ಮಂಡ್ಯದಲ್ಲಿ ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನ: ಶಿವರಾಜ್ ತಂಗಡಗಿ

Date:

“ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ದಿನಾಂಕ‌ ನಿಗದಿಪಡಿಸಲಾಗುವುದು” ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ‌ ಶಿವರಾಜ್ ತಂಗಡಗಿ ಹೇಳಿದ್ದಾರೆ.

14 ಅಕಾಡೆಮಿ ಮತ್ತು 4 ಪ್ರಾಧಿಕಾರಕ್ಕೆ ನೂತನವಾಗಿ ನೇಮಕಗೊಂಡ ಅಧ್ಯಕ್ಷರು ಹಾಗೂ ಸದಸ್ಯರ ಜತೆ ಮೊದಲ ಬಾರಿಗೆ ಸಚಿವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಸಮಾಲೋಚನಾ‌ ಸಭೆ ನಡೆಸಿದರು.

ಆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಲಾಗಿದೆ. ಕೆಲವೊಂದು ಸಣ್ಣಪುಟ್ಟ ಸಮಸ್ಯೆಗಳಿವೆ. ಅದನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಜೊತೆಗೆ ಚರ್ಚಿಸಿ, ಎಲ್ಲವನ್ನೂ ಬಗೆಹರಿಸಲಾಗುವುದು” ಎಂದು ಸಚಿವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ವಿಶ್ವ‌ ಸಮ್ಮೇಳನ‌’ದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, “ವಿಶ್ವ ಸಮ್ಮೇಳನ ನಡೆಸುವ ಬಗ್ಗೆ ಕೂಡ ನಮಗೂ ಇರಾದೆ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ತೀರ್ಮಾನ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

“ನೂತನ ಅಕಾಡೆಮಿಗಳ ಅಧ್ಯಕ್ಷರುಗಳಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚಿಸಲಾಗಿದ್ದು,‌ ಅಕಾಡೆಮಿಗಳಿಗೆ ಅಗತ್ಯವಿರುವ ಅನುದಾನ ನೀಡಲಾಗುವುದು” ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಹೇಳಿದರು.

“ಚುನಾವಣಾ ನೀತಿ ಸಂಹಿತೆ ಇದ್ದ ಕಾರಣ ಅಕಾಡೆಮಿ, ಪ್ರಾಧಿಕಾರದ ನೂತನ ಅಧ್ಯಕ್ಷರು ಮತ್ತು ಸದಸ್ಯರ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಇದೀಗ ಎಲ್ಲರೊಂದಿಗೆ ಸಭೆ ನಡೆಸಿದ್ದೇನೆ. ಪ್ರತಿ ತಿಂಗಳು ಎರಡು ಅಕಾಡೆಮಿಗಳ ಕಾರ್ಯ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗುತ್ತದೆ. ಅಲ್ಲದೆ,‌ ಅಕಾಡೆಮಿಗಳು ಹಾಗೂ ಪ್ರಾಧಿಕಾರಗಳು ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸಾಮಾಜಿಕ ನ್ಯಾಯ ಪಾಲನೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಮುಕ್ತವಾಗಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದ್ದೇನೆ” ಎಂದು ಶಿವರಾಜ್ ತಂಗಡಗಿ ತಿಳಿಸಿದರು.

“ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳವಣಿಗೆಯಲ್ಲಿ ಪ್ರಾಧಿಕಾರ ಮತ್ತು ಅಕಾಡೆಮಿಗಳು ರಾಜೀಯಾಗದೆ ಕೆಲಸ ಮಾಡಬೇಕು ಎಂಬುದು ನಮ್ಮ ಆಶಯ. ಒಟ್ಟಾರೆ ಎಲ್ಲಾ ಅಕಾಡೆಮಿಗಳು‌ ಚುರುಕಾಗಿ ಕೆಲಸ ಮಾಡಬೇಕೆಂದು ಸೂಚಿಸಲಾಗಿದೆ” ಎಂದು ಸಚಿವರು ವಿವರಿಸಿದರು.‌

ಇದನ್ನು ಓದಿದ್ದೀರಾ? ಪ್ರಜ್ವಲ್ ಬಳಿಕ ಸೂರಜ್ ರೇವಣ್ಣ ಸರದಿ: ಸಲಿಂಗಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪ!

“ನೂತನವಾಗಿ ನೇಮಕಗೊಂಡ ಅಧ್ಯಕ್ಷರು ಹಾಗೂ ಸದಸ್ಯರ ಸಭೆಯಲ್ಲಿ ಹಲವು ಹಿರಿಯರು ಸಲಹೆಗಳನ್ನು ನೀಡಿದ್ದು, ಎಲ್ಲರನ್ನು ಒಟ್ಟಾಗಿ ಕರೆದೊಯ್ಯಲಾಗುವುದು. ಎಲ್ಲರೂ ಇಲಾಖೆ ಮತ್ತು ಸರ್ಕಾರದ‌‌‌ ಘನತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ” ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...