ಕೋಮುವಾದಿ ಪಕ್ಷದ ಜೊತೆ ಜೆಡಿಎಸ್‌ ಹೋಗುವುದು ಅಚ್ಚರಿ ತಂದಿದೆ: ಬಿಜೆಪಿ ಸಂಸದ ಬಚ್ಚೇಗೌಡ

Date:

  • ‘ಸ್ವಪಕ್ಷದ ವಿರುದ್ಧವೇ ಸಂಸದ ಬಿ ಎನ್ ಬಚ್ಚೇಗೌಡ ಟೀಕಾಪ್ರಹಾರ’
  • ‘ಬಿಜೆಪಿ ಜೆಡಿಎಸ್‌ ಜೊತೆ ಹೋಗಿ ಮತ್ತಷ್ಟು ಶಕ್ತಿ ಕಳೆದುಕೊಳ್ಳಲಿದೆ’

ಜಾತ್ಯತೀತ ಎನಿಸಿರುವ ಜೆಡಿಎಸ್ ಪಕ್ಷ ಕೋಮುವಾದಿ ಬಿಜೆಪಿ ಜೊತೆ ಹೋಗುವುದು ಅಚ್ಚರಿಯಾಗಿದೆ ಎಂದು ಹೇಳುವ ಮೂಲಕ ಸ್ವಪಕ್ಷದ ವಿರುದ್ಧವೇ ಸಂಸದ ಬಿ ಎನ್ ಬಚ್ಚೇಗೌಡ ಟೀಕಾಪ್ರಹಾರ ನಡೆಸಿದರು.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಬಿಜೆಪಿ ಕೋಮುವಾದಿ, ಮತೀಯವಾದಿ ಪಕ್ಷ. ದೇವೇಗೌಡರು ಇರುವವರೆಗೂ ಬಿಜೆಪಿ ಜೊತೆ ಜೆಡಿಎಸ್ ಹೋಗುವುದಿಲ್ಲ ಎಂದುಕೊಂಡಿದ್ದೆ. ಅದು ಸುಳ್ಳಾಗುತ್ತಿದೆ” ಎಂದರು.

“ಜೆಡಿಎಸ್ ಮತ್ತು ಬಿಜೆಪಿ ಒಂದಾಗುತ್ತದೆ ಎನ್ನುವುದು ಜನರಿಗೆ ಗೋಪ್ಯದ ವಿಚಾರವಾಗಿತ್ತು. ಆದರೆ ಈಗ ಜನರಿಗೆ ಸ್ಪಷ್ಟವಾಗಿ ಗೊತ್ತಾಗಲಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರೆ ಬಿಜೆಪಿಗೆ ಅನಕೂಲಕ್ಕಿಂತ ಅನಾನುಕೂಲವೇ ಹೆಚ್ಚು. ಈ ಮೈತ್ರಿಯಿಂದ ಬಿಜೆಪಿಗೆ ಒಳ್ಳೆಯದಾಗುವುದಿಲ್ಲ. ಪಕ್ಷ ಮತ್ತಷ್ಟು ಶಕ್ತಿ ಕಳೆದುಕೊಳ್ಳಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ: ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ

ಜೆಡಿಎಸ್ ಮತ್ತು ಬಿಜೆಪಿ ಒಂದಾಗುವ ಕಾರಣದಿಂದಾಗಿಯೇ ಹೈಕಮಾಂಡ್ ನವರು ವಿರೋಧ ಪಕ್ಷದ ನಾಯಕನ ಆಯ್ಕೆಗೆ ತಡೆ ಮಾಡಿದ್ದಾರೆ ಅನ್ನಿಸುತ್ತಿದೆ. ದೊಡ್ಡ ಮಟ್ಟದ ನಾಯಕರು ಬಿಜೆಪಿಯಲ್ಲಿದ್ದಾರೆ. ಆದರೆ, ಹೈಕಮಾಂಡ್‌ ದೃಷ್ಟಿಯಲ್ಲಿ ಈಗ ಅವರೆಲ್ಲ ಕೆಲಸಕ್ಕೆ ಬಾರದ ನಾಯಕರು ಇರಬಹುದು” ಎಂದರು.

ಈ ಮೈತ್ರಿಯಿಂದ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಹುದ್ದೆಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ ಎಂದು ನನಗೆ ಅನ್ನಿಸುತ್ತಿದೆ. ಬಿಜೆಪಿಯವರು ಮಾಡುವುದೆಲ್ಲ ಸರಿ ಎಂದು ಹೇಳಲು ಆಗುವುದಿಲ್ಲ. ನಾನೂ ಪಕ್ಷದಲ್ಲಿ ಹಿರಿಯನಿದ್ದೇನೆ. ಕೆಲವು ವಿಚಾರ ನೋಡಿಕೊಂಡು ಸುಮ್ಮನೇ ಕೂರಲು ಆಗುವುದಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...