ಕರ್ನಾಟಕ ನಕ್ಸಲ್ ಮುಕ್ತ ರಾಜ್ಯ: ಸಿಎಂ ಸಿದ್ದರಾಮಯ್ಯ ಘೋಷಣೆ

Date:

ನಕ್ಸಲ್ ಮುಕ್ತ ಹೋರಾಟಕ್ಕೆ ಅನೇಕ ರಾಜ್ಯಗಳು ಶ್ರಮಿಸಿವೆ. ನಕ್ಸಲ್ ಹೋರಾಟವನ್ನು ತೆರೆರೆಯಲು ಯತ್ನಿಸಿವೆ. ಈ ಪ್ರಯತ್ನದಲ್ಲಿ, ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯ ಮಾಡಬೇಕು ಎನ್ನುವ ಉದ್ದೇಶ ಈಡೇರಿದೆ. ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಆರು ಮಂದಿ ನಕ್ಸಲ್ ಹೋರಾಟಗಾರರಾದ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ ಮತ್ತು ರಾಯಚೂರಿನ ಮಾರೆಪ್ಪ ಅರೋಲಿ ಸರ್ಕಾರದ ಎದುರು ತಮ್ಮ ವಸ್ತ್ರಗಳನ್ನು ಒಪ್ಪಿಸಿದ್ದಾರೆ. ಪ್ರಜಾತಾಂತ್ರಿಕ ಹೋರಾಟ ನಡೆಸಲು ಮುಖ್ಯವಾಹಿನಿಗೆ ಬಂದಿದ್ದಾರೆ. ಅ

ಅವರಿಗೆ ಗುಲಾಬಿ ಹೂವು ಕೊಟ್ಟು ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಸರ್ಕಾರದ ಮುಂದೆ ಶರಣಾಗಿರುವ ಆರು ಮಂದಿ ನಕ್ಸಲ್ ಹೋರಾಟಗಾರರಿಗೆ ಸರ್ಕಾರವು ಶರಣಾಗತಿ ಮತ್ತು ಪುನರ್ವಸತಿಯ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಸೌಲಭ್ಯಗಳನ್ನು ಒದಗಿಸಲಿದೆ. ಕಾನೂನು ಪ್ರಕಾರ ಅವರಿಗೆ ಪರಿಹಾರ ಕೊಡುತ್ತೇವೆ. ಕಾಡಿನಿಂದ ಜೈಲಿಗೆ, ಜೈಲಿನಿಂದ ನಾಡಿಗೆ ತರುವ ಪ್ರಯತ್ನ ಮಾಡಿದ್ದೇವೆ. ಅವರಿಗೆ ಎಲ್ಲ ರೀತಿಯ ಸಹಕಾರವನ್ನು ಸರ್ಕಾರ ಕೊಡಲಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅನ್ಯಾಯದ ವಿರುದ್ಧ ಅವರ ಹೋರಾಟ ಮುಂದುವರಿಯಲಿ. ಸಂವಿಧಾನ ಪ್ರಕಾರ ಹೋರಾಟ ನಡೆಸಲಿ. ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯ ಮುಕ್ತ ಮಾಡಬೇಕು ಎನ್ನುವ ಉದ್ದೇಶ ಈಡೇರಿದೆ. ನಕ್ಸಲ್ ಮುಕ್ತ ಹೋರಾಟಕ್ಕೆ ಅನೇಕ ರಾಜ್ಯಗಳು ಶ್ರಮಿಸಿವೆ.
ಶರಣಾಗತಿ ಆಗಲು ಮುಂದೆ ಬಂದಿರುವ ಆರು ನಕ್ಸಲೀಯರ ಬೇಡಿಕೆಗಳನ್ನು ಜಿಲ್ಲಾಡಳಿತ ಈಡೇರಿಸಲಿದೆ. ಅವರ ವಿರುದ್ಧದ ಪ್ರಕರಣಗಳ ತನಿಖೆಗಾಗಿ ತ್ವರಿತ ನ್ಯಾಯಾಲಯ ಸ್ಥಾಪನೆ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

ನಕ್ಸಲ್ ಹೋರಾಟಗಾರರನ್ನು ಮುಖ್ಯವಾಹಿನಿಗೆ ತರುವ ಸರ್ಕಾರದ ಪ್ರಯತ್ನದಲ್ಲಿ ಸಹಕಾರ ನೀಡಿದ ‘ಶಾಂತಿಗಾಗಿ ನಾಗರಿಕ ವೇದಿಕ’ ಮತ್ತು ಪೊಲೀಸ್‌ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...