ಶಾಸಕತ್ವದಿಂದ ಜನಾರ್ದನ ರೆಡ್ಡಿ ಅನರ್ಹ: ಗಂಗಾವತಿ ರಾಜಕೀಯಕ್ಕೆ ರೆಡ್ಡಿ ಪತ್ನಿ ಎಂಟ್ರಿ?

Date:

ಅಕ್ರಮ ಗಣಿಗಾರಿಕೆ ಮತ್ತು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಪ್ರಕರಣದಲ್ಲಿ ಜನಾರ್ದನ ರೆಡ್ಡಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಬೆನ್ನಲ್ಲೇ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ರೆಡ್ಡಿ ಪ್ರತಿನಿಧಿಸುತ್ತಿದ್ದ ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ‌‌ ಉಪಚುನಾವಣೆ ನಡೆಯಲಿದ್ದು, ಗಂಗಾವತಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

2008-2012ರಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಜನಾರ್ದನ ರೆಡ್ಡಿ ಸಚಿವರಾಗಿದ್ದರು. ಬಳ್ಳಾರಿ ಜಿಲ್ಲೆಯನ್ನು ರೆಡ್ಡಿ ಸಹೋದರರು ತಮ್ಮ ಕೋಟೆಯನ್ನಾಗಿ ಮಾಡಿಕೊಂಡಿದ್ದರು. ಹೆಗ್ಗಿಲ್ಲದೆ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದರು. ರೆಡ್ಡಿ ವಿರುದ್ಧ 2013ರಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣ ದಾಖಲಾದ ಬಳಿಕ, ಅವರ ರಾಜಕೀಯ ಭವಿಷ್ಯ ಅಂತ್ಯಗೊಂಡಿತ್ತು. ಬಳ್ಳಾರಿ ಪ್ರವೇಶಿಸದಂತೆ ನ್ಯಾಯಾಲಯ ನಿರ್ಬಂಧವನ್ನೂ ಹೇರಿತ್ತು. ಬಳ್ಳಾರಿಯಿಂದ ಹೊರಹಾಕಲ್ಪಟ್ಟಿದ್ದ ರೆಡ್ಡಿಗೆ 10 ವರ್ಷಗಳ ಬಳಿಕ ಮತ್ತೆ ರಾಜಕೀಯ ನೆಲೆ ಕೊಟ್ಟಿದ್ದು, ಕೊಪ್ಪಳ ಜಿಲ್ಲೆಯ ಗಂಗಾವತಿ.

2023ರ ವಿಧಾನಸಭಾ ಚುನಾವಣೆಯಲ್ಲಿ ಕೆಆರ್‌ಪಿ ಪಕ್ಷ ಕಟ್ಟಿ, ಗಂಗಾವತಿಯಲ್ಲಿ ಸ್ಪರ್ಧಿಸಿ ಗೆದ್ದರು. ಬಳಿಕ, ಮರಳಿ ಬಿಜೆಪಿ ಸೇರಿದರು. ಇದೀಗ, ಶಾಸಕತ್ವದಿಂದ ರೆಡ್ಡಿಯನ್ನು ಅನರ್ಹಗೊಳಿಸಲಾಗಿದೆ. ಗಂಗಾವತಿ ಶಾಸಕ ಸ್ಥಾನ ಖಾಲಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೆಡ್ಡಿ ಅನರ್ಹತೆ ಬೆನ್ನಲ್ಲೇ ಗಂಗಾವತಿಯಲ್ಲಿ‌ ರಾಜಕೀಯ ಚಟುವಟಿಕೆಗಳು ಮುನ್ನೆಲೆಗೆ ಬಂದಿವೆ. ಉಪಚುನಾವಣೆಯಲ್ಲಿ ಬಿಜೆಪಿಯಿಂದ ರೆಡ್ಡಿ ಅವರ ಪತ್ನಿ ಅರುಣಾ ಅವರು ಕಣಕ್ಕಿಳಿಯಬಹುದು ಎಂವ ಅಭಿಪ್ರಾಯಗಳು ಕ್ಷೇತ್ರದಲ್ಲಿ ವ್ಯಕ್ತವಾಗುತ್ತಿವೆ. ಇನ್ನು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕೇಳಿಬಂದ ಆರೋಪಗಳು, ಬಿಜೆಪಿಯ ಜನಾಕ್ರೋಶ ಯಾತ್ರೆಯು ಜನರ ಅಭಿಪ್ರಾಯವನ್ನು ಸರ್ಕಾರದ ವಿರುದ್ಧ ರೂಪಿಸಿವೆಯೇ ಅಥವಾ ಜನರು ಸರ್ಕಾರದ ಪರವಾಗಿ ಒಲವು ಹೊಂದಿದ್ದಾರೆ ಎಂಬುದನ್ನು ಈ ಉಪಚುನಾವಣೆ ಸೂಚಿಸುತ್ತದೆ ಎಂದೂ‌ ಹೇಳಲಾಗುತ್ತಿದೆ.

ಆಡಳಿತಾರೂಢ ಕಾಂಗ್ರೆಸ್‌ಗೆ ಉಪಚುನಾವಣೆಯು‌ ಪ್ರತಿಷ್ಠೆಯ ಕಣವಾಗಿರುತ್ತದಾದ್ದರಿಂದ, ಗಂಗಾವತಿಯಲ್ಲಿ ಗೆಲ್ಲಲೇಬೇಕೆಂಬ ಹಂಬಲವಿದೆ. ಬಿಜೆಪಿಗೆ ತನ್ನ ನೆಲೆ‌ ಉಳಿಸಿಕೊಳ್ಳುವ ಧಾವಂತವಿದೆ. ಸದ್ಯ ಎರಡೂ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಈಗಾಗಲೇ ಸಕ್ರಿಯವಾಗಿದ್ದು, ಟಿಕೆಟ್‌ಗಾಗಿ ಬೇಡಿಕೆ‌ ಇಡುತ್ತಿದ್ದಾರೆ.

ಬಿಜೆಪಿಯಲ್ಲಿ ರೆಡ್ಡಿ ಅವರ ಪತ್ನಿ ಅರುಣಾ ಅವರು‌ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಆದರೆ, 2024ರ ಲೋಕಸಭಾ ಚುನಾವಣೆಯಲ್ಲಿ‌ ಬಿಜೆಪಿ‌ ಸ್ಪರ್ಧಿಸಿದ್ದ ಅವರು ಹೀನಾಯವಾಗಿ ಸೋತಿದ್ದರು. ಆ ಸೋಲು ಮತ್ತು ಹೆಚ್ಚಿನ‌ ರಾಜಕೀಯ ಅನುಭವ, ಪಾಲ್ಗೊಳ್ಳುವಿಕೆ‌ ಇಲ್ಲ ಎಂಬ ಕಾರಣ ನೀಡಿ ಅವರಿಗೆ ಟಿಕೆಟ್ ನಿರಾಕರಿಸಲೂ ಬಹುದು ಎಂದು ಹೇಳಲಾಗುತ್ತಿದೆ. ಆದಾಗ್ಯೂ, ಅರುಣಾ ಅವರಿಗೆ ಮಾಜಿ ಸಂಸದ ಕರಡಿ ಸಂಗಣ್ಣ, ಬಿಜೆಪಿ ನಾಯಕ ಪರಣ್ಣ ಮುನವಳ್ಳಿ ಮತ್ತು ಮಾಜಿ ಎಂಎಲ್‌ಸಿ ಎಚ್‌ಆರ್ ಶ್ರೀನಾಥ್ ಅವರ ಬೆಂಬಲವಿದೆ. ಅವರೆಲ್ಲರೂ ಅರುಣಾ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸುವ ಸಾಧ್ಯತೆಗಳಿವೆ.

ಇನ್ನು, ಕಾಂಗ್ರೆಸ್‌ನಿಂದ ಬಸವರಾಜ್ ಹಿಟ್ನಾಳ್‌ ಕುಟಂಬ, 2023ರಲ್ಲಿ ರೆಡ್ಡಿ ವಿರುದ್ಧ ಸೋತಿದ್ದ ಇಕ್ಬಾಲ್ ಅನ್ಸಾರಿ ಸೇರಿದಂತೆ ಪ್ರಮುಖರು ಟಿಕೆಟ್ ಆಕಾಂಕ್ಷಿಗಳ ರೇಸ್‌ನಲ್ಲಿದ್ದಾರೆ.

ಸದ್ಯ, ಚುನಾವಣಾ ಆಯೋಗ ಚುನಾವಣೆಯನ್ನು ಘೋಷಿಸಿಲ್ಲ. ಚುನಾವಣೆ ಘೋಷಣೆಯಾದ ಬಳಿಕ, ಯಾರಿಗೆ ಟಿಕೆಟ್ ಸಿಗಲಿದೆ. ಯಾರು ಬಂಡಾಯ ಏಳಲಿದ್ದಾರೆ ಎಂಬುದು ಗೊತ್ತಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...