ಜಮ್ಮು-ಕಾಶ್ಮೀರ ಫಲಿತಾಂಶ | ಮಾಜಿ ಸಿಎಂ ಮೆಹಬೂಬಾ ಮುಫ್ತಿ ಮಗಳು ಇಲ್ತಿಜಾ ಸೋಲು

Date:

ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಕಾಂಗ್ರೆಸ್‌ ಮತ್ತು ನ್ಯಾಷನಲ್ ಕಾನ್ಫರೆನ್ಸ್‌ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದು, ಗೆಲುವಿನ ಹಾದಿಯಲ್ಲಿದೆ. ಕೆಲವು ಕ್ಷೇತ್ರಗಳ ಮತ ಎಣಿಕೆ ಮುಗಿದಿದ್ದು, ಬಿಜ್‌ಬೆಹರಾ ಕ್ಷೇತ್ರದಲ್ಲಿ ಸ್ಪರ್ಥಿಸಿದ್ದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಮಗಳು ಇಲ್ತಿಜಾ ಮುಫ್ತಿ ಸೋಲುಂಡಿದ್ದಾರೆ.

ಇಲ್ತಿಜಾ ಅವರು ನ್ಯಾಷನಲ್ ಕಾನ್ಫರೆನ್ಸ್‌ನ ಅಭ್ಯರ್ಥಿ ಬಶೀರ್ ಅಹ್ಮದ್ ವೀರಿ ಅವರ ವಿರುದ್ಧ 4,000 ಮತಗಳಿಂದ ಸೋಲುಂಡಿದ್ದಾರೆ.

2019ರಲ್ಲಿ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ್ದ ಸಮಯದಲ್ಲಿ ಕೇಂಧ್ರ ಸರ್ಕಾರ ಮೆಹಬೂಬಾ ಮುಫ್ತಿ ಅವರನ್ನು ಗೃಹ ಬಂಧನದಲ್ಲಿರಿಸಿತ್ತು. ಈ ವೇಳೆ, ಇಲ್ತಿಜಾ ಅವರು ರಾಜಕಾರಣದಲ್ಲಿ ಮುನ್ನೆಲೆ ಬಂದಿದ್ದರು. ತಮ್ಮ ತಾತ, ಮಾಜಿ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರು ಪ್ರತಿನಿಧಿಸಿದ್ದ ಬಿಜ್‌ಬೆಹರಾ ಕ್ಷೇತ್ರದಲ್ಲಿ ಈ ಬಾರಿ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆದರೆ, ಸೋಲುಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, 2019ರ ಫೆಬ್ರವರಿಯಲ್ಲಿ 44 ಯೋಧರು ಸಾವನ್ನಪ್ಪಿದ್ದ ಪ್ರದೇಶ ಪುಲ್ವಾಮಾದಲ್ಲಿ ಸ್ಪರ್ಧಿಸಿದ್ದ ಪಿಡಿಪಿ ಯುವ ಘಟಕದ ಅಧ್ಯಕ್ಷ ವಹೀದ್ ಪರ್ರಾ ಅಜೇಯ ಗೆಲುವು ಸಾಧಿಸಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್‌ನ ಖಲೀಲ್ ಬಂದ್ ವಿರುದ್ಧ 7,000 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...