ಕೋಗಿಲು ಬಡಾವಣೆ ಮನೆಗಳ ಧ್ವಂಸ: ಸ್ಥಳಕ್ಕೆ ಭೇಟಿ ನೀಡಿ ‘ನಾಳೆ ಸಿಹಿಸುದ್ದಿ’ ಎಂದ ಸಚಿವ ಜಮೀರ್

Date:

ಕೋಗಿಲು ಬಡಾವಣೆ ಮನೆಗಳ ಧ್ವಂಸ ವಿಚಾರದಲ್ಲಿ ನಾಳೆ(ಡಿಸೆಂಬರ್ 29) ಬೆಳಿಗ್ಗೆ 11 ಗಂಟೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಕರೆದಿದ್ದಾರೆ. ಅದಾದ ಬಳಿಕ ಸಿಎಂ ನಿರ್ಧಾರ ತೆಗೆದುಕೊಳ್ಳಬಹುದು. ನಾಳೆ ಸಿಹಿಸುದ್ದಿ ಸಿಗಬಹುದು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

ಬೆಂಗಳೂರು ನಗರದ ಯಲಹಂಕ ಸಮೀಪವಿರುವ ಕೋಗಿಲು ಬಡಾವಣೆಯ ಫಕೀರ್ ಕಾಲೋನಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಅಧಿಕಾರಿಗಳು ಸುಮಾರು 180 ಮನೆಗಳನ್ನು ನೆಲಸಮಗೊಳಿಸಿದ್ದು 2,500ಕ್ಕೂ ಹೆಚ್ಚು ಜನ ಬೀದಿಪಾಲಾಗಿದ್ದಾರೆ. 14 ಎಕರೆ 36 ಗುಂಟೆ ವಿಸ್ತೀರ್ಣದ ಪಾಲಿಕೆ ಜಾಗದಲ್ಲಿ 180 ಮನೆಗಳನ್ನು ಅಕ್ರಮವಾಗಿ ನಿರ್ಮಿಸಿಕೊಂಡಿದ್ದಾರೆ ಎಂಬುದು ಆಡಳಿತದ ಆರೋಪ.

ಇದನ್ನು ಓದಿದ್ದೀರಾ? ಕೋಗಿಲು ಬಡಾವಣೆ ಮನೆಗಳ ಧ್ವಂಸ: ಕರ್ನಾಟಕ ‘ಬುಲ್ಡೋಜರ್ ರಾಜ್ಯ’ ಎಂದ ಕೇರಳ ಸಿಎಂ ಪಿಣರಾಯಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸ್ಥಳಕ್ಕೆ ಭೇಟಿ ನೀಡಿದ ವಸತಿ ಸಚಿವ ಜಮೀರ್, “ಬಹಳ ವರ್ಷಗಳಿಂದ ಇವರು ಇಲ್ಲೇ(ಕೋಗಿಲು ಬಡಾವಣೆ) ವಾಸಿಸುತ್ತಿದ್ದವರು. ಅವರಿಗೆ ಏನೋ ಒಂದು ವ್ಯವಸ್ಥೆ ಮಾಡಬೇಕಾಗಿತ್ತು. ಅವರು ಯಾವ ರೀತಿ ಜೀವನ ಮಾಡುತ್ತಿದ್ದಾರೆ ಎಂಬುದು ನಮ್ಮ ಕಣ್ಣ ಮುಂದಿದೆ. ನಮಗೆಲ್ಲರಿಗೂ ಗೊತ್ತಿರುವಂತೆ ಅಕ್ರಮವಾಗಿ ವಾಸಿಸುತ್ತಿದ್ದರು. ಕಂದಾಯ ಸಚಿವ ಕೃಷ್ಣ ಬೈರೇಗೌಡರು ಮೂರ್ನಾಲ್ಕು ನೋಟಿಸ್ ನೀಡಿದ್ದಾರೆ. ಇವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ” ಎಂದಿದ್ದಾರೆ.

“ಮನೆಗಳನ್ನು ಧ್ವಂಸಗೊಳಿಸುವುದಕ್ಕೂ ಮುನ್ನ ಯಾವುದೇ ವ್ಯವಸ್ಥೆ ಮಾಡಿರಲಿಲ್ಲ, ರಾತ್ರೋರಾತ್ರಿ ಧ್ವಂಸ ಮಾಡಲಾಗಿದೆ ಎಂದು ಪ್ರಚಾರವಾಗುತ್ತಿದೆ. ಆದರೆ ವಾಸ್ತವದಲ್ಲಿ ಬೇರೆ ಎಲ್ಲಾ ವ್ಯವಸ್ಥೆ ಮಾಡಲಾಗಿತ್ತು. ಕೃಷ್ಣ ಬೈರೇಗೌಡರು ಹತ್ತಿರದ ಐದು ಚೌಟರಿಗಳಲ್ಲಿ ಊಟ, ವಸತಿ ಎಲ್ಲ ವ್ಯವಸ್ಥೆ ಮಾಡಿದ್ದರು. ನನ್ನ ಜತೆ ಮಾತನಾಡಿ ಇವರಿಗೆ ಮನೆ ಕಟ್ಟಿಕೊಡುವ ನಿರ್ಧಾರವನ್ನು ತೆಗೆದುಕೊಂಡಿದ್ದರು. ಆದರೆ ಇವರು ಯಾರೂ ಹೋಗಲು ತಯಾರಿರಲಿಲ್ಲ” ಎಂದು ಹೇಳಿದ್ದಾರೆ.

jameer1
ಕೋಗಿಲು ಬಡಾವಣೆಗೆ ಭೇಟಿ ನೀಡಿದ ವಸತಿ ಸಚಿವ ಜಮೀರ್ ಅಹ್ಮದ್

“ಇಲ್ಲಿ ನಾವು ಖಾಲಿ ಮಾಡಿದರೆ ನಮಗೆ ಬೇರೆ ಜಾಗ ಸಿಗುತ್ತದೆಯೋ ಇಲ್ಲವೋ ಎಂಬ ಭಯದಲ್ಲಿ ಜನರು ಕೋಗಿಲು ಬಡಾವಣೆಯಿಂದ ಕದಲುತ್ತಿಲ್ಲ. ಆ ಕಾರಣದಿಂದಾಗಿ ಸಿಎಂ ಜತೆ ಮಾತನಾಡಿದ್ದೇನೆ. ನಾಳೆ ಸಭೆ ಆದ ಬಳಿಕ ಖಂಡಿತ ಸಿಹಿಸುದ್ದಿ ಸಿಗಲಿದೆ” ಎಂದು ಭರವಸೆ ನೀಡಿದ್ದಾರೆ.

“ನಮಗೆ ಗೊತ್ತಿರುವ ಹಾಗೆ ಇಲ್ಲ ಕೇರಳ ನಿವಾಸಿಗಳು ಯಾರೂ ಇಲ್ಲ. ಇದೇ ತರ ಉತ್ತರ ಪ್ರದೇಶದಲ್ಲಿ ಮನೆಗಳನ್ನು ‘ಬುಲ್ಡೋಜ್’ ಮಾಡಿದ್ದರು. ಆವಾಗ ಕೇರಳ ಮುಖ್ಯಮಂತ್ರಿ ಉತ್ತರ ಪ್ರದೇಶಕ್ಕೆ ಯಾಕೆ ಹೋಗಿಲಿಲ್ಲ? ಅವಾಗ ಚುನಾವಣೆ ಇರಲಿಲ್ಲ. ಈಗ ಏಪ್ರಿಲ್‌ನಲ್ಲಿ ಚುನಾವಣೆ ಇರುವ ಕಾರಣದಿಂದಾಗಿ ಈ ರಾಜಕೀಯ ನಡೆಯುತ್ತಿದೆ. ಕೇರಳ ಸಿಎಂಗೆ ಬಡವರ ಬಗ್ಗೆ ಕಾಳಜಿ ಇದ್ದರೆ ಕೇರಳದ ವತಿಯಿಂದ ಅನುದಾನ ಕೊಡಬೇಕಾಗಿತ್ತು” ಎಂದು ಟೀಕಿಸಿದರು.

“ಕೇರಳದಲ್ಲಿ ಪ್ರವಾಹ ಸಂತ್ರಸ್ತರಿಗೆ ನೂರು ಮನೆಗಳನ್ನು ಕಟ್ಟಿಕೊಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದರು, ಅದರಂತೆ ಮನೆ ಕಟ್ಟಿಕೊಡುತ್ತಿದ್ದೇವೆ. ಆ ರೀತಿ ಘೋಷಣೆ ಮಾಡಬೇಕಾಗಿತ್ತು. ಆದರೆ ಇದು ಬರೀ ರಾಜಕೀಯ” ಎಂದು ದೂರಿದ್ದಾರೆ.

ಕೇರಳ ಸಿಎಂ ಹೇಳಿದ್ದೇನು?

ಕೋಗಿಲು ಬಡಾವಣೆ ಮನೆಗಳ ಧ್ವಂಸ ಪ್ರಕರಣದ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಬೆಂಗಳೂರಿನ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿ ವರ್ಷಗಳಿಂದ ವಾಸಿಸುತ್ತಿದ್ದ ಮುಸ್ಲಿಂ ಕುಟುಂಬಗಳನ್ನು ಬೀದಿಪಾಲು ಮಾಡಲಾಗಿದೆ. ಈ ಘಟನೆಯು ‘ಬುಲ್ಡೋಜರ್ ರಾಜ್ಯ’ದ ಕ್ರೂರ ಸಾಮಾನ್ಯೀಕರಣವನ್ನು ಬಹಿರಂಗಪಡಿಸಿದೆ” ಎಂದು ಹೇಳಿದ್ದಾರೆ.

“ಸಂಘ ಪರಿವಾರದ ಅಲ್ಪಸಂಖ್ಯಾತ ವಿರೋಧಿ ರಾಜಕೀಯವನ್ನು ಈಗ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿರುವುದು ದುಃಖಕರ ವಿಚಾರ” ಎಂದೂ ಪಿಣರಾಯಿ ಟೀಕಿಸಿದ್ದಾರೆ.

“ಭಯದ ವಾತಾವರಣ ಮತ್ತು ಕ್ರೂರವಾದ ಬಲ ಪ್ರಯೋಗದ ಮೂಲಕವೇ ಆಡಳಿತ ನಡೆಸುವಾಗ, ಸಾಂವಿಧಾನಿಕ ಮೌಲ್ಯಗಳು ಮತ್ತು ಮಾನವ ಘನತೆಯು ಮೊದಲು ಬಲಿಪಶುಗಳಾಗುತ್ತವೆ. ಈ ಕಪಟತನವನ್ನು ವಿರೋಧಿಸಲು ಮತ್ತು ಸೋಲಿಸಲು ಎಲ್ಲ ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ಶಕ್ತಿಗಳು ಒಂದಾಗಬೇಕು” ಎಂದು ಪಿಣರಾಯಿ ಕರೆ ನೀಡಿದ್ದಾರೆ. ಇದಾದ ಬಳಿಕ ಕೇರಳದ ನಿಯೋಗವೂ ಭೇಟಿ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...