ಕಾಳಿನದಿ ಸೇತುವೆ ಕುಸಿತ | ಉತ್ತರ ಕನ್ನಡ ಡಿಸಿಗೆ ಕರೆ ಮಾಡಿ ಮಾಹಿತಿ ಪಡೆದ ಸಿಎಂ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ ಕುರಿತು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು.

ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಘಟನೆಯ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ” ಸೇತುವೆ ಕುಸಿದ ಸಂದರ್ಭದಲ್ಲಿ ಗಾಯಗೊಂಡ ಲಾರಿ ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಕಾರ್ಯಚರಣೆಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಹೆಚ್ಚುವರಿಯಾಗಿ, ಸೇತುವೆಯ ಬಲವತ್ತತೆಯ ಪರಿಶೀಲನೆಗಾಗಿ ಮತ್ತು ಪ್ರದೇಶದಲ್ಲಿನ ಎಲ್ಲಾ ಸೇತುವೆಗಳ ಸುರಕ್ಷತೆಯನ್ನು ಖಚಿತಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಅಧಿಕೃತ ಪತ್ರವನ್ನು ಕಳುಹಿಸಲಾಗಿದೆ” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...