವನಾಗಲು ಜಾಲಪ್ಪ ಅವರೂ ಕಾರಣಕರ್ತರು: ಸಿಎಂ ಸಿದ್ದರಾಮಯ್ಯ

Date:

ಆರ್ ಎಲ್ ಜಾಲಪ್ಪ ಅವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು. ನಾನು ಸಚಿವನಾಗಲು ಜಾಲಪ್ಪ ಅವರೂ ಕಾರಣಕರ್ತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಹಿರಿಯ ಕಾಂಗ್ರೆಸ್ ನಾಯಕ ಆರ್ ಎಲ್ ಜಾಲಪ್ಪ ಜನ್ಮ ಶತಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಾಲಪ್ಪ ಅಕಾಡೆಮಿ, ಜಾಲಪ್ಪ ಕಾನೂನು ಮಹಾವಿದ್ಯಾಲಯ, ಶತಮಾನೋತ್ಸವ ಭವನಗಳನ್ನು ಉದ್ಘಾಟಿಸಿ ಹಾಗೂ ದೇವರಾಜ ಅರಸು ವಸತಿ ಶಾಲೆ ನೂತನ ಕಟ್ಟಡಗಳ ಶಿಲಾನ್ಯಾಸ ನೆರವೇರಿಸಿ “ಹೃದಯವಂತ ಆರ್.ಎಲ್.ಜಾಲಪ್ಪ ಜೀವನ‌ ಪಥ” ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮುಖ್ಯಮಂತ್ರಿ ಮಾತನಾಡಿದರು.

ಇದನ್ನು ಓದಿದ್ದೀರಾ? ಹಾಸನದಲ್ಲಿ ದೇವೇಗೌಡರ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ; ಸಭಿಕರಿಂದ ಚಪ್ಪಾಳೆಯ ಸುರಿಮಳೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಾಲಪ್ಪನವರಿಗೆ ಸಮಯ ಪ್ರಜ್ಞೆ ಇತ್ತು. ಒಬ್ಬ ದಕ್ಷ ಆಡಳಿತಗಾರರಾಗಿದ್ದ ಜಾಲಪ್ಪ ಅವರು ನಿರ್ವಹಿಸಿದ ಎಲ್ಲಾ ಖಾತೆಗಳಲ್ಲೂ ತಮ್ಮದೇ ಆದ ಹೆಜ್ಜೆ ಗುರುತುಗಳನ್ನು ದಾಖಲಿಸಿದ್ದು ಮಾತ್ರವಲ್ಲ, ರೈತರಿಗೆ, ಕೃಷಿಗೆ ಅತ್ಯಂತ ಮಹತ್ವ ನೀಡಿದ್ದಾರೆ” ಎಂದು ಸಿಎಂ ಸ್ಮರಿಸಿದರು.

“ನಾನು ಮೊದಲ ಬಾರಿ ಸಚಿವನಾಗಲು ರಾಚಯ್ಯನವರಷ್ಟೇ ಜಾಲಪ್ಪ ಅವರೂ ಕಾರಣ. ಜಾಲಪ್ಪನವರಿಗೆ ಹಿಂದುಳಿದವರ ಏಳಿಗೆಯ ವಿಚಾರದಲ್ಲಿ ದೂರದೃಷ್ಟಿ ಇತ್ತು. ಹೀಗಾಗಿ ಆಗಲೇ ವೈದ್ಯಕೀಯ ಕಾಲೇಜು ಸ್ಥಾಪಿಸಿದರು. ಮೊದಲಿಗೆ 150 ವಿದ್ಯಾರ್ಥಿಗಳಿಂದ ಆರಂಭವಾದ ಸಂಸ್ಥೆ ಈಗ 40 ಸಾವಿರದಷ್ಟು ವಿದ್ಯಾರ್ಥಿಗಳು ನಾನಾ ವಿಭಾಗಗಳಲ್ಲಿ ಓದುತ್ತಿರುತ್ತಿದ್ಧಾರೆ” ಎಂದು ಶ್ಲಾಘಿಸಿದರು.

“ಬಹಳ ಸ್ವಾಭಿಮಾನಿ ಆಗಿದ್ದ ಜಾಲಪ್ಪನವರು ನನ್ನ ರಾಜಕೀಯ ಏಳಿಗೆಗೆ ಕಾರಣಕರ್ತರು‌. ನನ್ನನ್ನು ಮುಖ್ಯಮಂತ್ರಿ ಮಾಡಲೇಬೇಕು ಎಂದು ಜಾಲಪ್ಪನವರು ದೇವೇಗೌಡರ ಎದುರು ಹಠ ಹಿಡಿದು ಆಗ್ರಹ ಪೂರ್ವಕವಾಗಿ ಒತ್ತಾಯಿಸಿದ್ದರು. ನನಗೂ, ಜೆ. ಹೆಚ್. ಪಟೇಲರಿಗೂ ನಡುವೆ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಚರ್ಚೆ ನಡೆಯುತ್ತಿದ್ದಾಗ ನನ್ನ ಪರವಾಗಿ ಗಟ್ಟಿಯಾಗಿ ನಿಂತು ದೇವೇಗೌಡರಿಗೆ ನನ್ನನ್ನೇ ಸಿಎಂ ಮಾಡಬೇಕು ಎಂದು ಒತ್ತಾಯಿಸಿದ್ದರು” ಎಂದು ನೆನಪಿಸಿಕೊಂಡರು.

“ನಾನು ಮೊದಲ ಬಾರಿ ಹಣಕಾಸು ಸಚಿವನಾಗುವಾಗಲೂ ಜಾಲಪ್ಪನವರ ಪ್ರಯತ್ನ‌ ಇದೆ. ನಾನು ಕಂದಾಯ ಸಚಿವನಾಗಬೇಕು ಎಂದುಕೊಂಡಿದ್ದೆ. ಆದರೆ, ನಾನು ಹಣಕಾಸು ಸಚಿವ ಆಗಲೇಬೇಕು ಎಂದು ಸೂಚಿಸಿದರು. ಅವರ ಕಾರಣದಿಂದ ನಾನು ಇಂದು ಹದಿನಾರು ಬಜೆಟ್‌ಗಳನ್ನು ಮಂಡಿಸುವಂತಾಯಿತು” ಎಂದು ಕೃತಜ್ಞತೆ ಸಲ್ಲಿಸಿದರು.

“ಇಂದು ನಾನು ರಾಜಕೀಯವಾಗಿ ಈ ಮಟ್ಟದ ಏಳಿಗೆ ಆಗಿದ್ದರೆ ಅದರಲ್ಲಿ ಜಾಲಪ್ಪನವರ ಪಾತ್ರ ದೊಡ್ಡದಿದೆ. ಅತ್ಯಂತ ಹೃದಯವಂತರಾಗಿದ್ದ ಜಾಲಪ್ಪನವರು ಆತಿಥ್ಯದಲ್ಲೂ ಎತ್ತಿದ ಕೈ. ತುಪ್ಪದ ದೋಸೆ ಮಾಡಿ ಸ್ವತಃ ಬಡಿಸಿದ್ದರು. ಸಾಮಾಜಿಕ ನ್ಯಾಯದ ಪರವಾಗಿ ತಮ್ಮ ರಾಜಕೀಯ ಜೀವನವನ್ನು ಮುಡಿಪಾಗಿ ಇಟ್ಟಿದ್ದರು. ಅತ್ಯಂತ ಧೈರ್ಯವಂತರಾಗಿದ್ದ ಜಾಲಪ್ಪ ಅವರು ಸತ್ಯ ಹೇಳುವಾಗ ಮುಲಾಜಿಲ್ಲದೆ ಎದೆಗಾರಿಕೆ ಪ್ರದರ್ಶಿಸುತ್ತಿದ್ದರು” ಎಂದು ಸ್ಮರಿಸಿ ಅಭಿನಂದನೆ ಸಲ್ಲಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...