ಜನತಾ ದರ್ಶನ | ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿ: ಸಿಎಂಗೆ ರಮೇಶ್ ಬಾಬು ಪತ್ರ

Date:

ರಾಜ್ಯ ಸರ್ಕಾರಗಳು ಅಶಿಸ್ತಿನಿಂದ ವರ್ತಿಸುವ ಮತ್ತು ಬೇಜವಾಬ್ದಾರಿಯ ಕೆಲಸ ಮಾಡುವ ಸಿಬ್ಬಂದಿಗಳ ಮೇಲೆ ಹೊಣೆಗಾರಿಕೆಯನ್ನು ನಿಗದಿ ಮಾಡಿ ಶಿಸ್ತು ಕ್ರಮ ಕೈಗೊಳ್ಳದೇ ಹೋದರೆ ಸಾರ್ವಜನಿಕ ಹಿತಾಸಕ್ತಿಯಿಂದ ತಾವು ಕೈಗೊಂಡಿರುವ ಜನತಾ ದರ್ಶನದಲ್ಲಿ ಸಾರ್ವಜನಿಕ ಅರ್ಜಿಗಳ ಮತ್ತು ದೂರುಗಳ ಸಂಖ್ಯೆ ಹೆಚ್ಚುತ್ತಾ ಹೋಗುತ್ತದೆ. ಆಡಳಿತ ಯಂತ್ರಕ್ಕೆ ನಿಯಮಾವಳಿಗಳ ಮುಖಾಂತರ ಚುರುಕು ಮುಟ್ಟಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್‌ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ರಮೇಶ್ ಬಾಬು ಪತ್ರದ ಮೂಲಕ ಮನವಿ ಮಾಡಿದ್ದಾರೆ.

ನ.27ರಂದು ನಡೆದ ಜನತಾ ದರ್ಶನದ ವೇಳೆ ಅಧಿಕಾರಿಗಳ ದೂರುಗಳ ಸರಮಾಲೆ ಬಂದ ಹಿನ್ನೆಲೆಯಲ್ಲಿ ರಮೇಶ್ ಬಾಬು ಈ ಪತ್ರ ಬರೆದಿದ್ದಾರೆ.

“ಆಡಳಿತ ಯಂತ್ರಕ್ಕೆ ನಿಯಮಾವಳಿಗಳ ಮುಖಾಂತರ ಚುರುಕು ಮುಟ್ಟಿಸದೇ ಹೋದರೆ ಜನಸಾಮಾನ್ಯರು ಪ್ರತೀ ದಿನ ತೊಂದರೆ ಅನುಭವಿಸಬೇಕಾಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿ ಆಡಳಿತ ಮತ್ತು ಸಿಬ್ಬಂದಿ ಇಲಾಖೆಯ ಮುಖಾಂತರ ರಾಜ್ಯ ಸರ್ಕಾರದ ಸರ್ಕಾರೀ ನೌಕರರ ಸೇವಾ ನಿಯಮಗಳಿಗೆ ತಿದ್ದುಪಡಿ ತಂದು ಇಂತಹ ಸಿಬ್ಬಂದಿಗೆ ಹೊಣೆಗಾರಿಕೆ ನಿಗದಿಪಡಿಸುವುದರ ಜೊತೆಗೆ ಶೀಘ್ರ ಕ್ರಮ ಕೈಗೊಳ್ಳಿ” ಎಂದು ಪತ್ರದಲ್ಲಿ ವಿನಂತಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಮ್ಮ ನಾಯಕತ್ವದಲ್ಲಿ ನ.27ರಂದು ನಡೆದ ಜನತಾದರ್ಶನ ಕಾರ್ಯಕ್ರಮವು ಅತ್ಯಂತ ಸಮರ್ಪಕವಾಗಿ ಮತ್ತು ಯಶಸ್ವಿಯಾಗಿ ನಡೆದಿದೆ. ರಾಜ್ಯದ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿರುವ ಮುಖ್ಯಮಂತ್ರಿಗಳನ್ನು ನೇರ ಭೇಟಿಯಾದರೆ ತಮ್ಮ ಸಮಸ್ಯೆ ಬಗೆಹರಿಯಬಹುದು ಮತ್ತು ರಾಜ್ಯದ ಮುಖ್ಯಮಂತ್ರಿಗಳನ್ನು ಭೇಟಿಯಾಗುವ ಅವಕಾಶದ ಕಾರಣಕ್ಕೂ ಜನಸಾಮಾನ್ಯರು ಜನತಾ ದರ್ಶನವನ್ನು ಬಯಸುತ್ತಾರೆ. ದೂರದ ಹಳ್ಳಿಗಳಿಂದ ಬೆಂಗಳೂರಿಗೆ ಬಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡುವುದು ಕಷ್ಟವಾದರೂ ಸಮಸ್ಯೆಗೆ ಪರಿಹಾರ ಬಯಸಿ ಮತ್ತು ಮುಖ್ಯಮಂತ್ರಿಗಳಲ್ಲಿ ವಿಶ್ವಾಸ ಇಟ್ಟು ಅತಿ ದೊಡ್ಡ ಸಂಖ್ಯೆಯಲ್ಲಿ ಜನತಾ ದರ್ಶನದ ಅವಕಾಶವನ್ನು ಬಳಸಿಕೊಂಡಿದ್ದಾರೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ರಾಜ್ಯ ಸರ್ಕಾರಕ್ಕೆ ಬಂದಿರುವ ಬಹುತೇಕ ಅರ್ಜಿಗಳಲ್ಲಿ ಕೆಳ ಹಂತದ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಉಡಾಫೆಯ ವರ್ತನೆ ನಿಚ್ಚಳವಾಗಿ ಕಾಣುತ್ತಿದೆ. ವಿಶೇಷವಾಗಿ ಕಾರ್ಯಾಂಗದಲ್ಲಿ ಸಹಾಯಕ ಸಿಬ್ಬಂದಿ ನೆಪಗಳನ್ನು ಹೇಳಿ ಟಿಪ್ಪಣಿಗಳನ್ನು ಮುಂದೊಡ್ಡಿ ಜನಸಾಮಾನ್ಯರನ್ನು ಅಲೆಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಸಕಾಲ ಕಾಯಿದೆ ಜಾರಿಯಲ್ಲಿ ಇದ್ದರೂ ಅದನ್ನೂ ತಪ್ಪಿಸಿ ಜನರಿಗೆ ಸಬೂಬುಗಳನ್ನು ನೀಡಿ ದಿನನಿತ್ಯ ಅಲೆಸುವುದನ್ನು ಪರಿಪಾಠ ಮಾಡಿಕೊಂಡಿರುತ್ತಾರೆ. ಜನಸಾಮಾನ್ಯರಿಗೆ ನಿಗದಿತ ಸಮಯದಲ್ಲಿ ಅವರ ಕೆಲಸಗಳನ್ನು ಮಾಡಿಕೊಟ್ಟರೆ ಅವರು ಬೆಂಗಳೂರಿಗೆ ಅಲೆಯುವ ಅಥವಾ ಮುಖ್ಯಮಂತ್ರಿಗಳಿಗೆ, ಮಂತ್ರಿಗಳಿಗೆ ಭೇಟಿ ಮಾಡುವ ಅನಿವಾರ್ಯತೆ ತಪ್ಪುತ್ತದೆ. ಸಹಾಯಕ ಸಿಬ್ಬಂದಿಯಿಂದ ಸಾರ್ವಜನಿಕರ ಕೆಲಸಗಳಿಗೆ ಅಡ್ಡಿಯಾದರೆ ಅಥವಾ ನಿಧಾನವಾದರೆ ಅಂತಹ ಸಿಬ್ಬಂದಿಗಳ ಮೇಲೆ ತಕ್ಷಣ ಕ್ರಮ ಕೈಗೊಳ್ಳಲು ಮತ್ತು ಅಂತಹ ಸಿಬ್ಬಂದಿಗೆ ಕೂಡಲೇ ಶಿಕ್ಷೆ ವಿಧಿಸಲು ಸೇವಾ ನಿಯಮಗಳಲ್ಲಿ ಅವಕಾಶ ಇರುವುದಿಲ್ಲ. ನೈಸರ್ಗಿಕ ನಿಯಮದ ಕಾನೂನಿನ ಲಾಭವನ್ನು ಪಡೆದು ಬಹುತೇಕ ಸಹಾಯಕ ಸಿಬ್ಬಂದಿ ಶಿಸ್ತು ಕ್ರಮದಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಹಾಗಾಗಿ, ಆಡಳಿತ ಯಂತ್ರಕ್ಕೆ ನಿಯಮಾವಳಿಗಳ ಮುಖಾಂತರ ಚುರುಕು ಮುಟ್ಟಿಸಿ” ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಕಾಂಗ್ರೆಸ್ ಮುಖಂಡ ರಮೇಶ್ ಬಾಬು ವಿನಂತಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...