ಜಮ್ಮು-ಕಾಶ್ಮೀರ | ಕೇಂದ್ರಾಡಳಿತ ಪ್ರದೇಶದಲ್ಲಿ ‘ಇಂಡಿಯಾ’ ಆಡಳಿತ ಹೇಗಿರಲಿದೆ?

Date:

ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್‌-ನ್ಯಾಷನಲ್ ಕಾನ್ಫರೆನ್ಸ್‌ (ಎನ್‌ಸಿ) ಒಳಗೊಂಡ ‘ಇಂಡಿಯಾ’ ಮೈತ್ರಿಕೂಟ ಗೆಲುವು ಸಾಧಿಸಿದೆ. ಕೇಂದ್ರ ಸರ್ಕಾರದ ಧೋರಣೆಯಿಂದ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸಲು ಸಜ್ಜಾಗಿದೆ. ‘ಇಂಡಿಯಾ’ ಮೈತ್ರಿಕೂಟ ಸರ್ಕಾರ ರಚಿಸಿದರೂ, ಕಣಿವೆ ರಾಜ್ಯವು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಪಿಮುಷ್ಠಿಯಲ್ಲಿ ಸಿಕ್ಕಿಕೊಂಡಿದೆ. ಹೀಗಾಗಿ, ಮುಂದಿನ ಆಡಳಿತವು ವಿಭಿನ್ನವಾಗಿರಲಿದೆ. ರಾಜ್ಯ ಸರ್ಕಾರದ ಹಕ್ಕು, ಅಧಿಕಾರಗಳಿಗೆ ಲೆಫ್ಟಿನೆಂಟ್ ಗವರ್ನರ್‌ ಮೂಲಕ ಬಿಜೆಪಿ ಕೊಕ್ಕೆ ಹಾಕಲಿದೆ.

2019ರ ಆಗಸ್ಟ್‌ನಲ್ಲಿ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಜಮ್ಮು-ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನವನ್ನು ಮೋದಿ ಸರ್ಕಾರ ಕಸಿದುಕೊಂಡಿತು. ಮಾತ್ರವಲ್ಲದೆ, ರಾಜ್ಯದ ಸ್ಥಾನವನ್ನೂ ಕಿತ್ತುಕೊಂಡು, ರಾಜ್ಯವನ್ನು ಇಬ್ಬಾಗ ಮಾಡಿ ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಿತು. ಯಾವುದೇ ಪಕ್ಷ ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸಿದರೂ, ತನ್ನ ಅಣತಿ, ಅಧಿಕಾರ ಇರುವಂತೆ ಮಾಡಿಕೊಂಡಿತು.

ಇದೇ ಅಧಿಕಾರದ ಮೇಲೆ, ಈಗ ಚುನಾವಣಾ ಫಲಿತಾಂಶ ಹೊರಬರುವುದಕ್ಕೂ ಮುನ್ನವೇ ಲೆಫ್ಟಿನೆಂಟ್ ಗವರ್ನರ್‌ಗೆ ವಿಶೇಷ ಅಧಿಕಾರ ನೀಡುವ ಮೂಲಕ, ಐವರು ಶಾಸಕರನ್ನು ಜಮ್ಮು-ಕಾಶ್ಮೀರ ವಿಧಾನಸಭೆಗೆ ನಾಮನಿರ್ದೇಶನ ಮಾಡಿಸಿದೆ. ಈ ಐವರೂ ಬಿಜೆಪಿಗರೇ ಆಗಿದ್ದಾರೆ. ಈ ಮೂಲಕ, ವಿಧಾನಸಭೆಯಲ್ಲಿ ತನ್ನ ಬಲಾಢ್ಯತೆಯನ್ನು ಬಿಜೆಪಿ ಉಳಿಸಿಕೊಳ್ಳಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೊಂದೇ ಅಲ್ಲದೆ, ಇಂತಹ ನಾನಾ ಪಿತೂರಿಗಳನ್ನು ಕೇಂದ್ರ ಸರ್ಕಾರ ಇನ್ನೂ ಮಾಡಲಿದೆ. ಈ ಪಿತೂರಿಗಳು ಮಾತ್ರವಲ್ಲದೆ, ಕೇಂದ್ರಾಡಳಿತ ಪ್ರದೇಶ ಎಂದ ಕೂಡಲೇ ರಾಜ್ಯ ಸರ್ಕಾರದ ಅಧಿಕಾರವೂ ಸೀಮಿತವಾಗಿರಲಿದೆ. ಪೊಲೀಸ್ ಸೇರಿದಂತೆ ಪ್ರಮುಖ ಆಡಳಿತ ಚುಕ್ಕಾಣಿ ಕೇಂದ್ರದ ಅಧೀನದಲ್ಲಿರಲಿದೆ.

ಕೇಂದ್ರಾಡಳಿತ ಪ್ರದೇಶಗಳ ಆಡಳಿತಕ್ಕೆ ಸಂಬಂಧಿಸಿದಂತೆ ಸಂವಿಧಾನದ 239ನೇ ವಿಧಿಯಡಿ ರಾಷ್ಟ್ರಪತಿಗೆ ವಿಶೇಷ ಅಧಿಕಾರ ಇರಲಿದೆ. ಅವರು, ತಮ್ಮ ವಿವೇಚನೆಗೆ ತಕ್ಕಂತೆ ಅಲ್ಲಿನ ಆಡಳಿತವನ್ನು ಲೆಫ್ಟಿನೆಂಟ್ ಗವರ್ನರ್‌ (ಆಡಳಿತಾಧಿಕಾರಿ) ಮೂಲಕ ನಡೆಸುತ್ತಾರೆ. ಅಲ್ಲದೆ, 239ಎ ವಿಧಿಯಡಿ ಪುದುಚೇರಿಗೆ ಅನ್ವಯಿಸುವ ಎಲ್ಲ ನೀತಿ, ನಿರ್ಬಂಧ, ಹಕ್ಕುಗಳು ಜಮ್ಮು-ಕಾಶ್ಮೀರಕ್ಕು ಅನ್ವಯಿಸುತ್ತವೆ.

ಈಗ, ಜಮ್ಮು ಕಾಶ್ಮೀರದ ಸಾರ್ವಜನಿಕ ಸುವ್ಯವಸ್ಥೆ ಮತ್ತು ಪೋಲಿಸ್ ಇಲಾಖೆ ಹಾಗೂ ಭ್ರಷ್ಟಾಚಾರ ನಿಗ್ರಹ ಘಟಕಗಳು ಲೆಫ್ಟಿನೆಂಟ್ ಗವರ್ನರ್‌ ಅಡಿಯಲ್ಲಿ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುತ್ತದೆ. ಪೊಲೀಸ್ ಇಲಾಖೆಯ ನಿಯಂತ್ರಣ, ಕಾರ್ಯನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ.

ಈ ವರದಿ ಓದಿದ್ದೀರಾ?: ಮೋದಿ-ಆರ್‌ಎಸ್‌ಎಸ್‌ ಒಳಜಗಳ: ಕಗ್ಗಂಟಾಗಿಯೇ ಉಳಿದ ಬಿಜೆಪಿ ಅಧ್ಯಕ್ಷ ಹುದ್ದೆ!

ಅಲ್ಲದೆ, ಹಣಕಾಸು ಮಸೂದೆಯೂ ಸೇರಿದಂತೆ ಹಣಕಾಸು ಬಾಧ್ಯತೆಯ ಮಸೂದೆಗಳನ್ನು ವಿಧಾನಸಭೆಯಲ್ಲಿ ಮಂಡಿಸಲು, ಅಂಗೀಕರಿಸಲು ಮೊದಲೇ ಆಡಳಿತಾಧಿಕಾರಿಯಿಂದ ಸಮ್ಮತಿ ಪಡೆಯಬೇಕು. ಲೆಫ್ಟಿನೆಂಟ್ ಗವರ್ನರ್‌ ಶಿಫಾರಸು ಪಡೆಯದೆ, ಇಂತಹ ಮಸೂದೆಗಳನ್ನು ಮಂಡಿಸಲು ಸಾಧ್ಯವಾಗುವುದಿಲ್ಲ. ವಾಸ್ತವದಲ್ಲಿ, ಭಾಗಶಃ ಎಲ್ಲ ಮಸೂದೆಗಳು ಹಣಸಾಕು ಬಾಧ್ಯತೆಯನ್ನು ಹೊಂದಿರುತ್ತವೆಯಾದ್ದರಿಂದ, ಇದರ ಸಂಪೂರ್ಣ ನಿಯಂತ್ರಣ ಆಡಳಿತಾಧಿಕಾರಿ ಮೂಲಕ ಕೆಂದ್ರದ ಕೈಯಲ್ಲಿರುತ್ತದೆ.

ಅಡ್ವೊಕೇಟ್ ಜನರಲ್ ಮತ್ತು ಕಾನೂನು ಅಧಿಕಾರಿಗಳ ನೇಮಕ ಹಾಗೂ ಕಾನೂನು ಕ್ರಮಗಳು ಮತ್ತು ಮಂಜೂರಾತಿಗಳಿಗೆ ಸಂಬಂಧಿಸಿದ ನಿರ್ಧಾರಗಳನ್ನೂ ಆಡಳಿತಾಧಿಕಾರಿ ತೆಗೆದುಕೊಳ್ಳುತ್ತಾರೆ. ಜೊತೆಗೆ, ಆಡಳಿತಾಧಿಕಾರಿಯು ತನ್ನ ವಿವೇಚನಾ ಅಧಿಕಾರದ ಮೇಲೆ ಯಾವುದೇ ವಿಷಯದ ಮೇಲೆ ನಿರ್ಧರವನ್ನು ತೆಗೆದುಕೊಳ್ಳಬಹುದು. ಅವರ ನಿರ್ಧಾರವೇ ಅಂತಿಮವಾಗಿರುತ್ತದೆ.

ಹೀಗಾಗಿ, ಜಮ್ಮು-ಕಾಶ್ಮೀರದ ಬಹುತೇಕ ಆಡಳಿತ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೈಯಲ್ಲಿರುತ್ತದೆ. ಒಮರ್ ಅಬ್ದುಲ್ಲಾ ಅವರು ಮುಂದಿನ ಮುಖ್ಯಮಂತ್ರಿ ಎಂದು ಎನ್‌ಸಿ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಿಸಿದ್ದಾರೆ. ಒಮರ್ ಅಬ್ಲುಲ್ಲಾ ಅವರು ಈ ಹಿಂದೆಯೇ ಮುಖ್ಯಮಂತ್ರಿಯಾಗಿದ್ದರು. ಆಗ ಅವರು ಸ್ವತಂತ್ರವಾಗಿ ಆಡಳಿತ ನಡೆಸಿದ್ದರು. ಆದರೆ, ಈಗ ಅವರು ಕೇಂದ್ರದ ಹಿಡಿತಕ್ಕೊಳಪಟ್ಟು ಆಡಳಿತ ನಡೆಸಬೇಕಾಗುತ್ತದೆ. ಅವರ ಹಿಂದಿನ ಆಡಳಿತಕ್ಕೂ, ಮುಂದಿನ ಆಡಳಿತಕ್ಕೂ ಭಾರೀ ವ್ಯತ್ಯಾಸವಿರಲಿದೆ. ಈ ನಡುವೆ, ಜಮ್ಮು-ಕಾಶ್ಮೀರಕ್ಕೆ ಸಂಪೂರ್ಣ ರಾಜ್ಯತ್ವವನ್ನು ಮರು ಸ್ಥಾಪಿಸಬೇಕೆಂಬ ಒತ್ತಾಯವು ಹೆಚ್ಚಾಗುತ್ತಿದೆ. ಜಮ್ಮು-ಕಾಶ್ಮೀರ ವಿಭಿನ್ನ ಪರಿಸ್ಥಿತಿಯನ್ನು ಎದುರಿಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...