ಹಿಜಾಬ್ ಹೋರಾಟಗಾರ್ತಿ ಅಲಿಯಾ ಅಸ್ಸಾದಿಗೆ ಶುಭಕೋರಿದ ಕೆ ರಘುಪತಿ ಭಟ್

Date:

ಬಿಜೆಪಿಯಿಂದ ಉಚ್ಛಾಟಿತರಾಗಿರುವ ಮಾಜಿ ಶಾಸಕ ಕೆ ರಘುಪತಿ ಭಟ್ ಅವರು ಹಿಜಾಬ್ ಹೋರಾಟಗಾರ್ತಿ ಅಲಿಯಾ ಅಸ್ಸಾದಿ ಅವರ ತಮ್ಮನ್ನು ಕುರಿತು ಮಾಡಿದ್ದ ಟ್ವೀಟ್‌ಗೆ ಪ್ರತಿಕ್ರಿಯಿಸಿ, “ಅಲಿಯಾ ಅಸ್ಸಾದಿ ಅವರ ಶೈಕ್ಷಣಿಕ ಜೀವನಕ್ಕೆ ನಾನು ಶುಭ ಕೋರುತ್ತೇನೆ” ಎಂದಿದ್ದಾರೆ.

“ಉಡುಪಿಯಲ್ಲಿಈ ಹಿಂದೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಹಿಜಾಬ್ ಪ್ರಕರಣವನ್ನು ನಾನು ಸಮವಸ್ತ್ರ ಆಧಾರಿತವಾಗಿ ನಾನು ನೋಡಿದ್ದೇನೆಯೇ ಹೊರತು, ಧರ್ಮಾಧಾರಿತವಾಗಿ ನೋಡಿಲ್ಲ” ಎಂದು ತಿಳಿಸಿದ್ದಾರೆ.

“ಆ ವಿದ್ಯಾರ್ಥಿನಿ ಕೆಲವು ಸಂಘಟನೆಗಳ ಪ್ರಭಾವಕ್ಕೆ ಒಳಗಾಗಿದ್ದರು. ಹಾಗಾಗಿಯೇ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಯಿತು. ಕಾಲೇಜಿನಲ್ಲಿ ಆಕೆ ಶಿಸ್ತು ತಪ್ಪುಬಾರದಾಗಿತ್ತು. ಇದಕ್ಕಾಗಿಯೇ ಇದು ದೊಡ್ಡದಾಗಿ ಬೆಳೆಯಿತು. ನಾನು ಶಾಸಕನಾಗುವ ಮುನ್ನ ಆ ಶಾಲೆಯಲ್ಲಿ ಸಮವಸ್ತ್ರ ಪದ್ದತಿ ಜಾರಿಯಲ್ಲಿತ್ತು. ಹಾಗಾಗಿ, ಅದು ಹೋರಾಟಕ್ಕೆ ಕಾರಣವಾಯಿತು” ಎಂದು ಸ್ಪಷ್ಟನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಮೂರು ಬಾರಿ ಉಡುಪಿಯ ಶಾಸಕನಾಗಿದ್ದೇನೆ, ಜನರ ಆಶೀರ್ವಾದ ಇಲ್ಲದಿದ್ದರೆ ಗೆಲ್ಲಲು ಸಾಧ್ಯವೇ? ಏನೇ ಆಗಲಿ, ಒಳ್ಳೆಯ ಶಿಕ್ಷಣದಿಂದ ಧರ್ಮಾದಂತೆ, ದೇಶದ್ರೋಹದ ಭಾವನೆ ಬರುವುದಿಲ್ಲ ಎನ್ನುವುದು ನನ್ನ ನಂಬಿಕೆ. ಆಕೆಯ ಶೈಕ್ಷಣಿಕ ಜೀವನಕ್ಕೆ ನಾನು ಶುಭ ಕೋರುತ್ತೇನೆ” ಎಂದು ರಘುಪತಿ ಭಟ್ ತಿಳಿಸಿದ್ದಾರೆ.

ಅಲಿಯಾ ಅಸ್ಸಾದಿ ಟಾಂಗ್‌

“ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು. ವಾರ್ಷಿಕ ಪರೀಕ್ಷೆಗೆ ಇನ್ನೇನು 60 ದಿನಗಳಿರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿ ತೋರಿಸಿದರಲ್ಲವೇ, ಆದರೆ ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವ ಆ ಕ್ಷಣವನ್ನು ನಾನು ನನ್ನ ಉಡುಪಿಯಲ್ಲೇ ನೋಡುವಂತಾಯಿತು. ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ. ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಚಾಟಿತ ವ್ಯಕ್ತಿ” ಎಂದು ಹಿಜಾಬ್ ಹೋರಾಟಗಾರ್ತಿ ಅಲಿಯಾ ಅಸ್ಸಾದಿ ಟ್ವೀಟ್ ಮಾಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...