ಕಲ್ಯಾಣ ಕರ್ನಾಟಕ: ಕ್ರಿಯಾ ಯೋಜನೆ ಸಮರೋಪಾದಿಯಲ್ಲಿ ಅನುಷ್ಠಾನಗೊಳಿಸಿ; ಸಿಎಂ ಸೂಚನೆ

Date:

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.

ಅವರು ಇಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನೆ ನಡೆಸಿದರು.

ಮಂಡಳಿಯಲ್ಲಿ ಪ್ರಸ್ತುತ 2106 ಕೋಟಿ ಲಭ್ಯವಿದೆ. ಸರ್ಕಾರ ಅಧಿಕಾರಕ್ಕೆ ಬಂದ ನಂತರ 757.66 ಕೋಟಿ ರೂ. ವೆಚ್ಚ ಮಾಡಲಾಗಿದೆ. ಈ ಆರ್ಥಿಕ ವರ್ಷಾಂತ್ಯದ ವೇಳೆಗೆ ಇನ್ನೂ ಒಂದು ಸಾವಿರ ಕೋಟಿ ರೂ. ವೆಚ್ಚ ಆಗುವ ಸಾಧ್ಯತೆಗಳಿವೆ. ಇದಕ್ಕಾಗಿ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುವಂತೆ, ಮಂಡಳಿಯ ಅಧ್ಯಕ್ಷರು, ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರುಗಳು ಹಾಗೂ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ, ಹಿನ್ನಡೆ ಕಂಡಿರುವ ಯೋಜನೆಗಳ ತ್ವರಿತ ಅನುಷ್ಠಾನ ಮಾಡಬೇಕು. ಪ್ರಾರಂಭವಾಗದ ಕಾಮಗಾರಿಗಳನ್ನು ಮರುಪರಿಶೀಲನೆ ಮಾಡಿ, ಬದಲಿಸುವ ಮೂಲಕ ಸಕಾಲದಲ್ಲಿ ಅನುದಾನ ವೆಚ್ಚ ಮಾಡುವಂತೆ ಸೂಚಿಸಿದರು. ಕಾಮಗಾರಿಗಳ ಅನುಷ್ಠಾನಕ್ಕೆ ನೀಲ ನಕ್ಷೆ ರೂಪಿಸಿ, ಅದರಂತೆ ಕಾರ್ಯನಿರ್ವಹಿಸಲು ಸೂಚಿಸಿದರು.

ಮುಂದಿನ ವರ್ಷದ ಕ್ರಿಯಾ ಯೋಜನೆಯನ್ನು ಮಾರ್ಚ್‌ ಅಂತ್ಯದ ಒಳಗೆ ರೂಪಿಸುವಂತೆ ಸೂಚಿಸಿದರು. ಎಸ್‌.ಸಿ.ಎಸ್‌.ಪಿ., ಟಿ.ಎಸ್.ಪಿ. ಅಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಜನಸಂಖ್ಯೆ ಶೇ. 50ಕ್ಕೂ ಹೆಚ್ಚಾಗಿ ವಾಸವಿರುವ ಸ್ಥಳಗಳನ್ನು ಅಭಿವೃದ್ಧಿ ಪಡಿಸಲು ಸೂಚಿಸಿದರು. ಪ್ರಗತಿಯಲ್ಲಿರುವ ಕೆಲಸಗಳನ್ನೆಲ್ಲ ಈ ವರ್ಷವೇ ಪೂರ್ಣಗೊಳಿಸಬೇಕು. ಹಿಂದಿನ ವರ್ಷದ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಕೆಕೆಆರ್‌ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಸಚಿವರುಗಳಾದ ಶರಣ ಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ, ಜಮೀರ್ ಅಹಮದ್ ಖಾನ್, ಶರಣಬಸಪ್ಪ ದರ್ಶನಾಪುರ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ, ಬೋಸ್ ರಾಜು, ರಹೀಂ ಖಾನ್, ಡಿ.ಸುಧಾಕರ್ ಜತೆಗೆ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲ್, ಆರ್ಥಿಕ ಸಲಹೆಗಾರ ಬಸವರಾಜ ರಾಯ ರೆಡ್ಡಿ, ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಸಭೆಯಲ್ಲಿ ಭಾಗಿಯಾಗಿದ್ದರು.

ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...