ಶಾಸಕ ಸ್ಥಾನದಿಂದ ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಅನರ್ಹ

Date:

ಅಕ್ರಮ ಗಣಿಗಾರಿಕೆ ನಡೆಸಿ ಸರ್ಕಾರದ ಬೊಕ್ಕಸಕ್ಕೆ 800 ಕೋಟಿ ರೂ.ಗಳಿಗೆ ಅಧಿಕ ನಷ್ಟ ಉಂಟು ಮಾಡಿದ್ದ ಪ್ರಕರಣದಲ್ಲಿ ಬಿಜೆಪಿ ನಾಯಕ ಜನಾರ್ದನ ರೆಡ್ಡಿಗೆ ಸಿಬಿಐ ಕೋರ್ಟ್‌ ಶಿಕ್ಷೆ ವಿಧಿಸಿದೆ. ಈ ಬೆನ್ಬಲ್ಲೇ ಶಾಸಕ‌ ಸ್ಥಾನದಿಂದ ಜನಾರ್ದನ ರೆಡ್ಡಿಯನ್ನು ಅನರ್ಹಗೊಳಿಸಲಾಗಿದೆ.

ಜನಾರ್ದನ ರೆಡ್ಡಿ ಕೊಪ್ಪಳ‌ ಜಿಲ್ಲೆಯ ಗಂಗಾವತಿ‌ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಓಬಳಾಪುರಂ ಮೈನಿಂಗ್ ಕಂಪನಿ(ಒಎಂಸಿ)ಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ನೀಡಿತ್ತು. ಈ ಬೆನ್ನಲ್ಲೇ, ಶಾಸಕ ಸ್ಥಾನದಿಂದ ರೆಡ್ಡಿಯನ್ನು ಅನರ್ಹಗೊಳಿಸಲಾಗಿದೆ. ಈ ಬಗ್ಗೆ ವಿಧಾನಸಭೆ ಕಾರ್ಯದರ್ಶಿಗಳು ಅಧಿಕೃತ ಮಾಹಿತಿ ನೀಡಿದ್ದಾರೆ.

ಜನಪ್ರತಿನಿಧಿಗಳ ಕಾಯ್ದೆ ಪ್ರಕಾರ, ಕೋರ್ಟ್ ನಿಂದ ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳ ಸದಸ್ಯತ್ವ ರದ್ದಾಗುತ್ತದೆ. ಅದರಂತೆ, ಜನಾರ್ದನ ರೆಡ್ಡಿ ಶಾಸಕತ್ವ ಕಳೆದುಕೊಂಡಿದ್ದಾರೆ. ಮಾತ್ರವಲ್ಲದೆ, ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾದ ನಂತರವೂ 6 ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...