ಮಣಿಪುರ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ನಿತೀಶ್ ಕುಮಾರ್‌ ನೇತೃತ್ವದ ಜೆಡಿಯು

Date:

ಕೇಂದ್ರದಲ್ಲಿ ಎನ್‌ಡಿಎ ಭಾಗವಾಗಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮಣಿಪುರದ ಎನ್‌ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರದಿಂದ ತನ್ನ ಬೆಂಬಲವನ್ನು ಹಿಂಪಡೆದಿದೆ. ಮಣಿಪುರದ ಏಕೈಕ ಜೆಡಿಯು ಶಾಸಕ ಸರ್ಕಾರದಿಂದ ಬೆಂಬಲ ಹಿಂಪಡೆದು ವಿಪಕ್ಷದ ಪಾಳಯಕ್ಕೆ ಸೇರಿದ್ದಾರೆ.

ಜೆಡಿಯು ಬೆಂಬಲ ಹಿಂಪಡೆದಿರುವುದರಿಂದ ಮಣಿಪುರ ಸರ್ಕಾರದಲ್ಲಿ ಯಾವುದೇ ಮಹತ್ವದ ಬದಲಾವಣೆಯಾಗದಿದ್ದರೂ ಕೂಡಾ ಕೇಂದ್ರದಲ್ಲಿ ಮತ್ತು ಬಿಹಾರದಲ್ಲಿ ಜೆಡಿಯು ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೆ ಇದು ಎಚ್ಚರಿಕೆ ಕರೆಗಂಟೆ ಎಂದರೆ ತಪ್ಪಾಗಲಾರದು.

ಇನ್ನು ತಿಂಗಳುಗಳ ಹಿಂದಷ್ಟೇ ಮೇಘಾಲಯದಲ್ಲಿ ಅಧಿಕಾರ ಹೊಂದಿರುವ ಕಾನ್ರಾಡ್ ಸಂಗ್ಮಾ ನೇತೃತ್ವದ ಎನ್‌ಪಿಪಿ ಮಣಿಪುರ ಬಿಜೆಪಿ ಸರ್ಕಾರದಿಂದ ಬೆಂಬಲವನ್ನು ಹಿಂಪಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ನಿತೀಶ್ ಕುಮಾರ್‌ಗೆ ‘ಭಾರತ ರತ್ನ’ ನೀಡಿ: ಪೋಸ್ಟರ್ ಹಾಕಿದ ಜೆಡಿಯು ನಾಯಕ!

2022ರ ಮಣಿಪುರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯು ಆರು ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. ಆದರೆ ಕೆಲವು ತಿಂಗಳುಗಳಲ್ಲೇ ಆರು ಶಾಸಕರ ಪೈಕಿ ಐವರು ಬಿಜೆಪಿಗೆ ಪಕ್ಷಾಂತರಗೊಂಡಿದ್ದು, ಜೆಡಿಯುನಲ್ಲಿ ಏಕೈಕ ಶಾಸಕರು ಉಳಿದಿದ್ದರು.

ಸದ್ಯ ಬಿಜೆಪಿ 60 ಸದಸ್ಯರ ವಿಧಾನಸಭೆ ಕ್ಷೇತ್ರದಲ್ಲಿ 37 ಸೀಟುಗಳನ್ನು ಹೊಂದಿದ್ದು, ಐವರು ಎನ್‌ಪಿಎಫ್‌ ಶಾಸಕರು, ಮೂವರು ಸ್ವತಂತ್ರ್ಯ ಅಭ್ಯರ್ಥಿಗಳು ಬಿಜೆಪಿ ಬೆಂಬಲಕ್ಕೆ ನಿಂತಿರುವುದರಿಂದ ಇನ್ನೂ ಕೂಡಾ ಸರ್ಕಾರ ಉಳಿದುಕೊಂಡಿದೆ.

“ಮಣಿಪುರದಲ್ಲಿ ಜೆಡಿಯು ಬಿಜೆಪಿ ಸರ್ಕಾರಕ್ಕೆ ಯಾವುದೇ ಬೆಂಬಲ ನೀಡುವುದಿಲ್ಲ. ನಮ್ಮ ಏಕೈಕ ಶಾಸಕ ಅಬ್ದುಲ್ ನಸೀರ್ ವಿರೋಧ ಪಕ್ಷದ ಶಾಸಕರಾಗಿರಲಿದ್ದಾರೆ” ಎಂದು ಪತ್ರದಲ್ಲಿ ಜೆಡಿಯು ತಿಳಿಸಿದೆ.

ಮಣಿಪುರದಲ್ಲಿ ಒಂದು ವರ್ಷಕ್ಕೂ ಅಧಿಕ ಕಾಲದಿಂದ ಜನಾಂಗೀಯ ಹಿಂಸಾಚಾರ ನಡೆಯುತ್ತಿದ್ದು, 200ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಹಿಂಸಾಚಾರವನ್ನು ಹತೋಟಿಗೆ ತರುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಈ ಕಾರಣದಿಂದಾಗಿ ಬಿಜೆಪಿಯು ಮಣಿಪುರದಲ್ಲಿ ಬೆಂಬಲವನ್ನು ಕಳೆದುಕೊಳ್ಳುತ್ತಿದೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಈವರೆಗೆ ಒಂದು ಬಾರಿಯೂ ಮಣಿಪುರಕ್ಕೆ ಭೇಟಿ ನೀಡದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನು ಓದಿದ್ದೀರಾ? ನಿತೀಶ್ ಕುಮಾರ್‌ಗೆ ‘ಭಾರತ ರತ್ನ’ ನೀಡಿ: ಪೋಸ್ಟರ್ ಹಾಕಿದ ಜೆಡಿಯು ನಾಯಕ!

ಇದರೊಂದಿಗೆ ಜೆಡಿಯು ಶಾಸಕರನ್ನು ಬಿಜೆಪಿಯು ತನ್ನೆಡೆಗೆ ಸೆಳೆದುಕೊಂಡಿರುವುದು ಮಣಿಪುರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವೆ ವೈಮನಸ್ಸಿಗೆ ಕಾರಣವಾಗಿದೆ. ಉಭಯ ಪಕ್ಷಗಳು ಕೇಂದ್ರದಲ್ಲಿ ಮಿತ್ರ ಪಕ್ಷಗಳಾಗಿದ್ದರೂ ಮಣಿಪುರದಲ್ಲಿ ವಿಪಕ್ಷಗಳಾಗಿವೆ.

ಮಣಿಪುರ ವಿಧಾಸನಭೆ ಚುನಾವಣೆಯ ಫಲಿತಾಂಶವು 2022ರ ಮಾರ್ಚ್ 10ರಂದು ಹೊರಬಿದ್ದಿದೆ. ರಾಜ್ಯದಲ್ಲಿ ಒಟ್ಟು 60 ವಿಧಾನಸಭೆ ಕ್ಷೇತ್ರಗಳಿದ್ದು, 32ರಲ್ಲಿ ಬಿಜೆಪಿ, 7ರಲ್ಲಿ ಎನ್‌ಪಿಪಿ, ಆರರಲ್ಲಿ ಜೆಡಿಯು ಗೆದ್ದಿದೆ. ಬಳಿಕ ಐವರು ಜೆಡಿಯು ಶಾಸಕರು ಬಿಜೆಪಿ ಸೇರಿದ್ದು, ಬಿಜೆಪಿ ಸಂಖ್ಯಾ ಬಲ 37ಕ್ಕೆ ಏರಿಕೆಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...