ಪತ್ರಕರ್ತ ದೀಪಕ್ ತಿಮ್ಮಯ್ಯ ಕಾಂಗ್ರೆಸ್ ಸೇರ್ಪಡೆ; ಡಿಕೆಶಿಯವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ

Date:

ಪತ್ರಕರ್ತ ದೀಪಕ್ ತಿಮ್ಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಗುರುವಾರ ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆ ಮಾಡಿಕೊಂಡರು.

ಸದಾಶಿವನಗರ ನಿವಾಸದಲ್ಲಿ ಗುರುವಾರ ದೀಪಕ್ ತಿಮ್ಮಯ್ಯ ಅವರಿಗೆ ಕಾಂಗ್ರೆಸ್ ಪಕ್ಷದ ಶಾಲು ಹಾಕಿ, ಹೂಗುಚ್ಛ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿ, “ಹಿರಿಯ ಪತ್ರಕರ್ತರಾದ ದೀಪಕ್ ತಿಮ್ಮಯ್ಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಹಾಗೂ ಸಂವಹನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು, ಅವರಿಗೆ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಪ್ರತ್ಯೇಕ ಕಚೇರಿ ನೀಡಲಾಗುವುದು. ಪಕ್ಷದ ವಿಚಾರವಾಗಿ ಯಾರೇ ನನ್ನನ್ನು ಸಂಪರ್ಕ ಮಾಡಲು ಅವರು ಸಹಕಾರ ನೀಡಲಿದ್ದಾರೆ” ಎಂದರು.

“ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 30ವರ್ಷಗಳ ಅನುಭವವಿರುವ ದೀಪಕ್ ಅವರು ತಮ್ಮದೇ ಆದ ಸಂಸ್ಥೆ ಮೂಲಕ ಮಕ್ಕಳನ್ನು ನಾಯಕರನ್ನಾಗಿ ರೂಪಿಸುವ ಕೆಲಸ ಮಾಡಿಕೊಂಡು ಬಂದಿದ್ದಾರೆ. ನಾಯಕರನ್ನು ಸೃಷ್ಟಿಸುವವನು ನಾಯಕನೇ ಹೊರತು ಹಿಂಬಾಲಕರನ್ನು ಸೃಷ್ಟಿಸುವವನು ಅಲ್ಲ ಎಂಬಂತೆ ಕೆಲಸ ಮಾಡುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ, ವಿಚಾರವಾಗಿ ಅವರು ನನಗೆ ಅನೇಕ ಉತ್ತಮ ಸಲಹೆಗಳನ್ನು ನೀಡಿದ್ದಾರೆ. ಹೀಗಾಗಿ ಅವರಿಗೆ ಕಾಂಗ್ರೆಸ್ ಪಕ್ಷದ ಭಾಗವಾಗುವಂತೆ ಮನವಿ ಮಾಡಿದ್ದೆ. ಅದನ್ನು ಒಪ್ಪಿ ಅವರು ಇಂದು ಪಕ್ಷಕ್ಕೆ ಸೇರ್ಪಡೆ ಆಗಿದ್ದು, ಈ ಜವಾಬ್ದಾರಿ ತೆಗೆದುಕೊಳ್ಳುತ್ತಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...