ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ್ ಸಚಿವರ ಬಂಧನ

Date:

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರ್ಖಂಡ್‌ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್‌ ಆಲಂ ಅವರನ್ನು ಬುಧವಾರ ಜಾರಿ ನಿರ್ದೇಶನಾಲಯವು ಬಂಧಿಸಿದೆ.

ಆಲಂ ಅವರ ಆಪ್ತ ಕಾರ್ಯದರ್ಶಿಗೆ ಸಂಬಂಧಿಸಿದ ಫ್ಲ್ಯಾಟ್‌ನಿಂದ 35 ಕೋಟಿ ರೂಪಾಯಿಗೂ ಅಧಿಕ ನಗದು ವಶಪಡಿಸಿಕೊಂಡ ಪ್ರಕರಣದಲ್ಲಿ ಈ ಬಂಧನ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳವಾರ ರಾಂಚಿಯಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ಆಲಂ ಅವರನ್ನು ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ. ಬುಧವಾರ ಮತ್ತೆ ವಿಚಾರಣೆಗೆ ಸಮನ್ಸ್ ನೀಡಲಾಗಿದೆ. ಸುಮಾರು ಆರು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದ್ದು, ತನಿಖೆಗೆ ಸಹಕರಿಸದ ಕಾರಣ ಬಂಧಿಸಲಾಗಿದೆ ಎಂದು ಇಡಿ ಮೂಲಗಳು ತಿಳಿಸಿವೆ.

ಇದನ್ನು ಓದಿದ್ದೀರಾ?  ಜಾರ್ಖಂಡ್ | ಗೃಹ ಸಹಾಯಕನ ಮನೆಯಲ್ಲಿ ಅಪಾರ ಪ್ರಮಾಣದ ಹಣ ವಶ; ಸಚಿವರೊಂದಿಗೆ ನಂಟು ಆರೋಪ

ಕಳೆದ ವಾರ ರಾಂಚಿಯಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಗೃಹ ಸಹಾಯಕರಾದ ಜಹಾಂಗೀರ್ ಆಲಂ ವಾಸವಾಗಿದ್ದ 2ಬಿಎಚ್‌ಕೆ ಫ್ಲಾಟ್ ಮೇಲೆ ದಾಳಿ ನಡೆಸಿದೆ. ಅಲ್ಲಿಂದ ಸುಮಾರು 35.23 ಕೋಟಿ ರೂಪಾಯಿ ಮತ್ತು ಇತರ ಕಡೆಗಳಲ್ಲಿ 1.5 ಕೋಟಿ ರೂಪಾಯಿಗೂ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿದೆ. ಒಟ್ಟಾಗಿ 37 ಕೋಟಿ ರೂಪಾಯಿ ಇಡಿ ವಶ ಪಡಿಸಿಕೊಂಡಿದೆ.

ಇದಾದ ಮರುದಿನವೇ ಲಾಲ್ ಮತ್ತು ಜಹಾಂಗೀರ್ ಆಲಂ ಅವರನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಬಂಧಿಸಲಾಗಿದ್ದು, ಪ್ರಸ್ತುತ ಇಡಿ ವಶದಲ್ಲಿದ್ದಾರೆ. ಬುಧವಾರ ಜಾರ್ಖಂಡ್ ಸಚಿವ ಅಲಂಗೀರ್‌ ಆಲಂ ಅವರನ್ನು ಬಂಧಿಸಲಾಗಿದೆ.

ಇದನ್ನು ಓದಿದ್ದೀರಾ? ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ನಾದಿನಿ ಬಿಜೆಪಿ ಸೇರ್ಪಡೆ

ಅಲಂಗೀರ್‌ ಆಲಂ 2000ರಲ್ಲಿ ಜಾರ್ಖಂಡ್ ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾಗಿದ್ದು ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.

ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಹೇಮಂತ್ ಸೊರೆನ್ ಅವರನ್ನು ಇಡಿ ವಶಕ್ಕೆ ತೆಗೆದುಕೊಂಡ ತಿಂಗಳುಗಳ ಬಳಿಕ ಈಗ ಸಚಿವರನ್ನು ಬಂಧಿಸಲಾಗಿದೆ. ಸೋರೆನ್ ಅವರನ್ನು ಅಧಿಕೃತವಾಗಿ ಬಂಧಿಸುವ ಮುನ್ನವೇ ಮುಖ್ಯಮಂತ್ರಿ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದರು.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...