ಜೆಡಿಎಸ್ ಕೋಮುವಾದವನ್ನು ಅಥವಾ ಬಿಜೆಪಿ ಜಾತ್ಯತೀತತೆಯನ್ನು ಅಳವಡಿಸಿಕೊಳ್ಳುತ್ತವೆಯೇ: ಕಾಂಗ್ರೆಸ್‌ ಪ್ರಶ್ನೆ

Date:

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಿಜೆಪಿ ಮತ್ತು ಜೆಡಿಎಸ್‌ ಈಗ ಮಿತ್ರಪಕ್ಷಗಳಾಗಿವೆ. 2024ರ ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡಿರುವ ಜೆಡಿಎಸ್‌ ಬಿಜೆಪಿಯನ್ನು ಹೆಜ್ಜೆ ಹೆಜ್ಜೆಗೂ ಬೆಂಬಲಿಸುತ್ತಿದೆ.

ಜುಲೈ 17 ಮತ್ತು 18ರಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್‌ ಮಿತ್ರಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್‌ ಐಎಎಸ್‌ ಅಧಿಕಾರಿಗಳನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಸದಸ್ಯರನ್ನು ವಿಧಾನಸಭೆ ಸ್ಪೀಕರ್‌ ಯು ಟಿ ಖಾದರ್‌ ಅಮಾನತು ಮಾಡಿದ್ದರು. ಈ ವೇಳೆ ಬಿಜೆಪಿಯನ್ನು ಬೆಂಬಲಿಸಿ ಜೆಡಿಎಸ್‌ ಕೂಡ ಪ್ರತಿಭಟನೆ ನಡೆಸಿತ್ತು. ಅಲ್ಲದೆ ಬಿಜೆಪಿಯಂತೆ ಜೆಡಿಎಸ್‌ ಕೂಡ ಅಧಿವೇಶನದಿಂದ ಹೊರಗುಳಿದಿದೆ.

ಅಲ್ಲದೆ, ಗುರುವಾರ ರಾಜಭವನಕ್ಕೆ ಬಿಜೆಪಿ ಜೊತೆಗೆ ಜೆಡಿಎಸ್‌ ನಾಯಕರೂ ಭೇಟಿ ನೀಡಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದರು. ಈ ವೇಳೆ ಬಿಜೆಪಿ ಅಧಿಕೃತ ಲೆಟರ್‌ಹೆಡ್‌ಗೆ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಸಹಿ ಮಾಡಿ ಕುತೂಹಲ ಮೂಡಿಸಿದ್ದರು. ಇಂದೂ ಕೂಡ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಕಾಂಗ್ರೆಸ್‌ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದ ಕಾಂಗ್ರೆಸ್‌ ಟ್ವೀಟ್‌ ಮಾಡಿ ಎರಡೂ ಪಕ್ಷಗಳಿಗೆ ಟಾಂಗ್‌ ನೀಡಿದೆ. “ರಾಜ್ಯದಲ್ಲಿ ಹೊಸ ರಾಜಕೀಯ ಸಮ್ಮಿಶ್ರಣವೊಂದು ತಯಾರಾಗುತ್ತಿದೆ. ಈಗ ನಮಗಿರುವ ಪ್ರಶ್ನೆ, ಜೆಡಿಎಸ್ ಕೋಮುವಾದವನ್ನು ಅಳವಡಿಸಿಕೊಳ್ಳುತ್ತದೆಯೇ ಅಥವಾ ಬಿಜೆಪಿ ಜಾತ್ಯತೀತತೆಯನ್ನು ಅಳವಡಿಸಿಕೊಳ್ಳುತ್ತದೆಯೇ” ಎಂದು ಪ್ರಶ್ನಿಸಿದೆ.

“ಬೆಳವಣಿಗೆಗಳನ್ನು ನೋಡುತ್ತಿದ್ದರೆ ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವುದು ಕಾಣುತ್ತಿದೆ, ಥೇಟ್ ನಾಗವಲ್ಲಿಯ ತರ” ಎಂದು ಸಿನಿಮಾ ಪಾತ್ರ ಒಂದಕ್ಕೆ ಜೆಡಿಎಸ್‌ ನಡೆಯನ್ನು ಹೋಲಿಸಿ ಕಾಂಗ್ರೆಸ್‌ ಟೀಕಿಸಿದೆ.

ಈ ಸುದ್ದಿ ಓದಿದ್ದೀರಾ? ಕಲಾಪ ಬಹಿಷ್ಕರಿಸಿ ಸರ್ಕಾರದ ವಿರುದ್ಧ ಮುಂದುವರಿದ ಬಿಜೆಪಿ ಪ್ರತಿಭಟನೆ

ಮನುವಾದವೇ ಬಿಜೆಪಿ ಬೈಲಾ ಆಗಿದೆಯೇ?

“ಬಿಜೆಪಿಗೆ ದಲಿತರ ರಾಜಕೀಯ ಮತ್ತು ಸಾಮಾಜಿಕ ಏಳಿಗೆಯನ್ನು ಸಹಿಸಲಾಗುತ್ತಿಲ್ಲವೇ? ಬಿಜೆಪಿಯು ದಲಿತರ ತಲೆ ಮೇಲೆ ಚಡ್ಡಿ ಹೊರಿಸಿತ್ತು. ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ದುರುಪಯೋಗ ಮಾಡಿತ್ತು. ದಲಿತರಿಗೆ ಮಾತ್ರ ಚಪ್ಪಲಿ ಕಾಯುವ ಟೆಂಡರ್ ಮೀಸಲಿಟ್ಟಿತ್ತು. ಸೆಂಟ್ರಲ್ ವಿಸ್ತಾ, ರಾಮಮಂದಿರದ ಕಾರ್ಯಕ್ರಮಕ್ಕೆ ದಲಿತ ಸಮುದಾಯದ ರಾಷ್ಟ್ರಪತಿಗೆ ಆಹ್ವಾನಿಸಲಿಲ್ಲ. ಈಗ ದಲಿತ ಸಮುದಾಯದ ಉಪಸಭಾಪತಿಯ ಮುಖಕ್ಕೆ ಪೇಪರ್ ಎಸೆದು ಅವಮಾನಿಸಿದೆ. ದಲಿತರನ್ನು ಬಿಜೆಪಿ ಏಕಿಷ್ಟು ಕೇವಲವಾಗಿ ಕಾಣುತ್ತಿದೆ? ಮನುವಾದವೇ ಬಿಜೆಪಿಯ ಬೈಲಾ ಆಗಿದೆಯೇ?” ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...