ಜಾರ್ಖಂಡ್ | ಬಂಡಾಯವೆದ್ದ 30 ನಾಯಕರ ಉಚ್ಚಾಟಿಸಿದ ಬಿಜೆಪಿ

Date:

ಬಂಡಾಯವೆದ್ದ ನಾಯಕರುಗಳ ವಿರುದ್ಧ ಕಠಿಣ ಕ್ರಮಕ್ಕೆ ಬಿಜೆಪಿ ಮುಂದಾಗಿದೆ. ಪಕ್ಷದ ವಿರುದ್ಧವಾಗಿ ಹೇಳಿಕೆ ನೀಡಿದ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದ 30 ಬಂಡಾಯ ನಾಯಕರುಗಳನ್ನು ಬಿಜೆಪಿ ಮಂಗಳವಾರ ಉಚ್ಚಾಟಿಸಿದೆ.

ಜಾರ್ಖಂಡ್ ರಾಜ್ಯ ಬಿಜೆಪಿ ಮುಖ್ಯಸ್ಥ ಬಾಬುಲಾಲ್ ಮರಾಂಡಿ ಅವರ ನಿರ್ದೇಶನದ ಮೇರೆಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಪ್ರದೀಪ್ ವರ್ಮಾ ಅವರು ಬಂಡಾಯ ನಾಯಕರನ್ನು ಆರು ವರ್ಷಗಳ ಕಾಲ ಬಿಜೆಪಿಯಿಂದ ಹೊರಹಾಕಿದ್ದಾರೆ.

ಜಾರ್ಖಂಡ್‌ನಲ್ಲಿ ಬಿಜೆಪಿ ಘೋಷಿಸಿದ 35ಕ್ಕೂ ಅಧಿಕ ಅಭ್ಯರ್ಥಿಗಳು ಇತರೆ ಪಕ್ಷಗಳಿಂದ ಬಿಜೆಪಿಗೆ ಪಕ್ಷಾಂತರಗೊಂಡವರಾಗಿದ್ದಾರೆ. ಇದು ಬಿಜೆಪಿ ನಾಯಕರಲ್ಲಿ ನಿರಾಶೆಗೆ ಕಾರಣವಾಗಿದೆ. ಇದರಿಂದಾಗಿ ಬಿಜೆಪಿಯಲ್ಲಿ ಹಲವು ನಾಯಕರುಗಳು ಬಂಡಾಯವೆದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಜಾರ್ಖಂಡ್ ಜನತೆಗೆ 25 ಗ್ಯಾರಂಟಿಗಳನ್ನು ಘೋಷಿಸಿದ ಬಿಜೆಪಿ: ಇಲ್ಲಿ ಟೀಕೆ, ಅಲ್ಲಿ ಓಲೈಕೆ!

“ನಮಗೆ ಇರುವ ವಿಶ್ವಾಸಾರ್ಹತೆಯನ್ನು ಅನುಮಾನಿಸಲಾಗುತ್ತಿದೆ. ಆದ್ದರಿಂದ ಹಲವು ನಾಯಕರು ಬಿಜೆಪಿ ತೊರೆದು ಜೆಎಂಎಂ ಅಥವಾ ಕಾಂಗ್ರೆಸ್‌ಗೆ ಸೇರುವ ನಿರ್ಧಾರ ಮಾಡಿದ್ದಾರೆ” ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಜಾರ್ಖಂಡ್‌ನಲ್ಲಿ ಬಿಜೆಪಿಯಲ್ಲಿ ಬಿಕ್ಕಟ್ಟು ಹೆಚ್ಚಾಗುತ್ತಿದ್ದಂತೆ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ರಾಂಚಿಗೆ ತೆರಳಿದ್ದಾರೆ. ಅತೃಪ್ತ ನಾಯಕರುಗಳ ಮನವೊಲಿಸುವ ಪ್ರಯತ್ನವನ್ನೂ ಮಾಡಿದ್ದಾರೆ. ಜೊತೆಗೆ ಶಿವರಾಜ್ ಸಿಂಗ್ ಚೌಹಾಣ್ ಅವರಂತಹ ಹಿರಿಯ ನಾಯಕರು ಅತೃಪ್ತ ನಾಯಕರನ್ನು ಭೇಟಿ ಮಾಡಿದರು. ಇದೀಗ ಬಂಡಾಯ ನಾಯಕರುಗಳನ್ನು ಉಚ್ಚಾಟಿಸಿದೆ.

ಇನ್ನು ಜಾರ್ಖಂಡ್‌ನಲ್ಲಿ ಆಡಳಿತಾರೂಢ ಇಂಡಿಯಾ ಒಕ್ಕೂಟ ‘ಒಂದು ಮತ, ಏಳು ಗ್ಯಾರಂಟಿ’ ಎಂಬ ಏಳು ಗ್ಯಾರಂಟಿಗಳನ್ನು ಘೋಷಿಸಿದೆ. ಹಾಗೆಯೇ ಒಂದು ಮತ, ಏಳು ಗ್ಯಾರಂಟಿ ಸಮುದಾಯಕ್ಕೆ ಪ್ರತ್ಯೇಕ ಹಿಂದುಳಿದ ವರ್ಗ ಕಲ್ಯಾಣ ಸಚಿವಾಲಯದ ಭರವಸೆ ನೀಡಿದೆ. ಬುಡಕಟ್ಟು ಜನಾಂಗದವರನ್ನು ಓಲೈಸುವ ಪ್ರಯತ್ನದಲ್ಲಿದೆ.

ಇನ್ನೊಂದೆಡೆ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಾ ಬಂದಿರುವ ಬಿಜೆಪಿ ಜಾರ್ಖಂಡ್‌ನಲ್ಲಿ 25 ಗ್ಯಾರಂಟಿಗಳನ್ನು ಘೋಷಿಸಿದೆ. ಜೊತೆಗೆ ನಿರುದ್ಯೋಗಿಗಳಿಗೆ ಭತ್ಯೆ ನೀಡುವ ಭರವಸೆಯನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...