ನೀವು ಹೊರಗೆ ಸರಳರಾಮಯ್ಯ, ಒಳಗೆ ಐಶಾರಾಮಯ್ಯ: ಸಿಎಂ ವಿರುದ್ಧ ಕುಮಾರಸ್ವಾಮಿ ಮತ್ತೆ ವಾಗ್ದಾಳಿ

Date:

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾಗುತ್ತಾ ಬಂದಿದ್ದರೂ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಟೀಕೆ ಇನ್ನೂ ನಿಲ್ಲುತ್ತಿಲ್ಲ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿ ನಿನ್ನೆ(ನ.13) ಸರಣಿ ಟ್ವೀಟ್ ಮಾಡಿದ್ದ ಸಿಎಂ ಸಿದ್ದರಾಮಯ್ಯ, ರಾಜ್ಯದ ಬಡಜನರನ್ನು ಗುರಿಯಾಗಿಸಿಕೊಂಡು ರೂಪಿಸಿರುವ ಈ ಗ್ಯಾರಂಟಿಗಳ ಬಗ್ಗೆ ನಿಮಗೆ ಅಸೂಯೆ ಏಕೆ ಎಂದು ಪ್ರಶ್ನಿಸಿದ್ದರು. ಇದಕ್ಕೆ, ನಾನು ಹೇಳಿದ್ದನ್ನೇಕೆ ತಿರುಚುತ್ತೀರಿ? ಗ್ಯಾರಂಟಿಗಳ ಬಗ್ಗೆ ನನಗೇಕೆ ಹೊಟ್ಟೆಯುರಿ? ಎಂದು ಹೆಚ್ ಡಿ ಕುಮಾರಸ್ವಾಮಿ ಪ್ರತ್ಯುತ್ತರ ನೀಡಿದ್ದಾರೆ.

ಮಂಗಳವಾರ(ನ.14) ಬೆಳಗ್ಗೆ ಸುದೀರ್ಘವಾದ ಟ್ವೀಟ್ ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಸಿಎಂ ವಿರುದ್ಧ ಮುಗಿಬಿದ್ದಿದ್ದು, ‘ನೀವು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ. ಐಶಾರಾಮಿಯಾದ ನೀವು ಹೊರಗೆ ಸರಳರಾಮಯ್ಯ, ಒಳಗೆ ಐಶಾರಾಮಯ್ಯ ಹೌದಲ್ಲವೇ? ನಾನು ಹೇಳಿದ್ದನ್ನೇಕೆ ತಿರುಚುತ್ತೀರಿ? ಗ್ಯಾರಂಟಿಗಳ ಬಗ್ಗೆ ನನಗೇಕೆ ಹೊಟ್ಟೆಯುರಿ? ನಾನು ಹೇಳಿದ್ದೇನು? ನೀವು ವಕ್ಕರಿಸುತ್ತಿರುವುದೇನು? ಕಾಸು ಕೊಟ್ಟು ಸಮೀಕ್ಷೆ ಮಾಡಿಸಿಕೊಂಡ ಹಾಗಲ್ಲ ಇದು. 5 ಗ್ಯಾರಂಟಿ ಕೊಟ್ಟಿದ್ದೀರಿ, ಸರಿ. ಅದನ್ನು ನೆಟ್ಟಗೆ ಕೊಡಲು ವಿಫಲರಾಗಿದ್ದೀರಿ ಎಂದಿದ್ದೇನೆ. ಇಲ್ಲವೆಂದರೆ ಹೇಳಿ, ಬಹಿರಂಗ ಚರ್ಚೆಗೆ ಬರುತ್ತೇನೆ. ಎಲ್ಲಿಗೆ ಬರಲಿ? ಎಂದು ತಿಳಿಸಿದ್ದಾರೆ.

ಕೋಟ್ಯಂತರ ಫಲಾನುಭವಿಗಳು ಸಂಭ್ರಮಿಸುತ್ತಿದ್ದಾರೆಯೇ? ಸತ್ಯ ಹೇಳಿ. ಮಾಧ್ಯಮಗಳು ಸುಳ್ಳು ಹೇಳುತ್ತಿವೆಯೇ? ಪೊಳ್ಳು ಬರೆಯುತ್ತಿವೆಯೇ? ನಿಮ್ಮ ಪ್ರಕಾರ ಮಾಧ್ಯಮಗಳಿಗೆ, ಪ್ರತಿಪಕ್ಷಗಳಿಗೆ ಸುಳ್ಳು ಹೇಳುವುದೇ ಕೆಲಸವೇ? ಹಿಂದೆ ನೀವು ಮಾಡಿದ್ದೂ ಇದೇನಾ? ನಿಮ್ಮ ‘ಸಮಾಜವಾದಿ ಆತ್ಮಸಾಕ್ಷಿ’ ಹೀಗಂತ ಹೇಳುತ್ತಿದೆಯಾ? ಗ್ಯಾರಂಟಿಗಳನ್ನು ಕಾಂಗ್ರೆಸ್ ಮತದಾರರಿಗಷ್ಟೇ ತಂದಿದ್ದೀರಿ ಎಂದು ನಾನು ಹೇಳಿದ್ದೇನೆಯೇ? ಬಹುಶಃ ನಿಮಗೆ ಅಂಥ ಮನಃಸ್ಥಿತಿ ಇದ್ದರೂ ಇದ್ದೀತು’ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ಯಾರಂಟಿಗಳು ಸರಿಯಾಗಿ ಅನುಷ್ಠಾನವಾಗಿಲ್ಲ ಎಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೇನೆ. ಹಾಗಾದರೆ, ಮಾಧ್ಯಮಗಳಿಗೆ ಸತ್ಯ ತಿಳಿಸುವುದೇ ಅಪರಾಧವೇ? ನಿಮ್ಮ ದರ್ಬಾರಿನಲ್ಲಿ ಮಾಧ್ಯಮಗೋಷ್ಠಿಯೂ ಮಹಾಪಾಪವೇ? ನಿಮ್ಮ ‘ಸಿದ್ದಾಂತರಾಳ’ ಹೀಗೆಂದು ಅಪ್ಪಣೆ ಕೊಟ್ಟಿದೆಯಾ? ಹಳ್ಳಿಗಳಿಗೆ ಹೋಗಿದ್ದೇನೆ, ಫಲಾನುಭವಿಗಳನ್ನು ಮಾತನಾಡಿಸಿದ್ದೇನೆ. ಸತ್ಯ ಹೇಳಿದ್ದೇನೆ. ಬನ್ನಿ, ನಿಮಗೂ ಸತ್ಯದರ್ಶನ ಮಾಡಿಸುತ್ತೇನೆ ಎನ್ನುವ ಮೂಲಕ ಗ್ಯಾರಂಟಿಗಳ ಜಾರಿಯಲ್ಲಿ ವೈಫಲ್ಯಗಳು ಆಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

‘ಐಶಾರಾಮಯ್ಯನವರೇ, ನನ್ನ ದನಿ ಬಡವರ ಪರ. ನಿಮ್ಮಂತೆ ಯಾರ ಮುಲಾಜಿಗೂ ಬಿದ್ದವನಲ್ಲ ನಾನು. ರಾಜ್ಯಕ್ಕೆ ರಾಜ್ಯವೇ ಬರದ ಬೆಂಕಿಯಲ್ಲಿ ಬೇಯುತ್ತಿದೆ. ರೈತಸಂಕುಲ ನರಕದಲ್ಲಿದೆ. ಅವರ ಸಾಲಮನ್ನಾ ಮಾಡಿ. #YstTax #SstTax ಕಲೆಕ್ಷನ್ ಬದಿಗಿಟ್ಟು ರೈತರ ಪರ ನಿಲ್ಲಿ. ಗ್ಯಾರಂಟಿ ಗ್ಯಾರಂಟಿ ಎನ್ನುತ್ತಿದ್ದೀರಲ್ಲ, ರೈತರ ಬದುಕಿಗೆ ಗ್ಯಾರಂಟಿ ಕೊಡಿ. ನಾನು ಸಾಲಮನ್ನಾ ಮಾಡಿ ತೋರಿಸಿದ್ದೇನೆ, ಈಗ ನೀವು ಮಾಡಿ. ಬರೀ ಬಾಯಿ ಮಾತೇಕೆ? ಎಂದು ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯನವರಿಗೆ ಸವಾಲೆಸೆದಿದ್ದಾರೆ.

‘ಇದ್ದಿದ್ದನ್ನು ಇದ್ದಂತೆ ಹೇಳಿದರೆ, ಅದನ್ನೇ ವಾಗ್ದಾಳಿ ಎಂದು ಅನುಕಂಪ ಗಿಟ್ಟಿಸಿಕೊಳ್ಳುವ ನಿಮ್ಮ ಬಗ್ಗೆ ಸಹಾನೂಭೂತಿ ಇದೆ. ಶಾಂತಿ, ದ್ವೇಷಾಸೂಯೆ, ಹತಾಶೆ ಬಗ್ಗೆ ದಯವಿಟ್ಟು ಮಾತನಾಡಬೇಡಿ. ನಿಮ್ಮ ಸಕಲಸದ್ಗುಣಗಳ ಬಗ್ಗೆ ನನಗಿಂತ ಮಲ್ಲಿಕಾರ್ಜುನ ಖರ್ಗೆ ಅವರೇ ಹೆಚ್ಚು ಬಲ್ಲರು. ಚುನಾವಣೆ ಸೋಲು ಎಂದಿದ್ದೀರಿ? ಇದು ನನಗೂ ಹೊಸದಲ್ಲ, ನಿಮಗೂ ಹೊಸದಲ್ಲ. ನಿಮ್ಮ ಹಳಹಳಿಕೆ ಅರ್ಥ ಮಾಡಿಕೊಳ್ಳಬಲ್ಲೆ. ವೈಫಲ್ಯಗಳನ್ನೇ ವಕ್ರೀಕರಿಸಿ ಅನುಕಂಪ ಗಿಟ್ಟಿಸುವ ಹಳೆಯ ಚಾಳಿ ಬಿಡಿ’ ಎಂದು ಸಿಎಂ ವಿರುದ್ದ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ನನ್ನ ಹೆಸರು ಕೇಳಿದರೆ ಪ್ರಧಾನಿ ನರೇಂದ್ರ ಮೋದಿ ಅವರಿಗೇ ಭಯ ಅನ್ನುತ್ತೀರಿ. ಪ್ರಧಾನಿ ಬಗ್ಗೆ ಮುಖ್ಯಮಂತ್ರಿ ಆಡುವ ಮಾತೇ ಇದು. ‘ಸಾಸಿವೆ ಕಾಳಿನಷ್ಟು ಶಿಷ್ಟಾಚಾರ ಗೊತ್ತಿಲ್ಲ. ಸಾಲುಸಾಲು ಸಮ್ಮಾನ ಬೇಕು’ ಎಂದನಂತೆ ಒಬ್ಬ. ಹಾಗಿದೆ ನಿಮ್ಮ ಧಿಮಾಕು. ಧಮ್ಮು, ತಾಕತ್ತು, ಗೈರತ್ತಿನಿಂದ ಕೆಲಸ ಆಗಲ್ಲ ಮುಖ್ಯಮಂತ್ರಿಗಳೇ? ಐದು ವರ್ಷ ಸಿಎಂ ಆಗಿದ್ದ ನಿಮಗೆ ಇಷ್ಟು ಸಾಮಾನ್ಯ ಜ್ಞಾನವೂ ಇಲ್ಲವೇ? ಕಾವೇರಿ ವಿಷಯದಲ್ಲಿಯೇ ನಿಮ್ಮ ದಮ್ಮು, ತಾಕತ್ತು ಮೂರಾಬಟ್ಟೆ ಆಯಿತಲ್ಲ. ತಮಿಳುನಾಡಿಗೆ ಈಗಲೂ ನೀರು ಹರಿಯುತ್ತಿದೆಯಲ್ಲ. ಕಾಣುತ್ತಿಲ್ಲವೇ?’ ಎಂದು ಹೆಚ್ ಡಿ ಕೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಗೃಹ ಜ್ಯೋತಿ ಯೋಜನೆಯ ಬಗ್ಗೆ ಉಲ್ಲೇಖಿಸಿರುವ ಕುಮಾರಸ್ವಾಮಿ, “ಮಹಾದೇವಪ್ಪ ನಿಂಗೂ ಕತ್ತಲು ಫ್ರೀ, ನಂಗೂ ಕತ್ತಲು ಫ್ರೀ, ಕಾಕಾ ಪಾಟೀಲ್ ನಿಂಗೂ ಕತ್ತಲು ಫ್ರೀ” ಇದು ನಿಮ್ಮ ಗ್ಯಾರಂಟಿಗಳ ಸ್ಥಿತಿ. ಸುಳ್ಳೇಕೆ ಹೇಳುತ್ತೀರಿ? ಆ ಪದವಿಗಾದರೂ ಗೌರವ ಬೇಡವೇ? ಸೀಟಿನಲ್ಲಿ ಕೂತು ಸುಳ್ಳು ಹೇಳದಿರಿ. ಉಚಿತ, ಖಚಿತ ಎಂದವರು ನೀವು. ಇವು ಅಗ್ಗದ ಯೋಜನೆಗಳು ಎಂದು ನಾನು ಹೇಳಿದ್ದೂ ಹೌದು. ನಾನೇ ಏಕೆ, ನಿಮ್ಮ ಸಂಪುಟದ ಹಾಲಿ ಕ್ಯಾಬಿನೇಟ್ ಮಂತ್ರಿಯೊಬ್ಬರೇ, “ಎಲೆಕ್ಷನ್ ಗೆಲ್ಲಬೇಕಾದರೆ ಗ್ಯಾರಂಟಿಗಳಂಥ ಚೀಪ್ ಗಿಮಿಕ್, ಟ್ರಿಕ್ಸ್ ಮಾಡಲೇಬೇಕು” ಎಂದು ಹೇಳಿರಲಿಲ್ಲವೇ? ವೈರಲ್ ಆಗಿದ್ದ ಆ ವಿಡಿಯೋ ನಿಮ್ಮ ಮೊಬೈಲಿಗೂ ಬಂದಿರಬೇಕಲ್ಲವೇ?’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಪ್ರಶ್ನಿಸಿದ್ದಾರೆ.

‘ದೂರದೃಷ್ಟಿ ಇಲ್ಲದ ಗ್ಯಾರಂಟಿಗಳು ಕರ್ನಾಟಕವನ್ನು ಆರ್ಥಿಕ ಆಪತ್ತಿಗೆ ದೂಡುತ್ತವೆ ಎಂದು ಆರ್ಥಿಕ ಇಲಾಖೆ ಕಳೆದ ಜೂನ್ (1-6-2023) ನಲ್ಲಿಯೇ ಎಚ್ಚರಿಸಿತ್ತು. ಗೃಹಲಕ್ಷ್ಮೀ ಯೋಜನೆ ರಾಜ್ಯವನ್ನು ಆದಾಯ ಕೊರತೆಗೆ ನೂಕಲಿದೆ, ಪ್ರತೀವರ್ಷ ಇಷ್ಟು ಬೃಹತ್ ಮೊತ್ತ ಹೊಂದಿಸುವುದು ಕಷ್ಟ. ರಾಜ್ಯ ದಿವಾಳಿ ಆಗುತ್ತದೆ ಎಂಬ ಎಚ್ಚರಿಕೆಯನ್ನು ಹಣಕಾಸು ಸಚಿವರಾಗಿ ಉಪೇಕ್ಷೆ ಮಾಡಿದ್ದು ನೀವಲ್ಲವೇ? ವಿತ್ತೀಯ ಹೊಣೆಗಾರಿಕೆ ಕಾಯ್ದೆಯನ್ನು ಸ್ವತಃ ವಿತ್ತ ಸಚಿವರೇ ಉಲ್ಲಂಘಿಸಿದರೆ ಹೇಗೆ?’ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಸೋಲು, ಗೆಲುವು ಜನಾಧೀನ. ಆ ಸತ್ಯ ನನಗೂ ಗೊತ್ತು, ನಿಮಗೂ ಗೊತ್ತು. ಆದರೆ, ಅರೆಬರೆ ಗ್ಯಾರಂಟಿಗಳಿಂದ ಲೋಕಸಭೆ ಗೆಲ್ಲುತ್ತೇವೆ ಎಂದು ಹೊರಟಿದ್ದೀರಿ. ಬನ್ನಿ ಅಖಾಡಕ್ಕೆ. ನಮ್ಮ ಸತ್ಯಕ್ಕೆ ಸೋಲೋ, ನಿಮ್ಮ ಸುಳ್ಳಿಗೆ ಗೆಲುವೋ.. ಎಂದು ನೋಡೋಣ. ‘ಸಾಲದ ಶೂಲ’, ‘ಆರ್ಥಿಕ ದಿವಾಳಿತನ’, ‘ಆರ್ಥಿಕ ಅಸ್ಥಿರತೆ-ಅದಕ್ಷತೆ’, ‘ಪರಾಧೀನ ಬದುಕು’, ‘ಕಮಿಷನ್‌ ಕಾಂಡ’ ಇವು ನಿಮ್ಮ ಸರಕಾರ ರಾಜ್ಯಕ್ಕೆ ಕೊಟ್ಟಿರುವ ಐದು ಹೊಸ ಗ್ಯಾರಂಟಿಗಳು. ಇನ್ನು, ರಾಜ್ಯದ ಭವಿಷ್ಯ, ಪ್ರತಿಷ್ಠೆ ಎಲ್ಲವೂ ದೈವಾಧೀನ ಎಂದು ಸಿಎಂ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...