4 ವರ್ಷಗಳ ನಂತರ ಬಿಡುಗಡೆಗೊಂಡ ಹುರಿಯತ್ ಕಾನ್ಫರೆನ್ಸ್ ಮುಖಂಡ ಮೀರ್ವೈಝ್ ಉಮರ್ ಫಾರೂಕ್

Date:

  • ಜಮ್ಮು- ಕಾಶ್ಮೀರದ 370ನೇ ವಿಧಿ ರದ್ದುಪಡಿಸಿದ್ದ ವೇಳೆ ವಿರೋಧ ವ್ಯಕ್ತಪಡಿಸಿದ್ದ ಹುರಿಯತ್‌ ಅಧ್ಯಕ್ಷ
  • ಜಾಮಿಯಾ ಮಸೀದಿಯಲ್ಲಿ ಶುಕ್ರವಾರದ ಸಾಮೂಹಿಕ ಪ್ರಾರ್ಥನೆಯ ನೇತೃತ್ವ ವಹಿಸಲು ಬಂದ ಮೀರ್ವೈಝ್

ಜಮ್ಮು-ಕಾಶ್ಮೀರದ ಹುರಿಯತ್‌ ಕಾನ್ಸರೆನ್ಸ್‌ನ ಅಧ್ಯಕ್ಷ ಮೀರ್ವೈಝ್ ಉಮರ್ ಫಾರೂಕ್ ಅವರನ್ನು ನಾಲ್ಕು ವರ್ಷಗಳ ನಂತರ ಗೃಹ ಬಂಧನದಿಂದ ಶುಕ್ರವಾರ ಮುಕ್ತಗೊಳಿಸಲಾಗಿದೆ.

ಸಂವಿಧಾನದ 370ನೇ ವಿಧಿಯಡಿ ಈ ಹಿಂದಿನ ಜಮ್ಮು- ಕಾಶ್ಮೀರ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆಯುವ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ 2019ರಲ್ಲಿ ಅವರನ್ನು ವಶಕ್ಕೆ ಪಡೆದಿದ್ದ ಪೊಲೀಸರು, ಗೃಹ ಬಂಧನದಲ್ಲಿರಿಸಿದ್ದರು.

ಗೃಹಬಂಧನದಿಂದ ಮುಕ್ತರಾದ ನಂತರ ಐತಿಹಾಸಿಕ ಜಾಮಿಯಾ ಮಸೀದಿಯಲ್ಲಿ ನಡೆಯಲಿರುವ ಶುಕ್ರವಾರದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳಲು ಅವರು ತೆರಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಮೀರ್ವೈಝ್ ಅವರ ಮನೆಗೆ ಗುರುವಾರ ಸಂಜೆ ಭೇಟಿ ನೀಡಿದ ಅಧಿಕಾರಿಗಳು ಗೃಹಬಂಧನದಿಂದ ಮುಕ್ತಗೊಳಿಸುತ್ತಿರುವ ವಿಷಯ ತಿಳಿಸಿದರು. ಜಾಮಿಯಾ ಮಸೀದಿಯಲ್ಲಿ ಶುಕ್ರವಾರ ನಡೆಯಲಿರುವ ಪಾರ್ಥನೆಯಲ್ಲಿ ಪಾಲ್ಗೊಳ್ಳಲು ಅವರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ’ ಎಂದು ನೊಹತಾ ಪ್ರದೇಶದ ಅಂಜುಮನ್ ವಕ್ಫ್ ಜಾಮಿಯಾ ಮಸೀದಿಯ ವ್ಯವಸ್ಥಾಪನಾ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿತ್ತು.

ತಮ್ಮ ಗೃಹ ಬಂಧನವನ್ನು ಪ್ರಶ್ನಿಸಿ ಪ್ರತ್ಯೇಕತಾವಾದಿ ಹುರಿಯತ್ ಕಾನ್ಸರೆನ್ಸ್‌ನ ಅಧ್ಯಕ್ಷ ಮೀರ್ವೈಝ್ ಅವರು ಹೈಕೋರ್ಟ್ ಮೊರೆ ಹೋದ ನಂತರ ಅವರ ಬಿಡುಗಡೆ ಮಾಡಲಾಗಿದೆ. ಮೀರ್ವೈಝ್ ಅವರ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸುವಂತೆ ಜಮ್ಮು ಮತ್ತು ಕಾಶ್ಮೀರ ಆಡಳಿತಕ್ಕೆ ಸೆ. 15ರಂದು ನ್ಯಾಯಾಲಯ ಕೇಳಿತ್ತು.

“ನನ್ನ ಮನೆಯ ಸುತ್ತಲಿನಲ್ಲಿ ಕಾವಲಿದ್ದ ಪೊಲೀಸರನ್ನು ಇಂದು (ಶುಕ್ರವಾರ) ಬೆಳಗ್ಗೆ ಹಿಂದೆಗೆದುಕೊಳ್ಳಲಾಗಿದೆ. ನಿನ್ನೆ ಸಂಜೆ ಅಧಿಕಾರಿಗಳು ನನ್ನನ್ನು ಗೃಹಬಂಧನದಿಂದ ಬಿಡುಗಡೆ ಮಾಡುತ್ತಿದ್ದೇವೆ ಎಂದು ನನಗೆ ತಿಳಿಸಿದರು. ಮುಖ್ಯ ಧಾರ್ಮಿಕ ಗುರುವಾಗಿ ನನ್ನ ಜವಾಬ್ದಾರಿಯನ್ನು ನಿರ್ವಹಿಸಲು ಜಾಮಾ ಮಸೀದಿಗೆ ಹೊರಟಿದ್ದೇನೆ. ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ಅದನ್ನು ಮಾಡದಂತೆ ಅನ್ಯಾಯವಾಗಿ ನಿಲ್ಲಿಸಲಾಗಿತ್ತು” ಎಂದು ಮೀರ್ವೈಝ್ ಉಮರ್ ಫಾರೂಕ್ ತಿಳಿಸಿದ್ದಾರೆ.

ಬಿಡುಗಡೆಯ ಸುದ್ದಿಯ ಬೆನ್ನಲ್ಲೇ ಮಸೀದಿಯ ಸುತ್ತಮುತ್ತಲೂ ವ್ಯಾಪಕ ಬಂದೋಬಸ್ತ್‌ ಏರ್ಪಡಿಸಲಾಗಿದ್ದು, ಹಲವು ಮಂದಿ ಅವರ ಅಭಿಮಾನಿಗಳು ಮಸೀದಿಗೆ ಆಗಮಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...