ಕರ್ನಾಟಕ ವಿಶ್ವದಲ್ಲಿಯೇ 4ನೇ ಅತಿದೊಡ್ಡ ತಂತ್ರಜ್ಞಾನ ಕ್ಲಸ್ಟರ್‌: ಸಿಎಂ ಸಿದ್ದರಾಮಯ್ಯ

Date:

ಬೋಯಿಂಗ್‌ ಸಂಸ್ಥೆಯ 43 ಎಕರೆ ವಿಶಾಲವಾದ ಪ್ರದೇಶದಲ್ಲಿ ನಿರ್ಮಿಸಿರುವ ಎಂಜಿನಿಯರಿಂಗ್‌ ಮತ್ತು ಟೆಕ್ನಾಲಜಿ ಕೇಂದ್ರ ಹಾಗೂ ವಿಮಾನ ಯಾನ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜನ ನೀಡುವ ಬೋಯಿಂಗ್‌ ಸುಕನ್ಯಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗವಹಿಸಿ ಮಾತನಾಡಿದರು.

“ಕರ್ನಾಟಕ ರಾಜ್ಯವು ದೇಶದ ಏರೋಸ್ಪೇಸ್‌ ವಲಯದಲ್ಲಿ ಪ್ರಾಬಲ್ಯವನ್ನು ಸಾಧಿಸಿದ್ದು, ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ರಫ್ತಿನ ಶೇ. 65 ರಷ್ಟು ಪಾಲನ್ನು ಹೊಂದಿದೆ” ಎಂದರು.

“ಬೋಯಿಂಗ್‌ ಸಂಸ್ಥೆಯು ತಂತ್ರಜ್ಞಾನದ ವಲಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದ ಮುಕುಟಕ್ಕೆ ಹೊಸದೊಂದು ಮಣಿ ಸೇರ್ಪಡೆಯಾದಂತಿದೆ. ಫಾರ್ಚೂನ್‌ 500 ಕಂಪನಿಗಳಲ್ಲಿ 400 ಕ್ಕೂ ಹೆಚ್ಚು ಕಂಪನಿಗಳ ನೆಲೆಯಾಗಿರುವ ನಮ್ಮ ರಾಜ್ಯವು, ಸಂಶೋಧನೆ ಮತ್ತು ಅಭಿವೃದ್ಧಿ, ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿರುವುದಲ್ಲದೆ, ಸ್ಟಾರ್ಟಪ್‌ ರಾಜಧಾನಿ ಎಂಬ ಕೀರ್ತಿಗೂ ಭಾಜನವಾಗಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರತಿಭಾನ್ವಿತ ಉದ್ಯೋಗಿಗಳು ಹಾಗೂ ಕೌಶಲಯುಕ್ತ ಮಾನವ ಸಂಪನ್ಮೂಲ ಹೇರಳವಾಗಿರುವ ಕರ್ನಾಟಕವು ಸಹಜವಾಗಿಯೇ ತಂತ್ರಜ್ಞಾನ ಹಾಗೂ ಜ್ಞಾನಾಧಾರಿತ ಉದ್ಯಮಗಳ ಮೊದಲ ಆಯ್ಕೆಯಾಗಿದೆ. ಈ ಎಲ್ಲ ಕಾರಣಗಳಿಂದಾಗಿ ಕರ್ನಾಟಕವು ಹೂಡಿಕೆದಾರರ ನೆಚ್ಚಿನ ತಾಣವಾಗಿದೆ. ಹೂಡಿಕೆದಾರ ಸ್ನೇಹಿ ವಾತಾವರಣ ನಿರ್ಮಿಸಲು ನಮ್ಮ ಸರ್ಕಾರ ಹೊಂದಿರುವ ಬದ್ಧತೆಯನ್ನು ಪುನರುಚ್ಛರಿಸಬಯಸುತ್ತೇನೆ. ಈ ನಿಟ್ಟಿನಲ್ಲಿ ವಿವಿಧ ವಲಯಗಳಿಗೆ ನಿರ್ದಿಷ್ಟ ನೀತಿ ಹಾಗೂ ಕೈಗಾರಿಕಾ ಸ್ನೇಹಿ ನೀತಿಗಳನ್ನು ರಾಜ್ಯ ಸರ್ಕಾರವು ಜಾರಿಗೊಳಿಸಿದೆ” ಎಂದು ಹೇಳಿದರು.

“ಬೋಯಿಂಗ್‌ ಇಂಡಿಯಾದ ಎಂಜಿನಿಯರಿಂಗ್‌ ಮತ್ತು ತಂತ್ರಜ್ಞಾನ ಕೇಂದ್ರದ ಆವರಣದ ಈ ಉದ್ಘಾಟನಾ ಸಮಾರಂಭವು ಜಾಗತಿಕ ಮಟ್ಟದಲ್ಲಿ ವಿಮಾನಯಾನ ವಲಯದ ಅಭಿವೃದ್ಧಿಗೆ ಉತ್ತಮ ಕೊಡುಗೆ ನೀಡುವ ಆಶಯಕ್ಕೆ ಪುಷ್ಟಿ ನೀಡುವಂತಿದೆ. ಬೋಯಿಂಗ್‌ ಸಂಸ್ಥೆಯು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ಈ ಪ್ರದೇಶವನ್ನು ಆಯ್ಕೆ ಮಾಡಿರುವುದು ಅತ್ಯಂತ ಸಂತೋಷ ನೀಡಿದೆ. ಈ ಭಾಗವು ರಾಜ್ಯದ ಕೈಗಾರಿಕಾ ಅಭಿವೃದ್ಧಿಯಲ್ಲಿ ಹೊಸ ಹೊಸ ಸಾಧ್ಯತೆಗಳನ್ನು ಹುಟ್ಟುಹಾಕಲು ಮುನ್ನುಡಿ ಬರೆದಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನ ಈ ಕಚ್ಚಾಟ, ‘ಆತ್ಮಹತ್ಯೆ’ಯ ಹುಚ್ಚಾಟ

“ಬೋಯಿಂಗ್‌ನ ಈ ಹೊಸ ಉಪಕ್ರಮದಿಂದಾಗಿ ಸ್ಥಳೀಯ ಪ್ರತಿಭಾವಂತರಿಗೆ ಜಾಗತಿಕ ಮಟ್ಟದ ಯೋಜನೆಗಳಲ್ಲಿ ಕಾರ್ಯನಿರ್ವಹಿಸಲು ಅವಕಾಶ ದೊರೆಯಲಿದೆ. ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಎಲ್ಲರ ಒಳಗೊಳ್ಳುವಿಕೆ ಹಾಗೂ ಎಲ್ಲರಿಗೂ ತಂತ್ರಜ್ಞಾನದ ಲಾಭ ದೊರಕುವಂತಾಗಬೇಕು ಎನ್ನುವುದು ನಮ್ಮ ಆಶಯವಾಗಿದೆ. ಈ ನಿಟ್ಟಿನಲ್ಲಿ ನಮ್ಮ ರಾಜ್ಯದ ಹೆಣ್ಣುಮಕ್ಕಳು ಹಾಗೂ ಮಹಿಳೆಯರ ಸಬಲೀಕರಣಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಿದೆ. ಮಹಿಳೆಯರ ಅಭ್ಯುದಯ ಹಾಗೂ ಸಮಾಜಕ್ಕೆ ಅವರ ಅಮೂಲ್ಯ ಕೊಡುಗೆ ನೀಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಸದಾ ಬೆಂಬಲ ನೀಡುತ್ತಾ ಬಂದಿದೆ” ಎಂದು ತಿಳಿಸಿದರು.

“ಈ ಹಿನ್ನೆಲೆಯಲ್ಲಿ ಇಂದು ಇಲ್ಲಿ ಬೋಯಿಂಗ್‌ ಸುಕನ್ಯಾ ಕಾರ್ಯಕ್ರಮವನ್ನು ಉದ್ಘಾಟಿಸುತ್ತಿರುವುದು ಸಂತೋಷ ನೀಡಿದೆ. ಇದು ಕೇವಲ ಬೋಯಿಂಗ್‌ ಸಂಸ್ಥೆಗೆ ಮಾತ್ರವಲ್ಲ, ನಮ್ಮ ನಾಡಿಗೂ ಹೆಮ್ಮೆಯ ವಿಷಯವಾಗಿದೆ. ನಿಮ್ಮ ಭವಿಷ್ಯದ ಯೋಜನೆಗಳಿಗೆ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲ ಸಹಕಾರ ನೀಡುತ್ತದೆ. ಎಲ್ಲ ಉಪಕ್ರಮಗಳು ಬೋಯಿಂಗ್‌ ಸಂಸ್ಥೆ ಮತ್ತು ಕರ್ನಾಟಕ ರಾಜ್ಯಕ್ಕೆ ನಾವೀನ್ಯತೆ, ಅಭಿವೃದ್ಧಿ ಹಾಗೂ ಸಮೃದ್ಧಿಯ ಮೂಲಕ ಉಜ್ವಲ ಭವಿಷ್ಯ ರೂಪಿಸುವಂತಾಗಲಿ ಎಂದು ಹಾರೈಸುತ್ತೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...