ಜೆಡಿಎಸ್‌ ಮತ್ತು ಬಿಜೆಪಿಯವರು ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆಸಿದ್ದಾರೆ: ಡಿ ಕೆ ಶಿವಕುಮಾರ್‌ ಆರೋಪ

Date:

“ಜೆಡಿಎಸ್‌ ಮತ್ತು ಬಿಜೆಪಿಯವರು ಸೇರಿಕೊಂಡು ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆಸುತ್ತಿದ್ದಾರೆ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಲ್ಲಿ (ಇ.ಡಿ) ಏನು ಮಾಡಿಸುತ್ತಿದ್ದಾರೆ ಎಂಬುದು ಗೊತ್ತಿದೆ. ಸಮಯ ಬಂದಾಗ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ರಾಮನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನನ್ನು ಕಟ್ಟಿ ಹಾಕಲು ಅದೇನು ರಾಜಕಾರಣ ಮಾಡುತ್ತಾರೊ ಮಾಡಲಿ. ನನ್ನನ್ನು ಜೈಲಿಗೆ ಕಳಿಸುತ್ತೇನೆ ಎಂದು ಹಿಂದೆ ನಮ್ಮ ಜಿಲ್ಲೆಯವರಷ್ಟೇ ಅಲ್ಲದೆ ಬೇರೆಯವರೂ ಹೇಳಿದ್ದರು. ನಾನು ಎಲ್ಲದಕ್ಕೂ ತಯಾರಿದ್ದೇನೆ. ಯಾವುದಕ್ಕೂ ಹೆದರುವುದಿಲ್ಲ” ಎಂದು ತಿರುಗೇಟು ನೀಡಿದರು.

ಹಿಂದೆಯೂ ಒಂದಾಗಿದ್ದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲೋಕಸಭಾ ಚುನಾವಣೆಯಲ್ಲಿ ಡಿ.ಕೆ. ಸಹೋದರರನ್ನು ಕಟ್ಟಿ ಹಾಕಲು ಬದ್ಧ ವೈರಿಗಳು ಮುಂದಾಗಿದ್ದಾರೆ. ಅವರು ಈಗಷ್ಟೇ ಅಲ್ಲ, ಹಿಂದೆಯೂ ಒಂದಾಗಿದ್ದರು. ಸುರೇಶ್ ಅವರ ಎದುರು ಹಿಂದೊಮ್ಮೆ ಒಬ್ಬರೇ ಅಭ್ಯರ್ಥಿಯನ್ನು ನಿಲ್ಲಿಸಿದ್ದರು. ಆದರೆ, ಸುರೇಶ್ ಅವರು ಮಾಡಿರುವ ಅಭಿವೃದ್ಧಿ ಕೆಲಸವನ್ನು ರಾಜ್ಯದ ಯಾವ ಸಂಸದರೂ ಮಾಡಿಲ್ಲ. ಅದಕ್ಕೆ ದಾಖಲೆಗಳಿವೆ. ಸುರೇಶ್ ವಿರುದ್ಧ ಸ್ಪರ್ಧಿಸಲು ಮುಂದಾಗಿರುವವರು ತಮ್ಮ ಕೈಲಿ ಅಧಿಕಾರವಿದ್ದಾಗ ಏನು ಮಾಡಿದ್ದಾರೆ” ಎಂದು ಪ್ರಶ್ನಿಸಿದರು.

ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎನ್ನುವ ಜೆಡಿಎಸ್ ನಾಯಕರಾದ ಎಚ್.ಡಿ. ದೇವೇಗೌಡರು ಮತ್ತು ಎಚ್‌.ಡಿ. ಕುಮಾರಸ್ವಾಮಿ ಅವರು, ಹಿಂದೆ ಮೋದಿ ವಿರುದ್ಧ ಏನು ಹೇಳಿಕೆ ನೀಡಿದ್ದರು ಎಂದು ನೆನಪಿಸಿಕೊಳ್ಳಲಿ. ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ದೇವೇಗೌಡರು ಹೇಳಿದ್ದಾಗ, ನಮ್ಮ ಮನೆಯಲ್ಲಿ ಜಾಗ ಕೊಡ್ತಿನಿ ಎಂದು ಮೋದಿ ಹೇಳಿದ್ದರಲ್ಲವೆ” ಎಂದು ಲೇವಡಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತು ತಪ್ಪಿದ ಮೋದಿ; ಮತ್ತೆ ಎದ್ದು ನಿಂತ ಅನ್ನದಾತರು

“ಬಿಡದಿ ಪ್ಲ್ಯಾನಿಂಗ್ ಅಥಾರಿಟಿಯನ್ನು ಗ್ರೇಟರ್ ಬೆಂಗಳೂರು ಅಂತಾ ನಾಮಕರಣ ಮಾಡಿ ನಕ್ಷೆ ತಯಾರಾಗುತ್ತಿದೆ. ರಾಮನಗರ ಮಾದರಿ ಜಿಲ್ಲೆಯಾಗಿ ಮಾಡಲು ಸಂಸದರು, ಶಾಸಕರು ನಿರ್ಧರಿಸಿದ್ದಾರೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುತ್ತೇವೆ” ಎಂದರು.

“ಬಿಡದಿ, ಆನೇಕಲ್​ಗೆ ಮೆಟ್ರೋ ವಿಸ್ತರಿಸಲು DPR​ ರೆಡಿ‌ ಮಾಡುತ್ತಿದ್ದೇವೆ. ಕ್ಷೇತ್ರದ ಅಭಿವೃದ್ಧಿಗೆ ರಾಮಲಿಂಗಾರೆಡ್ಡಿ ದೊಡ್ಡ ಕ್ರಾಂತಿ ಮಾಡುತ್ತಿದ್ದಾರೆ. ನನ್ನ ಜಿಲ್ಲೆಯ ಜನರ ಪರವಾಗಿ ರಾಮಲಿಂಗಾರೆಡ್ಡಿಗೆ ಅಭಿನಂದಿಸುತ್ತೇನೆ. ಪ್ಯಾಸೆಂಜರ್ ಸೀಟು ಅನುಕೂಲ ಆಗುತ್ತೆ. ಇದಕ್ಕೆ‌ ಕ್ಯಾಮೆರಾ, ಫೋನ್ ಚಾರ್ಜರ್ ಅಳವಡಿಸಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...