ರಾಹುಲ್ ಗಾಂಧಿ ಶಿಕ್ಷೆಗೆ ತಡೆ ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್‌ ನ್ಯಾಯಮೂರ್ತಿ ವರ್ಗಾವಣೆ

Date:

‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಕೆಳ ನ್ಯಾಯಾಲಯ ನೀಡಿದ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ನ್ಯಾಯಾಧೀಶರಾದ ಹೇಮಂತ್ ಎಂ ಪ್ರಚ್ಚಕ್ ಸೇರಿ 23 ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ವರ್ಗಾವಣೆಗೆ ಶಿಫಾರಸು ಮಾಡಿದೆ.

ಪ್ರಚ್ಚಕ್ ಅವರನ್ನು ಗುಜರಾತ್ ಹೈಕೋರ್ಟ್ ನಿಂದ ಬಿಹಾರದ ಪಾಟ್ನಾ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಶಿಫಾರಸು ಮಾಡಲಾಗಿದೆ.

ಈ ಹಿಂದೆ 2002ರ ಗುಜರಾತ್ ಗಲಭೆ ಪ್ರಕರಣದ ಆರೋಪಿಯಾಗಿದ್ದ ಬಿಜೆಪಿಯ ಮಾಜಿ ಸಚಿವೆ ಮಾಯಾ ಕೊಡ್ನಾನಿ ಅವರನ್ನು ಸಮರ್ಥಿಸುವ ವಕೀಲರ ತಂಡದಲ್ಲಿ ನ್ಯಾಯಮೂರ್ತಿ ಪ್ರಚ್ಚಕ್ ಒಬ್ಬರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಮೂರ್ತಿ ಪ್ರಚ್ಚಕ್ ಅವರು ಗುಜರಾತ್ ಹೈಕೋರ್ಟ್‌ನಲ್ಲಿ ವಕೀಲರಾಗಿ ಸೇವೆ ಆರಂಭಿಸಿದರು ಮತ್ತು ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿಯವರ ತಂಡದಲ್ಲಿ ಗುಜರಾತ್ ಸರ್ಕಾರದ ಸಹಾಯಕ ವಕೀಲರಾಗಿ ಕೆಲಸ ಮಾಡಿದ್ದರು.

2015 ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾದ ಒಂದು ವರ್ಷದ ನಂತರ, ಅವರನ್ನು ಗುಜರಾತ್ ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಪರ ವಕೀಲರಾಗಿ ನೇಮಿಸಲಾಯಿತು. ಅವರು 2019 ರವರೆಗೆ ಈ ಹುದ್ದೆಯಲ್ಲಿದ್ದರು. 2021ರಲ್ಲಿ ಅವರು ಗುಜರಾತ್ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ ನೇಮಕಗೊಂಡರು.

ಈ ಸುದ್ದಿ ಓದಿದ್ದೀರಾ? ರಾಹುಲ್‌ ಬಗ್ಗೆ ಅಮಿತ್ ಶಾ ಸುಳ್ಳು ಆರೋಪ: ಕಾಂಗ್ರೆಸ್ ಸಹಾಯ ಸ್ಮರಿಸಿದ ರೈತ ಮಹಿಳೆ ಕಲಾವತಿ

ಮಾನನಷ್ಟ ಮೊಕದ್ದಮೆಯಲ್ಲಿನ ಶಿಕ್ಷೆಯ ವಿರುದ್ಧ ರಾಹುಲ್ ಗಾಂಧಿಯ ಮೇಲ್ಮನವಿಯನ್ನು ಪರಿಗಣಿಸಲು ನಿರಾಕರಿಸಿದ ನ್ಯಾಯಮೂರ್ತಿ ಗೀತಾ ಗೋಪಿ ಮತ್ತು ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರ ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ಸಮೀರ್ ದವೆ ಸೇರಿದಂತೆ ಗುಜರಾತ್ ಹೈಕೋರ್ಟ್‌ನ ಇತರ ಮೂವರು ನ್ಯಾಯಾಧೀಶರನ್ನು ವರ್ಗಾವಣೆ ಮಾಡಲು ಕೊಲಿಜಿಯಂ ಶಿಫಾರಸು ಮಾಡಿದೆ.

ನ್ಯಾಯಮೂರ್ತಿ ಸಮೀರ್‌ ದವೆ ಅವರನ್ನು ರಾಜಸ್ಥಾನ ಹೈಕೋರ್ಟ್‌ಗೆ ಮತ್ತು ನ್ಯಾಯಮೂರ್ತಿ ಗೀತಾ ಗೋಪಿ ಅವರನ್ನು ಮದ್ರಾಸ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ. ಗುಜರಾತ್ ಹೈಕೋರ್ಟ್‌ನ ಮತ್ತೊಬ್ಬ ನ್ಯಾಯಾಧೀಶ ನ್ಯಾಯಮೂರ್ತಿ ಅಲ್ಪೇಶ್ ವೈ ಕೊಗ್ಜೆ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲಾಗಿದೆ. ಇದಲ್ಲದೆ ಅಲಹಾಬಾದ್, ಗುಜರಾತ್, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗಳ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲು ಕೊಲಿಜಿಯಂ ಶಿಫಾರಸು ಮಾಡಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್, ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನೊಳಗೊಂಡ ಕೊಲಿಜಿಯಂ ಆಗಸ್ಟ್ 3 ರಂದು ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...