ಚುನಾವಣೋತ್ತರ ಸಮೀಕ್ಷೆ | ಜಾರ್ಖಂಡ್- ಇಂಡಿಯಾ ಒಕ್ಕೂಟದತ್ತ ಒಲವು

Date:

ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಇಂದು ಕೊನೆಯಾಗಿದೆ. ಇದಾದ ಬೆನ್ನಲ್ಲೇ ಹಲವು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷಾ ವರದಿಯನ್ನು ಪ್ರಕಟಿಸಿದೆ.

ಜೆವಿಸಿ, ಮ್ಯಾಟ್ರಿಜ್, ಪೀಪಲ್ಸ್ ಪಲ್ಸ್, ಟೈಮ್ಸ್ ನೌ ಮೊದಲಾದವುಗಳು ಜಾರ್ಖಂಡ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ತೆಕ್ಕೆಗೆ ಅಧಿಕಾರ ಸೇರಲಿದೆ ಎಂದು ಹೇಳಿದೆ. ಆದರೆ ಆಕ್ಸಿಸ್ ಮೈ ಇಂಡಿಯಾ ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಇಂಡಿಯಾ ಒಕ್ಕೂಟವು ಅಧಿಕಾರವನ್ನು ಉಳಿಸಿಕೊಳ್ಳಲಿದೆ ಎಂದು ಹೇಳಿದೆ.

ಇದನ್ನು ಓದಿದ್ದೀರಾ? ಚುನಾವಣೋತ್ತರ ಸಮೀಕ್ಷೆ | ಹರಿಯಾಣದಲ್ಲಿ ಬಿಜೆಪಿಯ ಹುಟ್ಟಡಗಿಸುತ್ತೆ ಕಾಂಗ್ರೆಸ್‌!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮ್ಯಾಟ್ರಿಜ್ ಎನ್‌ಡಿಎಗೆ 42-47, ಇಂಡಿಯಾ ಒಕ್ಕೂಟಕ್ಕೆ 25-30, ಇತರೆ 1-4 ಸ್ಥಾನಗಳು ಗೆಲ್ಲಲಿದೆ ಎಂದಿದೆ. ಈ ನಡುವೆ ಪೀಪಲ್ಸ್ ಪಲ್ಸ್ ಎನ್‌ಡಿಎಗೆ 44-53, ಇಂಡಿಯಾ ಒಕ್ಕೂಟಕ್ಕೆ 25-37, ಇತರೆ 5-9 ಸ್ಥಾನಗಳು ಗೆಲ್ಲಲಿದೆ ಎಂದಿದೆ.

ಟೈಮ್ಸ್ ನೌ- ಜೆವಿಸಿ ಪೋಲ್‌ಸ್ಟರ್ ಎನ್‌ಡಿಎಗೆ 40-44, ಇಂಡಿಯಾ ಒಕ್ಕೂಟಕ್ಕೆ 30-40, ಇತರೆ 1 ಸ್ಥಾನವನ್ನು ಮಾತ್ರ ಪಡೆಯಲು ಸಾಧ್ಯವಿದೆ ಎಂದು ತಿಳಿಸಿದೆ. ಪಿ-ಮಾರ್ಕ್‌ ಎನ್‌ಡಿಎಗೆ 31-40, ಇಂಡಿಯಾ ಒಕ್ಕೂಟಕ್ಕೆ 37-47 ಸ್ಥಾನ ಲಭಿಸಲಿದೆ ಎಂದು ಹೇಳಿದೆ.

ಆಕ್ಸಿಸ್ ಮೈ ಇಂಡಿಯಾ

ಜಾರ್ಖಂಡ್‌ನಲ್ಲಿ ಒಟ್ಟು 81 ವಿಧಾನಸಭಾ ಕ್ಷೇತ್ರಗಳಿದ್ದು ಬಹುಮತಕ್ಕೆ 42 ಸ್ಥಾನಗಳನ್ನು ಗೆಲ್ಲಬೇಕಾಗುತ್ತದೆ. ಆಕ್ಸಿಸ್ ಮೈ ಇಂಡಿಯಾ ಪ್ರಕಾರ ಜಾರ್ಖಂಡ್‌ನಲ್ಲಿ ಉತ್ತರ ಚೋಟನಾಗಪುರದ 25 ಕ್ಷೇತ್ರಗಳ ಪೈಕಿ ಇಂಡಿಯಾ ಒಕ್ಕೂಟ 12, ಎನ್‌ಡಿಎ 11, ಜೆಎಲ್‌ಕೆಎಂ 2 ಕ್ಷೇತ್ರದಲ್ಲಿ ಗೆಲ್ಲಲಿದೆ. ಕೋಲ್ಹಾನ್ ಪ್ರಾಂತ್ಯದ 14 ಕ್ಷೇತ್ರಗಳಲ್ಲಿ 9ರಲ್ಲಿ ಇಂಡಿಯಾ, 5ರಲ್ಲಿ ಎನ್‌ಡಿಎ ಜಯ ಗಳಿಸಲಿದೆ.

ಇದನ್ನು ಓದಿದ್ದೀರಾ? ಚನ್ನಪಟ್ಟಣ ಉಪಚುನಾವಣೆ; ಚರ್ಚೆ, ಸಂವಾದ, ಸಮೀಕ್ಷೆಗಳಿಗೆ ನಿರ್ಬಂಧ

ಪಲಾಮುವಿನ 9 ವಿಧಾನಸಭಾ ಕ್ಷೇತ್ರಗಳ ಪೈಕಿ 5ರಲ್ಲಿ ಇಂಡಿಯಾ ಒಕ್ಕೂಟ, 3ರಲ್ಲಿ ಎನ್‌ಡಿಎ, ಇತರೆ 1 ಕ್ಷೇತ್ರ ಗಳಿಸಲಿದೆ. ಸಂತಾಲ್ ಪರಗಣದ 18 ಕ್ಷೇತ್ರಗಳಲ್ಲಿ 15 ಇಂಡಿಯಾ ಒಕ್ಕೂಟದ, ಮೂರರಲ್ಲಿ ಎನ್‌ಡಿಎ ಪಾಲಾಗಲಿದೆ. ದಕ್ಷಿಣ ಚೋಟನಗರದ 15 ವಿಧಾನಸಭೆ ಕ್ಷೇತ್ರದಲ್ಲಿ ಇಂಡಿಯಾ ಒಕ್ಕೂಟ 12, ಎನ್‌ಡಿಎ 3 ಕ್ಷೇತ್ರದಲ್ಲಿ ಗೆಲುವು ಕಾಣಲಿದೆ.

ಒಟ್ಟಾರೆಯಾಗಿ ಎನ್‌ಡಿಎ 17-27 ಕ್ಷೇತ್ರದಲ್ಲಿ, ಇಂಡಿಯಾ ಒಕ್ಕೂಟವು 49-59, ಜೆಎಲ್‌ಕೆಎಂ 1-4, ಇತರೆ ಪಕ್ಷಗಳು 2 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಹೇಳಿದೆ.

2019ರ ಚುನಾವಣೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನೇತೃತ್ವದ ಮೈತ್ರಿಕೂಟವು ಚುನಾವಣೆಯಲ್ಲಿ ಗೆದ್ದು ಹೇಮಂತ್ ಸೊರೇನ್ ನೇತೃತ್ವದಲ್ಲಿ ಸರ್ಕಾರವನ್ನು ರಚಿಸಿತ್ತು. ಇಂದು ಎರಡನೇ ಹಂತದಲ್ಲಿ ಮತದಾನ ನಡೆದ 38 ಕ್ಷೇತ್ರಗಳಲ್ಲಿ 2019ರಲ್ಲಿ ಜೆಎಂಎಂ 13ರಲ್ಲಿ ಗೆದ್ದಿತ್ತು. ಮಿತ್ರಪಕ್ಷಗಳಾದ ಕಾಂಗ್ರೆಸ್ ಮತ್ತು ಸಿಪಿಐ(ಎಂಎಲ್)ಎಲ್ ಕ್ರಮವಾಗಿ ಎಂಟು ಮತ್ತು ಒಂದು ಸ್ಥಾನಗಳನ್ನು ಗೆದ್ದಿದ್ದವು. ಬಿಜೆಪಿ 12 ಸ್ಥಾನಗಳನ್ನು ಮಾತ್ರ ಗೆದ್ದಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...