ಸುಮ್ಮನೆ ಇದ್ದೇನೆ ಅಂದರೆ ಅಸಮರ್ಥ ಎಂದಲ್ಲ: ಮಾಜಿ ಡಿಸಿಎಂ ಪರಮೇಶ್ವರ್

Date:

  • ಪಕ್ಷದ ವರಿಷ್ಟರಿಗೆ ನನ್ನ ಕೆಲಸಗಳ ಬಗ್ಗೆ ಗೊತ್ತಿದೆ
  • ನನಗೆ ನಮ್ಮ ಪಕ್ಷದ ಶಿಸ್ತಿನ ಚೌಕಟ್ಟಿನ ಅರಿವು ಇದೆ

“ನಾನೂ ಮುಖ್ಯಮಂತ್ರಿ ಪದವಿ ಆಕಾಂಕ್ಷಿಯೇ; ನನಗೆ ರಾಜಕೀಯ ಹಾಗೂ ಪಕ್ಷದ ಪರಿಧಿಯ ಅರಿವಿದೆ. ಹೀಗಾಗಿ ಸುಮ್ಮನಿದ್ದೇನೆ. ಹಾಗೆಂದ ಮಾತ್ರಕ್ಕೆ ನಾನು ಅಸಮರ್ಥ ಎಂದಲ್ಲ” ಎಂದು ಮಾಜಿ ಡಿಸಿಎಂ ಪರಮೇಶ್ವರ್ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾನು ಪಕ್ಷದ ವರಿಷ್ಠರನ್ನು ನಂಬಿದ್ದೇನೆ. ನಾನು ಕೂಡ 50 ಶಾಸಕರ ಗುಂಪು ಕಟ್ಟಿಕೊಂಡು ಹೋಗಬಹುದು. ಆದರೆ ನಾನು ಹಾಗೆ ಮಾಡುವುದಿಲ್ಲ. ನನಗೆ ಪ್ರಿನ್ಸಿಪಲ್ ಇದೆ. ನನಗೆ ಶಿಸ್ತು ಮುಖ್ಯ” ಎಂದರು.

“ಹೈಕಮಾಂಡ್ ಜವಾಬ್ದಾರಿ ಕೊಟ್ಟರೆ ಖಂಡಿತ ನಿಭಾಯಿಸುತ್ತೇನೆ. ಅವಕಾಶ ಕೊಟ್ಟರೆ ಮಾಡಲ್ಲ ಎಂದು ಹೇಳುವುದಿಲ್ಲ. ಹೈಕಮಾಂಡ್‌ಗೆ ನನ್ನ ಬಗ್ಗೆ, ನನ್ನ ಕೆಲಸದ ಬಗ್ಗೆ ಗೊತ್ತಿದೆ. ಲಾಬಿ ಮಾಡಬಾರದು ಎಂದು ಸುಮ್ಮನೆ ಇದ್ದೇನೆ. ನಾನು ಹೀಗಿದ್ದೇನೆ ಎಂದರೆ ಅದರ ಅರ್ಥ ಅಸಮರ್ಥ ಎಂದಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?:ವಿಧಾನಸೌಧ ಪ್ರವೇಶಿಸುತ್ತಿರುವ ಅತಿ ಕಿರಿಯ ಹಾಗೂ ಹಿರಿಯ ಶಾಸಕರಿವರು

ಇನ್ನು ಪಕ್ಷದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಪರಮೇಶ್ವರ್, ಮೊದಲ ಕ್ಯಾಬಿನೆಟ್‌ನಲ್ಲಿ 5 ಗ್ಯಾರಂಟಿಗಳನ್ನು ಈಡೇರಿಸುವ ಭರವಸೆ ಕೊಟ್ಟಿದ್ದೇವೆ. ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದರು.

ಆಯಾ ಇಲಾಖೆ ಸಚಿವರು ಕೂತು ಇದರ ಬಗ್ಗೆ ಚರ್ಚಿಸಿ ಲಾಭ ನಷ್ಟಗಳ ಪರಾಮರ್ಶೆ ಮಾಡಿ ಅದನ್ನು ಜಾರಿ ಮಾಡುತ್ತಾರೆ. ಕಾಂಗ್ರೆಸ್‌ನ ಗ್ಯಾರಂಟಿಗಳಿಗೆ ಕಂಡಿಷನ್ಸ್ ಇರುತ್ತವೆ. ಹಾಗೇ ಸುಮ್ಮನೆ ಕೊಟ್ಟರೆ ಎಲ್ಲರೂ ತೆಗೆದುಕೊಳ್ಳುತ್ತಾರೆ. ಹೀಗಾಗಿ ಗ್ಯಾರಂಟಿಗಳಿಗೆ ಮಾನದಂಡ ಇರುತ್ತೆ ಎಂದರು.

ಇನ್ನು ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, ಮುಖ್ಯಮಂತ್ರಿ ಆಯ್ಕೆ ಸುಸೂತ್ರವಾಗಿ ಆಗಲಿದೆ. ನಮ್ಮ ವರಿಷ್ಠರು ಈಗಾಗಲೇ ಶಾಸಕರ ಅಭಿಪ್ರಾಯ ಪಡೆದಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರುಗಳು ಚರ್ಚೆ ಮಾಡಿ ಈ ಬಗ್ಗೆ ನಿರ್ಧರಿಸುತ್ತಾರೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...