ಕರ್ನಾಟಕ ಬಜೆಟ್ | ತೊಗರಿ ಖರೀದಿಗೆ ಹೆಚ್ಚುವರಿ ಪ್ರೋತ್ಸಾಹಧನ: ಸಿಎಂ ಸಿದ್ದರಾಮಯ್ಯ

Date:

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುವುದು ಎಂದು 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಪ್ರತಿ ಕ್ವಿಂಟಾಲ್‌ಗೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿ ಪ್ರೋತ್ಸಾಹಧನ 450 ರೂ.ಗಳಂತೆ ಒಟ್ಟು 138 ಕೋಟಿ ರೂ. ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? Karnataka Budget 2025 | ಅಂಗನವಾಡಿ ಕಾರ್ಯಕರ್ತರು, ಅತಿಥಿ ಶಿಕ್ಷಕರಿಗೆ ಗೌರವ ಧನ ಹೆಚ್ಚಳ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಚ್ಚುವರಿ ಪ್ರೋತ್ಸಾಹಧನ ನೀಡುವುದರಿಂದ ತೊಗರಿ ಬೆಳೆಯುವ ಪ್ರಮುಖ ಜಿಲ್ಲೆಗಳಾದ ಕಲಬುರಗಿ, ಬೀದರ್‌, ಯಾದಗಿರಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಕೋಲಾರ, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಭಾಗದ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಈ ಹಿಂದೆ 2024ರ ಡಿಸೆಂಬರ್‌ನಲ್ಲಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್‌ ಅವರು, “ತೊಗರಿ ಬೆಳೆಗೆ ಬೆಂಬಲ ಬೆಲೆ ಹೆಚ್ಚಳ ಸಾಧ್ಯವಿಲ್ಲ. ಪರಿಹಾರ ನೀಡಲು ರಾಜ್ಯ ಸರ್ಕಾರಕ್ಕಾಗದು. ಆದರೆ ಬೆಂಬಲ ಬೆಲೆಯಡಿ ರೈತರ ತೊಗರಿ ಖರೀದಿಗೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದ್ದರು.

ಆದರೆ ಬೆಂಬಲ ಬೆಲೆ ಹೆಚ್ಚಿಸುವ ಬೇಡಿಕೆ ಅಧಿಕವಾದ ಬಳಿಕ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ರಾಜ್ಯ ಸರ್ಕಾರ ಕ್ವಿಂಟಲ್‌ಗೆ ಹೆಚ್ಚುವರಿ 450 ರೂಪಾಯಿ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 140 ಕೋಟಿ ರೂಪಾಯಿ ಒದಗಿಸಲಾಗುವುದು ಎಂದು 2025ರ ಜನವರಿಯಲ್ಲಿ ಘೋಷಿಸಿದ್ದರು.

ಅದರಂತೆ ರಾಜ್ಯದಲ್ಲಿ 330 ತೊಗರಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿತ್ತು. ರೈತರು ತಮ ಹತ್ತಿರದ ಪಿಎಸಿಎಸ್‌‍/ಎಫ್‌ಪಿಒ/ಟಿಅಪಿಸಿಎಂಎಸ್‌ಗಳಿಗೆ ಭೇಟಿ ನೀಡಿ ನೊಂದಣಿ ಮಾಡಿಕೊಂಡು ಬೆಂಬಲ ಬೆಲೆ ಯೋಜನೆಯ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನದ ಸುದುಪಯೋಗ ಪಡೆದುಕೊಳ್ಳುವಂತೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...