ಕಲಬುರಗಿ | ಬಿಜೆಪಿ-ಜೆಡಿಎಸ್ ಮೈತ್ರಿ; ಮುಂದುವರೆದ ಪಕ್ಷ ತೊರೆಯುವ ಪರ್ವ

Date:

ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ, ಜೆಡಿಎಸ್‌ ತೊರೆಯುವವರ ಸಂಖ್ಯೆ ಹೆಚ್ಚುತ್ತದಲೇ ಇದೆ. ಹಳೇ ಮೈಸೂರು ಭಾಗದಲ್ಲಿ ಆರಂಭವಾದ ಪಕ್ಷ ತೊರೆಯುವ ಪರ್ವ, ಇದೀಗ ಉತ್ತರ ಕರ್ನಾಟಕಕ್ಕೂ ವ್ಯಾಪಿಸಿದೆ. ಕಲಬುರಗಿಯ ಹಲವಾರು ಮುಖಂಡರು ಜೆಡಿಎಸ್‌ಗೆ ಗುಡ್‌ಬೈ ಹೇಳಲು ಮುಂದಾಗಿದ್ದಾರೆ.

ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಯ ಪಕ್ಷದ ಅಲ್ಪಸಂಖ್ಯಾತ ಮುಖಂಡರು ಕಲಬುರಗಿಯಲ್ಲಿ ಸಭೆ ನಡೆಸಿದ್ದು, ಪಕ್ಷದಲ್ಲಿ ಮುಂದುವರೆಯುವುದಾ ಅಥವಾ ಪಕ್ಷಕ್ಕೆ ತೊರೆಯುವುದಾ? ಎಂಬ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಭೆಯಲ್ಲಿ ಪಕ್ಷದ ಅಲ್ಪಸಂಖ್ಯಾತ ಘಟಕದ ಮಾಜಿ ರಾಜ್ಯಾಧ್ಯಕ್ಷ ನಾಸಿರ್ ಹುಸೇನ್ ಉಸ್ತಾದ್ ಮಾತನಾಡಿ, “ಜೆಡಿಎಸ್‌ ಜಾತ್ಯಾತೀಯ ಪಕ್ಷವೆಂದು ಪಕ್ಷ ಕಟ್ಟಲು ದುಡಿದ್ದಿದ್ದೇವೆ. ಆದರೆ, ಪಕ್ಷದ ನಾಯಕರು ಕೋಮುವಾದಿ ಪಕ್ಷದೊಂದಿಗೆ ಮಯತ್ರಿ ಮಾಡಿಕೊಂಡಿದ್ದಾರೆ. ಆ ಮೂಲಕ ಅಲ್ಪಸಂಖ್ಯಾತ ಸಮುದಾಯವನ್ನು ಕಡೆಗಣಿಸಿದ್ದಾರೆ. ಮುಂದಿನ ವಾರ ಬೆಂಗಳೂರಿನಲ್ಲಿ ಪಕ್ಷದ ಅಲ್ಪಸಂಖ್ಯಾತ ಮುಖಂಡರು ಸಭೆ ನಡೆಸಿ ನಿರ್ಣಯ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...