ಕನ್ನಡ ಕಡ್ಡಾಯ | ಸುಗ್ರೀವಾಜ್ಞೆ ತಿರಸ್ಕರಿಸಿಲ್ಲ, ಅಧಿವೇಶನದಲ್ಲಿ ಮಂಡಿಸಲು ಹೇಳಿದ್ದೇವೆ: ಥಾವರ್ ಚಂದ್ ಗೆಹ್ಲೋಟ್

Date:

ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿಲ್ಲ ಎಂದು ರಾಜಭವನ ಸ್ಪಷ್ಟೀಕರಣ ನೀಡಿದೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಥಾವರ್ ಚಂದ್ ಗೆಹ್ಲೋಟ್, “ಅಧಿವೇಶನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿಲ್ಲ, ಸರ್ಕಾರಕ್ಕೆ ವಾಪಸ್ ಕಳಿಸಲಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಧಿವೇಶನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿಲ್ಲ, ಸರ್ಕಾರಕ್ಕೆ ವಾಪಸ್ ಕಳಿಸಲಾಗಿದೆ. ಫೆಬ್ರವರಿ 12ರಿಂದ ವಿಧಾನಮಂಡಲ ಅಧಿವೇಶನ ನಿಗದಿಯಾಗಿದೆ. ಅಧಿವೇಶನದಲ್ಲೇ ಉಭಯ ಸದನಗಳಲ್ಲಿ ಮಸೂದೆಯನ್ನು ಮಂಡಿಸಿ ಅನುಮೋದನೆ ಪಡೆಯುವಂತೆ ಸರ್ಕಾರಕ್ಕೆ ಸೂಚಿಸಲಾಗಿದೆ” ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್‌ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿದ್ದರಾಮಯ್ಯ ಸ್ಪಷ್ಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಪ್ರತಿಕ್ರಿಯಿಸಿ, ” ಅಧಿವೇಶನ ನಿಗದಿ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ವಾಪಸ್ ಕಳಿಸಿದ್ದಾರೆ. ನಾವು ಸುಗ್ರೀವಾಜ್ಞೆ ಕಳಿಸಿದಾಗ ಅಧಿವೇಶನ ನಿಗದಿಯಾಗಿರಲಿಲ್ಲ. ಸುಗ್ರೀವಾಜ್ಞೆ ರಾಜ್ಯಪಾಲರ ಕೈಸೇರುವ ವೇಳೆಗೆ ಅಧಿವೇಶನ ನಿಗದಿಯಾಗಿದೆ. ಹೀಗಾಗಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸ್ ಕಳಿಸಿದ್ದಾರೆ. ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸುತ್ತೇವೆ” ಎಂದಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...