ಲೋಕಸಭಾ ಚುನಾವಣೆ | ಮಂಡ್ಯ ಸೇರಿ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ: ಹೆಚ್ ಡಿ ಕುಮಾರಸ್ವಾಮಿ

Date:

ಲೋಕಸಭಾ ಚುನಾವಣೆಗಾಗಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್, ಮಂಡ್ಯ ಸೇರಿ ಮೂರು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಹಾಸನದಲ್ಲಿ ಇಂದು ಆಯೋಜಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, “ಮಂಡ್ಯ, ಕೋಲಾರ, ಹಾಸನ ಲೋಕಸಭಾ ಕ್ಷೇತ್ರವನ್ನು ನಮಗೆ ಕೊಡಲು ತೀರ್ಮಾನ ಮಾಡಿದ್ದಾರೆ. ಕೇಳಿದ್ದಿದ್ದರೆ ಇನ್ನೂ ಎರಡು ಕ್ಷೇತ್ರ ಕೊಡುವವರಿದ್ದರು. ಆದರೆ ಚುನಾವಣಾ ರಾಜಕೀಯ ಮಾಡುವ ಶಕ್ತಿ ನಮಗಿಲ್ಲ” ಎಂದು ತಿಳಿಸಿದರು.

“ಡಾ.ಸಿ.ಎನ್. ಮಂಜುನಾಥ್ ಅವರನ್ನ ಚುನಾವಣೆಗೆ ತರಬೇಕು ಎಂದು ನಾವು ತೀರ್ಮಾನ ಮಾಡಿರಲಿಲ್ಲ. ಮಾಧ್ಯಮಗಳೇ ಅವರಿಗೆ ಪ್ರಚಾರ ನೀಡಿದ್ದರು. ನಮಗೆ ಎಂದಿಗೂ ಇಷ್ಟು ಪ್ರಚಾರವನ್ನ ಮಾಧ್ಯಮಗಳು ಕೊಡಲಿಲ್ಲ. ಬಿಜೆಪಿ‌ ಹೈಕಮಾಂಡ್ ಮಂಜುನಾಥ್ ಸ್ಪರ್ಧಿಸಬೇಕು ಎಂಬ ತೀರ್ಮಾನ ತೆಗೆದುಕೊಂಡಿದೆ” ಎಂದು ಕುಮಾರಸ್ವಾಮಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವೇಗೌಡರು ಕೂಡ ನನ್ನ ಅಳಿಯ ಎಂದಿಗೂ ರಾಜಕೀಯಕ್ಕೆ ಬರುವುದಿಲ್ಲ‌ ಎಂದಿದ್ದರು. ಆದರೆ, ಅನಿವಾರ್ಯವಾಗಿ ಇಂದು ಸ್ಪರ್ಧಿಸಬೇಕಾಗಿದೆ” ಎಂದು ಮಂಜುನಾಥ್ ರಾಜಕೀಯಕ್ಕೆ ಬರುವುದನ್ನು ಖಚಿತಪಡಿಸಿದರು.

ಇದನ್ನು ಓದಿದ್ದೀರಾ? ವೋಟ್‌ ಬ್ಯಾಂಕ್‌ಗಾಗಿ ಕಾಂಗ್ರೆಸ್‌ನಿಂದ ಸಿಎಎಗೆ ವಿರೋಧ: ಗೃಹ ಸಚಿವ ಅಮಿತ್ ಶಾ

“ನೀವು ನಮ್ಮನ್ನ ಸೋಲಿಸಿಲ್ಲ, ನಾವೇ ಮೈ ಮರೆತಿದ್ದೇವೆ. ಪಕ್ಷ ಕಟ್ಟಬೇಕು ಎಂದು ನಿರಂತರ 90 ದಿನ ಶ್ರಮ ಹಾಕಿದೆ. ಎಲ್ಲ ಕಡೆ ಜನ ಸಾಗರ ಸೇರಿತು. ಆದರೆ ಯಾರ ಕೆಟ್ಟ ದೃಷ್ಟಿ ಬಿತ್ತೋ ಎಂದು ಗೊತ್ತಿಲ್ಲ. 19ಕ್ಕೆ ಇಳಿದಿದ್ದೇವೆ” ಎಂದು ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಬೇಸರ ಹೊರ ಹಾಕಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...