ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆ ಪತ್ರಕರ್ತರಿಗೆ ಬೇಕು: ಸಿಎಂ ಸಿದ್ದರಾಮಯ್ಯ

Date:

“ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು. ಗಂಡ-ಹೆಂಡತಿ ಜಗಳವನ್ನು ಇಡೀ ದಿನ ತೋರಿಸುವುದಕ್ಕಿಂತ, ಸಮಾಜದ ಬೆಳೆವಣಿಗೆಗೆ ಅಡ್ಡಿ ಆಗಿರುವ ಪಟ್ಟಭದ್ರರನ್ನು ಗುರುತಿಸಿ ಬರೆಯಿರಿ. ಇದರಿಂದ ಸಮಾಜಮುಖಿ ಪತ್ರಿಕೋದ್ಯಮ ಸಾಧ್ಯ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ದಾವಣಗೆರೆಯಲ್ಲಿ ನಡೆದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, “ಮೌಢ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ” ಎಂದು ಕರೆ ನೀಡಿದರು.

“ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಗ್ಯಾರಂಟಿ ಎಂದು ಕರೆಯಬಾರದು. ಪಕ್ಷಾತೀತವಾಗಿ, ಜಾತ್ಯತೀತವಾಗಿ, ಧರ್ಮಾತೀತವಾಗಿ ಇರುವ ಈ ಯೋಜನೆಯನ್ನು ಬಿಟ್ಟಿ ಗ್ಯಾರಂಟಿ ಎಂದು ಕರೆಯದೆ, ನೀವೇ ಪರಿಶೀಲಿಸಿ ಬರೆಯಿರಿ. ಏನನ್ನಾದರೂ ಪ್ರಕಟಿಸುವ ಮೊದಲು ಪರಿಶೀಲನೆ ನಡೆಸಿ” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಣವಂತರು, ಅತೀ ಶ್ರೀಮಂತರ ಕೈಯಲ್ಲಿ ಪತ್ರಿಕೋದ್ಯಮ ಸಿಲುಕಿದೆ. ಹೀಗಾಗಿ ಶ್ರೀಮಂತರ ಹಿತಾಸಕ್ತಿ ಕಾಯುವ, ಬಡವರ ಹಿತಾಸಕ್ತಿಗೆ ವಿರುದ್ಧವಾಗಿ ಬರೆಯುವ ಅಪಾಯ ಇರುತ್ತದೆ. ಇದನ್ನು ಪರಿಶೀಲಿಸಿಕೊಳ್ಳಿ. ನಾನು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಇರುವವನು, ಬೆಂಬಲಿಸುವವನು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಘನತೆ ತರುವಂತೆ ಮಾಡಬೇಕು” ಎಂದು ವಿನಂತಿಸಿದರು.

“ಸ್ವಾತಂತ್ರ್ಯಪೂರ್ವದ ಪತ್ರಿಕೋದ್ಯಮದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತರಬೇಕು ಎನ್ನುವ ಆಶಯ ಪ್ರಧಾನವಾಗಿ ಕೆಲಸ ಮಾಡಿತ್ತು. ಸ್ವಾತಂತ್ರ್ಯಾನಂತರ ಪ್ರಜಾಪ್ರಭುತ್ವವನ್ನು ಕಾಯುವ, ರಕ್ಷಿಸುವ ಆಶಯ ಪ್ರಮುಖವಾಗಿದೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪೇ?

“ಜನ ಸಾಮಾನ್ಯರು ಪತ್ರಿಕಾ ವೃತ್ತಿ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು. ಈಗ ತಂತ್ರಜ್ಞಾನ, ವಿಜ್ಞಾನ ಬಹಳ ಬೆಳೆದಿದ್ದು ಇದರ ಪ್ರಯೋಜನವನ್ನು ಪತ್ರಿಕಾವೃತ್ತಿ ಬಳಸಿಕೊಳ್ಳಬೇಕಿದೆ. ಆದರೆ ಸತ್ಯನಿಷ್ಠೆಯನ್ನು ಯಾವುದೇ ಕಾರಣಕ್ಕೂ ಪತ್ರಕರ್ತರು ಬಿಡಬಾರದು” ಎಂದರು.

“ಪತ್ರಿಕಾ ವೃತ್ತಿ ಸಮಾಜದ ಅಸಮಾನತೆ ಹೋಗಲಾಡಿಸಲು, ಅವಕಾಶ ವಂಚಿತರ ಪರವಾಗಿ, ಮೀಸಲಾತಿಯ ಆಶಯಗಳ ಪರವಾಗಿ ಇರಬೇಕು. ಇದರಿಂದ ಸಾಮಾಜಿಕ ನ್ಯಾಯವನ್ನು ಧ್ವನಿ ಇಲ್ಲದವರಿಗೆ ಕೊಡಲು ಸಾಧ್ಯ. ಹೀಗಾದಾಗ ಬಸವಣ್ಣನವರ ಸಮ ಸಮಾಜದ ಆಶಯ ಈಡೇರಲು ಸಾಧ್ಯ. ಪತ್ರಕರ್ತರು ಇದಕ್ಕೆ ಪೂರಕವಾಗಿ ವಸ್ತುನಿಷ್ಠವಾಗಿ ಕೆಲಸ ಮಾಡಬೇಕು” ಎಂದು ಆಶಿಸಿದರು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್

“ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸಿ ಈ ಬಜೆಟ್ ನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್, ಶಿವಾನಂದ ತಗಡೂರು, ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಮಾಯ್ಕೊಂಡ ಬಸಂತಪ್ಪ, ಡಿ.ಜಿ.ಶಾಂತನಗೌಡರು, ಇನ್ ಸೈಟ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕರಾದ ಜಿ.ಬಿ.ವಿನಯ್ ಕುಮಾರ್ ಸೇರಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...