ತೆಲಂಗಾಣ | ಕಾಳೇಶ್ವರಂ ಏತ ನೀರಾವರಿ ಹಗರಣ; ತನಿಖೆಗೆ ಕೇಂದ್ರ ಯಾಕೆ ಆದೇಶಿಸಿಲ್ಲ?

Date:

ಕಾಳೇಶ್ವರಂ ಏತ ನೀರಾವರಿ ಯೋಜನೆಯಲ್ಲಿ ಹಗರಣ ನಡೆದಿದೆ ಎಂದು ಹೇಳಲಾಗುತ್ತಿದೆ. ಆದರೂ, ಹಣರಣದ ತನಿಖೆಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಯಾಕೆ ಆದೇಶಿಸಿಲ್ಲ ಎಂದು ತೆಲಂಗಾಣ ಪ್ರವಾಸೋದ್ಯಮ ಮತ್ತು ಅಬಕಾರಿ ಸಚಿವ ಜೂಪಲ್ಲಿ ಕೃಷ್ಣರಾವ್ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೇಂದ್ರ ಸರ್ಕಾರವು ಸಿಬಿಐ ಮತ್ತು ಇಡಿಯಂತಹ ತನಿಖಾ ಸಂಸ್ಥೆಗಳಿಂದ ಅನೇಕ ಜನರನ್ನು ಬಂಧಿಸಿದೆ. ಆದರೆ, ಬಿಆರ್‌ಎಸ್ ಆಡಳಿತದಲ್ಲಿ ನಡೆದಿರುವ ಭ್ರಷ್ಟಾಚಾರ ಮತ್ತು ಸುಲಿಗೆ ಕುರಿತು ಈ ಸಂಸ್ಥೆಗಳು ಯಾಕೆ ತನಿಖೆ ನಡೆಸುತ್ತಿಲ್ಲ. ಈ ಬಗ್ಗೆ ಬಿಜೆಪಿಗರು ವಿವರಿಸಬೇಕು” ಎಂದು ಹೇಳಿದ್ದಾರೆ.

“ಕೃಷ್ಣಾ ಜಲ ವಿವಾದವನ್ನು ಇತ್ಯರ್ಥಪಡಿಸಿ ತೆಲಂಗಾಣಕ್ಕೆ ನ್ಯಾಯಯುತವಾದ ಪಾಲು ನೀಡುವ ವಿಷಯದ ಬಗ್ಗೆ ಚುನಾವಣೆ ಸಮಯದಲ್ಲಿ ಕೇಂದ್ರ ಮಾತನಾಡುತ್ತಿದೆ. ಜಲ ವಿವಾದವನ್ನು ಇತ್ಯರ್ಥಪಡಿಸದೆ ತೆಲಂಗಾಣ ಜನತೆಯ ಮತ ಕೇಳುವ ನೈತಿಕ ಹಕ್ಕು ಬಿಜೆಪಿಗೆ ಇಲ್ಲ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಾಲಮುರು-ರಂಗಾರೆಡ್ಡಿ ಏತ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯ ಸ್ಥಾನಮಾನವನ್ನು ಏಕೆ ನೀಡುತ್ತಿಲ್ಲ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ವಿವರಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಬಿಜೆಪಿಯವರು ಜಾತಿ, ಧರ್ಮದ ಹೆಸರಿನಲ್ಲಿ ದೇಶವನ್ನು ಒಡೆದು ಮತ ಗಳಿಸಲು ಯತ್ನಿಸುತ್ತಿದ್ದಾರೆ. ಅವರು ರಾಮರಾಜ್ಯದ ಬಗ್ಗೆ ಮಾತನಾಡುತ್ತಾರೆ. ಆದರೆ ಅವರು ಏಕೆ ನ್ಯಾಯಯುತ, ನ್ಯಾಯೋಚಿತ ಮತ್ತು ಎಲ್ಲರನ್ನೂ ಒಳಗೊಳ್ಳುವ ಸರ್ಕಾರ ನಡೆಸಲು ಸಾಧ್ಯವಾಗುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

“ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಬಿಆರ್‌ಎಸ್ ಮೈತ್ರಿಯು ಎರಡು ಸ್ಥಾನಗಳನ್ನೂ ಗೆಲ್ಲುವುದಿಲ್ಲ. ತೆಲಂಗಾಣ ಜನತೆ ಬಿಜೆಪಿ ಮತ್ತು ಬಿಆರ್‌ಎಸ್ ಎರಡಕ್ಕೂ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ಕೃಷ್ಣರಾವ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...