ಜಮ್ಮು-ಕಾಶ್ಮೀರ ಚುನಾವಣೆ | ಬಿಜೆಪಿ ಜೊತೆ ಪಿಡಿಪಿ ಮೈತ್ರಿ?; ಮೆಹಬೂಬಾ ಮುಫ್ತಿ ಹೇಳಿದ್ದೇನು?

Date:

ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿಯೊಂದಿಗೆ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಪಿಡಿಪಿ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಇಂತಹ ವದಂತಿಗಳಿಗೆ ತೆರೆ ಎಳೆದಿರುವ ಮುಫ್ತಿ, ಬಿಜೆಪಿ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮುಫ್ತಿ, ನ್ಯಾಷನಲ್ ಕಾನ್ಫರೆನ್ಸ್‌ (ಎನ್‌ಸಿ) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಸರ್ಕಾರ ರಚನೆಗಾಗಿ ಮಾತ್ರವೇ ಎನ್‌ಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುತ್ತದೆ. ಅವರು 1947ರಿಂದ ಹಾಗೆಯೇ ಮಾಡುತ್ತಿದ್ದಾರೆ. ಅವರಿಗೆ ಬೇರೆ ಯಾವುದೇ ಗುರಿ ಇಲ್ಲ. ಅವರು ಸರ್ಕಾರ ರಚನೆಗಾಗಿ, ಮಂತ್ರಿ ಸ್ಥಾನಕ್ಕಾಗಿ ಮೈತ್ರಿ ಮಾಡಿಕೊಳ್ಳುತ್ತಾರೆ” ಎಂದು ಆರೋಪಿಸಿದ್ದಾರೆ.

“ತಮ್ಮ ಪಕ್ಷವು ಸಿದ್ದಾಂತಗಳಿಗಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತದೆ. ಆದರೆ, ವಿಧಾನಸಭಾ ಚುನಾವಣೆಯ ನಂತರ ತನ್ನ ಪಕ್ಷದ ಬೆಂಬಲವಿಲ್ಲದೆ ಯಾವುದೇ ಪಕ್ಷವು ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ” ಎಂದು ಪ್ರತಿಪಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು 2002ರಲ್ಲಿ ಕೇವಲ 16 ಶಾಸಕರೊಂದಿಗೆ ಸರ್ಕಾರ ರಚಿಸಿದ್ದೇವೆ. ದೇವರ ಇಚ್ಛೆ, ಈ ಬಾರಿಯೂ, ಪಿಡಿಪಿ ಇಲ್ಲದೆ ಯಾವುದೇ ಸರ್ಕಾರ ರಚನೆಯಾಗುವುದಿಲ್ಲ. ಆದಾಗ್ಯೂ, PDPಯು ತನ್ನ ಸಿದ್ದಾಂತವನ್ನು ಅನುಷ್ಠಾನಗೊಳಿಸಲು ಹೆಚ್ಚು ಒತ್ತುಕೊಡುತ್ತದೆ. ಅಲ್ಲದೆ, ಸರ್ಕಾರ ರಚನೆಯ ಮೇಲೆ ಹೆಚ್ಚು ಗಮನ ನೀಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

2015ರಲ್ಲಿ ಬಿಜೆಪಿಯೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸಿದ್ದ ಮುಫ್ತಿ, ಚುನಾವಣೆಯ ನಂತರ ಬಿಜೆಪಿ ಜೊತೆಗಿನ ಮೈತ್ರಿಯನ್ನು ಕಡಿತಗೊಳಿಸಿದ್ದರು. ಕಾಶ್ಮೀರ ಸಮಸ್ಯೆಯ ಪರಿಹಾರಕ್ಕಾಗಿ ನಾವು ಬಿಜೆಪಿ ಜೊತೆ ಕೈಜೋಡಿಸಿದ್ದೆವು. ಆದರೆ, ಬಿಜೆಪಿ ಅದಕ್ಕೆ ವಿರುದ್ಧ ದಿಕ್ಕಿನಲ್ಲಿ ನಡೆಯುತ್ತಿರುವುದರಿಂದ ಬಿಜೆಪಿ ಜೊತೆಗೆ ಮೈತ್ರಿ ಮುರಿದಿದ್ದೇವೆ ಎಂದು ಅವರು ಹೇಳಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...