ಕಾಂಗ್ರೆಸ್‌ ನಾಯಕ ಕಮಲ್‌ ನಾಥ್ ಬಿಜೆಪಿ ಸೇರುತ್ತಾರೆಂಬ ವದಂತಿ; ಕೇಸರಿ ನಾಯಕರ ಭೇಟಿ ಸಾಧ್ಯತೆ

Date:

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ನಾಯಕ ಕಮಲ್‌ ನಾಥ್‌ ಶನಿವಾರ ದೆಹಲಿಗೆ ತೆರಳಿದ್ದಾರೆ. ಅವರು ಬಿಜೆಪಿಗೆ ಸೇರುವ ಸಾಧ್ಯತೆಗಳಿವೆ ಎಂಬ ಊಹಾಪೋಹಗಳ ನಡುವೆ, ಇದೀಗ, ಕಮಲ್‌ ನಾಥ್‌ ಕೇಸರಿ ಪಕ್ಷದ ನಾಯಕರನ್ನು ಭೇಟಿ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಕಳೆದ ಕೆಲವು ದಿನಗಳಿಂದ ಕಮಲ್‌ ನಾಥ್ ಮತ್ತು ಅವರ ಪುತ್ರ ನಕುಲ್ ನಾಥ್ ಕಾಂಗ್ರೆಸ್ ತೊರೆಯುತ್ತಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಮಧ್ಯಪ್ರದೇಶದ ಏಕೈಕ ಕಾಂಗ್ರೆಸ್ ಸಂಸದ ನಕುಲ್ ನಾಥ್ ಅವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಬಯೋದಿಂದ ಪಕ್ಷದ ಹೆಸರನ್ನು ಕೈಬಿಟ್ಟಿದ್ದಾರೆ. ಇದು ಅವರು ಕಾಂಗ್ರೆಸ್‌ ತೊರೆಯುತ್ತಾರೆ ಎಂಬ ಚರ್ಚೆಗಳಿಗೆ ಮತ್ತಷ್ಟು ಪುಷ್ಠಿ ನೀಡಿದೆ. ಇದೀಗ, ಕಮಲ್ ನಾಥ್ ದೆಹಲಿಗೆ ತೆರಳಿರುವುದರಿಂದ ಊಹಾಪೋಹಗಳು ಮತ್ತಷ್ಟು ಹೆಚ್ಚಾಗಿವೆ.

ನಕುಲ್ ನಾಥ್ ಅವರು ಮಧ್ಯಪ್ರದೇಶದ ಛಿಂದ್ವಾರಾ ಲೋಕಸಭಾ ಕ್ಷೇತ್ರದಿಂದ 2019ರಲ್ಲಿ ಗೆಲುವು ಸಾಧಿಸಿದ್ದರು. ಇದೀಗ, ಕಾಂಗ್ರೆಸ್‌ ಘೋಷಣೆಗೂ ಮುನ್ನವೇ ಮುಂದಿನ ಚುನಾವಣೆಯಲ್ಲೂ ತಾವೇ ಅಭ್ಯರ್ಥಿಯೆಂದು ಫೆಬ್ರವರಿ ಆರಂಭದಲ್ಲಿ ಹೇಳಿಕೊಂಡಿದ್ದರು. ಅಲ್ಲದೆ, ಕಮಲ್‌ ನಾಥ್‌ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬಹುದು ಎಂಬ ಚರ್ಚೆಗಳ ಬಗ್ಗೆಯೂ ಮಾತನಾಡಿದ್ದ ನಕುಲ್, ‘ಕಮಲ್ ನಾಥ್ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನಾನು ಸ್ಪಷ್ಟಪಡಿಸುತ್ತೇನೆ’ ಎಂದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...