ಜಮ್ಮು-ಕಾಶ್ಮೀರ | 370ನೇ ವಿಧಿ ರದ್ದತಿ ಬಳಿಕ ಮೊದಲ ಚುನಾವಣೆ; ವಿಧಾನಸಭೆ ಚುನಾವಣೆ ಭವಿಷ್ಯ ನಿರ್ಧರಿಸಲಿದೆ ಫಲಿತಾಂಶ

Date:

ಆರ್ಟಿಕಲ್ 370 ರದ್ದತಿ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಬಾರಿಗೆ ಚುನಾವಣೆ ನಡೆದಿದೆ. ಅದೂ, 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ಮೇಲೆಯೇ ಜಮ್ಮು-ಕಾಶ್ಮೀರ ಮತದಾರರು ಮತ ಚಲಾಯಿಸಿದ್ದಾರೆ. ಈ ಲೋಕಸಭಾ ಚುನಾವಣೆಯ ಆ ರಾಜ್ಯಕ್ಕೆ ನಿರ್ಣಾಯಕ ಮತ್ತು ಮಹತ್ವದ್ದಾಗಿದೆ. ಚುನಾವಣಾ ಫಲಿತಾಂಶಗಳು ಆ ರಾಜ್ಯದ ರಾಜಕೀಯ ಕಾರ್ಯತಂತ್ರದಲ್ಲಿ ಬದಲಾವಣೆಯ ಅಗತ್ಯಗಳನ್ನು ಸೂಚಿಸುತ್ತಿವೆ. ಕೇಂದ್ರದಲ್ಲಿ ಎನ್‌ಡಿಎ ಅಥವಾ ‘ಇಂಡಿಯಾ’ ಒಕ್ಕೂಟ ಅಧಿಕಾರಕ್ಕೆ ಬಂದರೆ, ಅಲ್ಲಿನ ರಾಜಕೀಯ ಸಮೀಕರಣಗಳನ್ನು ವಿಭಿನ್ನವಾಗಿರಲಿವೆ. ಅಲ್ಲದೆ, ಮುಂದಿನ ವಿಧಾನಸಭಾ ಚುನಾವಣೆಯ ಭವಿಷ್ಯವೂ ನಿರ್ಧಾರವಾಗಲಿದೆ.

ಜಮ್ಮು ಮತ್ತು ಕಾಶ್ಮೀರವು ಐದು ಸಂಸದೀಯ ಸ್ಥಾನಗಳನ್ನು ಒಳಗೊಂಡಿದೆ – ಜಮ್ಮು ಪ್ರದೇಶದಲ್ಲಿ ಉಧಂಪುರ್ ಮತ್ತು ಜಮ್ಮು ಹಾಗೂ ಕಣಿವೆಯಲ್ಲಿ ಶ್ರೀನಗರ, ಬಾರಾಮುಲ್ಲಾ ಮತ್ತು ಅನಂತನಾಗ್-ರಜೌರಿ. 2019ರ ಚುನಾವಣೆಯಲ್ಲಿ, ಜಮ್ಮು ಪ್ರದೇಶದಲ್ಲಿ ಬಿಜೆಪಿ ಎರಡೂ ಸ್ಥಾನಗಳನ್ನು ಗೆದ್ದುಕೊಂಡರೆ, ಎನ್‌ಸಿ ಎಲ್ಲ ಮೂರು ಕಣಿವೆ ಸ್ಥಾನಗಳನ್ನು ಗೆದ್ದಿತ್ತು.

ಆದರೆ, 2019ರಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ಬಿಜೆಪಿ, ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಆರ್ಟಿಕಲ್ 370ಯನ್ನು ರದ್ದುಗೊಳಿಸಿತು. ಇದು, ರಾಜ್ಯದಲ್ಲಿ ವಿರೋಧ ಮತ್ತು ಅಶಾಂತಿಯನ್ನು ಸೃಷ್ಠಿಸಿತ್ತು. ಅದಾಗ್ಯೂ, ಕಾಶ್ಮೀರಿ ಜನರು 370 ವಿಧಿಯ ರದ್ದತಿ ಪರವಾಗಿದ್ದಾರೆ. ನಮ್ಮನ್ನು ಬೆಂಬಲಿಸಿದ್ದಾರೆ ಎಂದು ಹೇಳಿಕೊಂಡಿತ್ತು. ಆದರೆ, ಈಗವರೆಗೆ ವಿಧಾನಸಭಾ ಚುನಾವಣೆ ಸೇರಿದಂತೆ ಯಾವುದೇ ಸ್ಥಳೀಯ ಚುನಾವನೆಗಳನ್ನೂ ನಡೆಸಲಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

370ನೇ ವಿಧಿ ರದ್ದಾದ ಬಳಿಕ, ಮೊದಲ ಬಾರಿಗೆ ಚುನಾವಣೆ ನಡೆದಿದ್ದು, ಜನರು 370ನೇ ವಿಧಿ ರದ್ದತಿಗೆ ತಮ್ಮ ಸಮ್ಮತಿ ಇತ್ತೇ, ಇಲ್ಲವೇ ಎಂಬುದನ್ನು ತಮ್ಮ ಮತಗಳಲ್ಲಿ ಸೂಚಿಸಿದ್ದಾರೆ. ವಿಶೇಷವೆಂದರೆ, ಚುನಾವಣೆಗೂ ಮುನ್ನವೇ ಸೋಲೊಪ್ಪಿಕೊಂಡಿರುವ ಬಿಜೆಪಿ, ಶ್ರೀನಗರ ಕಣಿವೆ ಪ್ರದೇಶದ ಮೂರು ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿಲ್ಲ. ಮೈತ್ರಿ ಪಾಲುದಾರರಿಗೆ ಬೆಂಬಲ ಸೂಚಿಸುವುದಾಗಿ ಹೇಳಿ ಜಾರಿಕೊಂಡಿದೆ.

ಈ ನಡುವೆ, ಮೂರು ದಶಕಗಳ ಬಳಿಕ ಕಾಶ್ಮೀರದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ. J&K ಐದು ಸಂಸದೀಯ ಸ್ಥಾನಗಳಲ್ಲಿ ಒಟ್ಟು 58.11%ರಷ್ಟು ಮತದಾನ ನಡೆದಿದೆ. ಇದು ಕಳೆದ 35 ವರ್ಷಗಳಲ್ಲಿ ಅತ್ಯಧಿಕ ಮತದಾನವಾಗಿದೆ.

ಮಂಗಳವಾರ ಮತ ಎಣಿಕೆ ಆರಂಭವಾಗಿದ್ದು, ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಮತ್ತು ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಸೇರಿದಂತೆ 100 ಅಭ್ಯರ್ಥಿಗಳು ಕಣದಲ್ಲಿದ್ದು, ಯಾರು ಸಂಸತ್ ಪ್ರವೇಶಿಸಲಿದ್ದಾರೆ ಎಂಬುದು ನಿರ್ಧಾರವಾಗಿದೆ.

ಮೂರು ಕಣಿವೆ ಸ್ಥಾನಗಳ ಪೈಕಿ, ಮೂರನ್ನು ಎನ್‌ಸಿ ಗೆಲ್ಲಬಹುದು ಅಥವಾ ಎನ್‌ಸಿ ಎರಡು ಮತ್ತು ಪಿಡಿಪಿ ಒಂದನ್ನು ಗೆಲ್ಲಬಹುದು. ಈ ಎರಡೂ ಪಕ್ಷಗಳು ‘ಇಂಡಿಯಾ’ ಮೈತ್ರಿಕೂಟದ ಭಾಗವಾಗಿದ್ದು, ಮೂರೂ ಸ್ಥಾನಗಳು ಇಂಡಿಯಾ ಕೂಟದ ಪಾಲಾಗಲಿವೆ. ಜಮ್ಮುವಿನ 2 ಸ್ಥಾನಗಳಲ್ಲಿ ‘ಇಂಡಿಯಾ’ ಕೂಟದ ಅಭ್ಯರ್ಥಿಗಳೇ ಗೆಲ್ಲುವ ಸಾಧ್ಯತೆಗಳು ದಟ್ಟವಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...