ಮೀಸಲಾತಿ ಕುರಿತ ಕರಂದ್ಲಾಜೆ ಹೇಳಿಕೆ; ಅಜ್ಞಾನಕ್ಕೆ ಮದ್ದಿಲ್ಲ ಎಂದ ಸಿದ್ದರಾಮಯ್ಯ

Date:

  • ಸಿದ್ದರಾಮಯ್ಯ ಸುಳ್ಳು ಭರವಸೆ ನೀಡಿದ್ದಾರೆ ಎಂದ ಕರಂದ್ಲಾಜೆ
  • ಕೇಂದ್ರ ಸರ್ಕಾರವೇ ಮೀಸಲಾತಿಯನ್ನು 56%ಕ್ಕೆ ಏರಿಸಿದೆ

ಮೀಸಲಾತಿಯನ್ನು ಶೇ.50 ಕ್ಕಿಂತ ಹೆಚ್ಚಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದು, ಅಜ್ಞಾನಕ್ಕೆ ಮದ್ದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ.75ರಷ್ಟು ಹೆಚ್ಚಿಸಿ, ಎಲ್ಲ ಸಮುದಾಯಗಳಿಗೂ ಸಮಾನವಾಗಿ ಹಂಚುತ್ತೇವೆ ಎಂದು ಹೇಳಿಕೆ ನೀಡಿದ್ದರು.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿರುವ ಶೋಭಾ ಕರಂದ್ಲಾಜೆ, “ನಾನು ಸಿದ್ದರಾಮಯ್ಯ ಅವರಿಗೆ ಕೇಳ್ತೇನೆ 75% ಮೀಸಲಾತಿ ಎಲ್ಲಿಂದ ಕೊಡ್ತಿರಾ. ಸಂವಿಧಾನದ ಪ್ರಕಾರ 50% ಗಿಂತ ಹೆಚ್ಚಿಸಲು ಬರುವುದಿಲ್ಲ. ರಾಜ್ಯದ ಜನರ ಕಣ್ಣಿಗೆ ಮಣ್ಣು ಎರಚುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶೋಭಾ ಕರಂದ್ಲಾಜೆ ಅವರ ಹೇಳಿಕೆ ವಿಡಿಯೋ ಹಂಚಿಕೊಂಡಿರುವ ಸಿದ್ದರಾಮಯ್ಯ, “ಮೀಸಲಾತಿಯನ್ನು ಶೇಕಡಾ 75ಕ್ಕೆ ಹೆಚ್ಚಿಸಲು ಹೇಗೆ ಸಾಧ್ಯ? ಎಂದು ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಅವರ ಪಕ್ಷದ ಸರ್ಕಾರವೇ ಪರಿಶಿಷ್ಟ ಜಾತಿ/ಪಂಗಡದ ಮೀಸಲು ಹೆಚ್ಚಿಸಿ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇಕಡಾ 56ಕ್ಕೆ ಹೆಚ್ಚಿಸಿದ್ದು ಇವರ ಗಮನಕ್ಕೆ ಬಂದಿಲ್ಲ. ಅಜ್ಞಾನಕ್ಕೆ ಮದ್ದಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

“ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ 10 ರಷ್ಟು ಮೀಸಲಾತಿ ನೀಡಿ ಒಟ್ಟು ಮೀಸಲು ಪ್ರಮಾಣವನ್ನು ಶೇಕಡಾ 60ಕ್ಕೆ ಹೆಚ್ಚಿಸಿದ್ದು ಕೂಡಾ ಸಚಿವೆ ಶೋಭಾ ಅವರಿಗೆ ಗೊತ್ತಿಲ್ಲ. ಸುಳ್ಳು ಹೇಳುವುದೇ ಅಭ್ಯಾಸವಾಗಿ ಬಿಟ್ಟರೆ ಸತ್ಯ ತಿಳಿಯುವುದೇ ಇಲ್ಲ” ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕರಂದ್ಲಾಜೆ ವಿವಾದಾತ್ಮಕ ಪತ್ರ | ಚುನಾವಣೆ ನಡೆಸುತ್ತಿರುವುದು ಆಯೋಗವೋ, ಬಿಜೆಪಿಯೋ: ಸಿದ್ದರಾಮಯ್ಯ ಪ್ರಶ್ನೆ

ಸಿದ್ದರಾಮಯ್ಯ ಭರವಸೆ

ಮೀಸಲಾತಿ ಮಿತಿಯನ್ನು ಶೇ.50ರಿಂದ ಶೇ. 75ಕ್ಕೆ ಹೆಚ್ಚಿಸಲು ಕಾಂಗ್ರೆಸ್ ಬದ್ಧವಾಗಿದೆ. ಜನಸಂಖ್ಯೆಯ ಆಧಾರದಲ್ಲಿ ಎಲ್ಲಾ ಜಾತಿಗಳಿಗೆ ಮೀಸಲಾತಿ ನೀಡಲಾಗುವುದು ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

“ಎಲ್ಲ ಜಾತಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಾತಿನಿಧ್ಯ ಸಿಗುವಂತೆ ಮೀಸಲಾತಿಯನ್ನು ಪರಿಷ್ಕರಿಸಿ ಜಾರಿಗೆ ತರಬೇಕು ಮತ್ತು ಈ ಮೀಸಲಾತಿಯನ್ನು ಸಂವಿಧಾನದ ಒಂಭತ್ತನೇ ಶೆಡ್ಯೂಲ್ ಗೆ ಸೇರಿಸಬೇಕು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇಕಡಾ 50ರಿಂದ ಶೇಕಡಾ 75ರ ವರೆಗೆ ಹೆಚ್ಚಿಸಿ ಎಲ್ಲ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ನೀಡುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...