ಕಲಬುರಗಿ | ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲು

Date:

  • ಚಿಂಚನಸೂರ್ ಅವರ ತಲೆ, ಮುಖ ಹಾಗೂ ಕೈ-ಕಾಲುಗಳಿಗೆ ಗಾಯ
  • ಕಲಬುರಗಿಯ ಆಕಾಶವಾಣಿ ಕೇಂದ್ರದ ಬಳಿ ಅಪಘಾತ ಸಂಭವಿಸಿದೆ

ಯಾದಗಿರಿ ಜಿಲ್ಲೆಯ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರ ಕಾರು ಅಪಘಾತವಾಗಿದ್ದು, ಕಾರಿನಲ್ಲಿದ್ದ ಚಿಂಚನಸೂರ್ ಅವರ ತಲೆ, ಮುಖ ಹಾಗೂ ಕಾಲುಗಳಿಗೆ ಗಾಯಗಳಾಗಿವೆ.

ಶುಕ್ರವಾರ ತಡರಾತ್ರಿ 12:30ರ ಸುಮಾರಿಗೆ ಕಲಬುರಗಿಯ ಆಕಾಶವಾಣಿ ಕೇಂದ್ರದ ಬಳಿ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ನಗರದ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಘಾತದಲ್ಲಿ ಚಿಂಚನಸೂರ್ ಅವರ ತಲೆ, ಮುಖ ಹಾಗೂ ಕೈ-ಕಾಲುಗಳಿಗೆ ಗಾಯಗಳಾಗಿವೆ. ಚಾಲಕ ಮತ್ತು ಗನ್‌ಮ್ಯಾನ್‌ಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣೆ ಹಿನ್ನಲೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಕ್ಷೇತ್ರದಲ್ಲಿ ಪ್ರಚಾರ ಮುಗಿಸಿಕೊಂಡು ಕಲಬುರಗಿಯ ಶಾಂತಿನಗರದಲ್ಲಿರುವ ಮನೆಗೆ ವಾಪಸ್ ಬರುವಾಗ ನಿದ್ದೆಯ ಮಂಪರಿನಲ್ಲಿದ್ದ ವಾಹನ ಚಾಲಕನಿಗೆ ಆಕಾಶವಾಣಿ ಕೇಂದ್ರದ ಬಳಿ ರಸ್ತೆಯ ಮಧ್ಯೆ ಇರುವ ಗುಂಡಿ ಕಾಣದೆ, ಕಾರು ಗುಂಡಿಯಲ್ಲಿ ಸಿಲುಕಿ ಸ್ಕಿಡ್ ಆಗಿದೆ. ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಎಲುಬು ಹಾಗೂ ನರಗಳಿಗೆ ಪೆಟ್ಟು ಬಿದ್ದಿದೆ. ಆಸ್ಪತ್ರೆಯ ತಜ್ಞ ವೈದ್ಯರು ನಿರಂತರ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್-ಬಿಜೆಪಿ-ಕಾಂಗ್ರೆಸ್ ಚಿಂಚನಸೂರ್

ಹೈದರಾಬಾದ್ ಕರ್ನಾಟಕದ ಪ್ರಭಾವಿ ನಾಯಕರಾದ ಬಾಬೂರಾವ್ ಚಿಂಚನಸೂರು ಅವರು 2008, 2013ರ ಚುನಾವಣೆಯಲ್ಲಿ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಕ್ಷೇತ್ರದಿಂದ ಗೆದ್ದಿದ್ದರು. ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಬಳಿಕ 2018ರ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಇದಕ್ಕೆ ಕಾಂಗ್ರೆಸ್ ನಾಯಕರೇ ಕಾರಣ ಎಂದು ಆರೋಪ ಮಾಡಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಈಗ ಮತ್ತೆ ಬಿಜೆಪಿ ಎಂಎಲ್‌ಸಿ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದಾರೆ. ಗುರುಮಿಠಕಲ್ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್ ಪಡೆದು ಸ್ಪರ್ಧಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ; ಪೀಡೆ ತೊಲಗಿತು ಎಂದ ರಮೇಶ್ ಜಾರಕಿಹೊಳಿ

ನಾಮಪತ್ರ ಸಲ್ಲಿಕೆ ಮೂಂದೂಡಿಕೆ

ಬಾಬುರಾವ್ ಚಿಂಚನಸೂರ್ ಅವರು ನಾಮಪತ್ರ ಸಲ್ಲಿಕೆಯ ತಯಾರಿಯಲ್ಲಿದ್ದರು. ಆದರೆ, ರಸ್ತೆ ಅಪಘಾತದಲ್ಲಿ ಗಾಯವಾದ ಹಿನ್ನಲೆ ನಾಮಪತ್ರ ಸಲ್ಲಿಕೆ ಸದ್ಯಕ್ಕೆ ಮುಂದೂಡಿಕೆಯಾಗಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...